AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: 19 ಕೋಟಿ ರೂ.ಗೂ ಹೆಚ್ಚು ವಿದ್ಯುತ್ ಬಿಲ್ ಬಾಕಿ; ಕಾವೇರಿ ನೀರಾವರಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಟ್

ಈ ಹಿಂದೆ ಅಧಿಕಾರಿಗಳು ನೋಟಿಸ್ ನೀಡಿದ್ದರೂ ಕಾವೇರಿ ನೀರಾವರಿ ಘಟಕ ಬೇಜವಾಬ್ದಾರಿ ತೋರಿದ್ದಾರೆ. ಹೀಗಾಗಿ ಕಾವೇರಿ ನೀರಾವರಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಮೈಸೂರು: 19 ಕೋಟಿ ರೂ.ಗೂ ಹೆಚ್ಚು ವಿದ್ಯುತ್ ಬಿಲ್ ಬಾಕಿ; ಕಾವೇರಿ ನೀರಾವರಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಟ್
ವಿದ್ಯುತ್ ಶುಲ್ಕ ಬಾಕಿ
TV9 Web
| Edited By: |

Updated on:Jan 05, 2022 | 8:53 AM

Share

ಮೈಸೂರು: ಕೊನೆಗೂ ಕಾವೇರಿ ನೀರಾವರಿ ಘಟಕದ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಆಲಂಬೂರು ಗ್ರಾಮದಲ್ಲಿರುವ ಕಾವೇರಿ ನೀರಾವರಿ ಇಲಾಖೆ ಘಟಕ ಕಳೆದ ಎರಡು ವರ್ಷಗಳಿಂದ ವಿದ್ಯುತ್ ಶುಲ್ಕ (Electricity Bill) ಬಾಕಿ ಇಟ್ಟಿರುವ ಹಿನ್ನಲೆಯಲ್ಲಿ ಇಂದು ( ಜನವರಿ 05) ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. 19 ಕೋಟಿ ರೂಪಾಯಿಗೂ ಅಧಿಕ ಮೊತ್ತ ಬಾಕಿ ಇದೆ.  ಈ ಹಿಂದೆ ಅಧಿಕಾರಿಗಳು ನೋಟಿಸ್ ನೀಡಿದ್ದರೂ ಕಾವೇರಿ ನೀರಾವರಿ ಘಟಕ ಬೇಜವಾಬ್ದಾರಿ ತೋರಿದ್ದಾರೆ. ಹೀಗಾಗಿ ಕಾವೇರಿ ನೀರಾವರಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

2 ವರ್ಷಗಳಿಂದ ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.  ಡಿಸೆಂಬರ್ ತಿಂಗಳವರೆಗೆ 19,34,36,716 ರೂಪಾಯಿ ವಿದ್ಯುತ್​ ಬಿಲ್​ ಬಾಕಿ ಇದೆ. ಸೆಪ್ಟೆಂಬರ್‌ನಿಂದ ನೀರಾವರಿ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕಳಿಸಿದರು ಅಧಿಕಾರಿಗಳು ಈ ಬಗ್ಗೆ ಗಮನಹರಿಸಿಲ್ಲ. ಹೀಗಾಗಿ ವಿದ್ಯುತ್ ಕಡಿತಗೊಳಿಸುವುದಾಗಿ ಚೆಸ್ಕಾಂ (CHESCOM) ಅಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು. ಆದರೆ ಈ ಬಗ್ಗೆ ಗಮನಹರಿಸದೆ ನೀರಾವರಿ ಇಲಾಖೆ ನಿರ್ಲಕ್ಷ್ಯ ತೋರಿದೆ, ಹೀಗಾಗಿ ವಿದ್ಯುತ್​ ಸಂಪರ್ಕ ಕಡಿತ ಮಾಡಲಾಗಿದೆ.

ಕಳೆದ ವರ್ಷ ಆಗಸ್ಟ್​ 31 ರಂದು ಕೂಡ ವಿದ್ಯುತ್​ ಬಿಲ್​ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು ಹಲವು ಸಮಯದಿಂದ ವಿದ್ಯುತ್​ ಬಿಲ್​ ಪಾವತಿಸದೇ ಬಾಕಿ ಉಳಿಸಿಕೊಂಡ ಮೈಸೂರಿನ ಸರ್ಕಾರಿ ಕಚೇರಿಗಳಿಗೆ ಚೆಸ್ಕಾಂ ಶಾಕ್​ ನೀಡಿತ್ತು. ಮೈಸೂರು ಜಿಲ್ಲಾಧಿಕಾರಿ ತಾಲ್ಲೂಕು ಕಚೇರಿ ಸೇರಿ ಒಟ್ಟು 20ಕ್ಕೂ ಹೆಚ್ಚು ಸರ್ಕಾರಿ ಕಚೇರಿಗಳಿಗೆ ಆಗಸ್ಟ್​ 31 ರಂದು ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಬಾಕಿ ಬಿಲ್ ಪಾವತಿಸುವ ತನಕವೂ ವಿದ್ಯುತ್ ಸ್ಥಗಿತಗೊಳಿಸಲು ಚೆಸ್ಕಾಂ ಅಧಿಕಾರಿಗಳು ನಿರ್ಧರಿಸಿದ್ದರು. ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡ ಬಿಲ್​ ಪಾವತಿಸುವಂತೆ ಮನವಿ ಮಾಡಿದರೂ ಸ್ಪಂದಿಸದ ಇಲಾಖಾ ಕಚೇರಿಗಳ ಪಟ್ಟಿಮಾಡಿಕೊಂಡ ಚೆಸ್ಕಾಂ ಈ ರೀತಿಯ ನಿರ್ಧಾರ ತೆಗೆದುಕೊಂಡಿತ್ತು.

ಚೆಸ್ಕಾಂನ ನಿರ್ಧಾರದಿಂದಾಗಿ ಮೈಸೂರು ಸರ್ಕಾರಿ ಕಚೇರಿಗಳು ಕಗ್ಗತ್ತಲಲ್ಲಿ ಮುಳುಗಿತ್ತು. ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನ ಸೌಧ, ಸಬ್ ರಿಜಿಸ್ಟಾರ್​ ಕಚೇರಿ, PWD, ಸಣ್ಣನೀರಾವರಿ, ಮಹಾರಾಣಿ ಕಾಲೇಜು ಸೇರಿದಂತೆ ಬೇರೆ ಬೇರೆ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಸ್ಥಗಿತಗೊಂಡಿತ್ತು. ಇದರಿಂದಾಗಿ ಕಚೇರಿಗಳ ಕೆಲಸದಲ್ಲಿ ವ್ಯತ್ಯಯವಾಗುತ್ತಿದ್ದು, ಅಧಿಕಾರಿಗಳು ಹಾಗೂ ಕೆಲಸ ಮಾಡಿಸಿಕೊಳ್ಳಲು ಬಂದ ಜನ ಸಾಮಾನ್ಯರು ಪರದಾಡುವಂತಾಗಿತ್ತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಒಟ್ಟು 5 ವಿದ್ಯುತ್​ ಮೀಟರ್​ಗಳಿಂದ 3 ಲಕ್ಷದ 50 ಸಾವಿರ ರೂಪಾಯಿ ಬಿಲ್ ಬಾಕಿ ಇತ್ತು. ಮಿನಿ ವಿಧಾನಸೌಧದಲ್ಲಿ ಒಟ್ಟು 6 ಮೀಟರ್​ಗಳಿಂದ 3 ಲಕ್ಷದ 90 ಸಾವಿರ ರೂಪಾಯಿ ಬಿಲ್ ಬಾಕಿ ಉಳಿದಿತ್ತು. PWD ಕಚೇರಿಯಲ್ಲಿ 56 ಸಾವಿರ ರೂ, ಸಣ್ಣ ನೀರಾವರಿ ಇಲಾಖೆ 18 ಸಾವಿರ ರೂ ಬಿಲ್ ಬಾಕಿ ಇದೆ ಎನ್ನಲಾಗಿದೆ. ವಿದ್ಯುತ್​ ಸಂಪರ್ಕ ಕಡಿತದಿಂದಾಗಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಕೆಲಸವೂ ಸ್ಥಗಿತವಾಗಿದ್ದು, ತಾಲ್ಲೂಕು ಕಚೇರಿಯಲ್ಲಿ ಕೆಲಸ ಸ್ಥಗಿತದಿಂದ ಜನರು ಪರದಾಡಬೇಕಾಗಿತ್ತು.

ಇದನ್ನೂ ಓದಿ:

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​

ಬಿಲ್​ ಪಾವತಿಸದ ಕಾರಣ ಮೈಸೂರು ಜಿಲ್ಲಾಧಿಕಾರಿ ಕಚೇರಿ ಸೇರಿ ವಿವಿಧ ಸರ್ಕಾರಿ ಕಚೇರಿಗಳಿಗೆ ವಿದ್ಯುತ್​ ಸಂಪರ್ಕ ಕಡಿತ

Published On - 8:45 am, Wed, 5 January 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?