ಮೈಸೂರು: 2 ವರ್ಷಗಳಿಂದ ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್(Electricity bill) ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ವಿಭಾಗದ ಕಾವೇರಿ ನೀರಾವರಿ ನಿಗಮದ ವಿದ್ಯುತ್ ಬಿಲ್ ಪಾವತಿಸದೆ ನಿರ್ಲಕ್ಷ್ಯ ವಹಿಸಿದೆ. ಡಿಸೆಂಬರ್ ತಿಂಗಳವರೆಗೆ 19,34,36,716 ರೂಪಾಯಿ ವಿದ್ಯುತ್ ಬಿಲ್ ಬಾಕಿ ಇದೆ. ಸೆಪ್ಟೆಂಬರ್‌ನಿಂದ ನೀರಾವರಿ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕಳಿಸಿದರು ಅಧಿಕಾರಿಗಳು ಈ ಬಗ್ಗೆ ಗಮನಹರಿಸಿಲ್ಲ. ಹೀಗಾಗಿ ವಿದ್ಯುತ್ ಕಡಿತಗೊಳಿಸುವುದಾಗಿ ಚೆಸ್ಕಾಂ (CHESCOM) ಅಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಕಳೆದ ವರ್ಷ ಆಗಸ್ಟ್ 31 ರಂದು ಕೂಡ ವಿದ್ಯುತ್ ಬಿಲ್ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು
ಹಲವು ಸಮಯದಿಂದ ವಿದ್ಯುತ್ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡ ಮೈಸೂರಿನ ಸರ್ಕಾರಿ ಕಚೇರಿಗಳಿಗೆ ಚೆಸ್ಕಾಂ ಶಾಕ್ ನೀಡಿತ್ತು. ಮೈಸೂರು ಜಿಲ್ಲಾಧಿಕಾರಿ ತಾಲ್ಲೂಕು ಕಚೇರಿ ಸೇರಿ ಒಟ್ಟು 20ಕ್ಕೂ ಹೆಚ್ಚು ಸರ್ಕಾರಿ ಕಚೇರಿಗಳಿಗೆ ಆಗಸ್ಟ್ 31 ರಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಬಾಕಿ ಬಿಲ್ ಪಾವತಿಸುವ ತನಕವೂ ವಿದ್ಯುತ್ ಸ್ಥಗಿತಗೊಳಿಸಲು ಚೆಸ್ಕಾಂ ಅಧಿಕಾರಿಗಳು ನಿರ್ಧರಿಸಿದ್ದರು. ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡ ಬಿಲ್ ಪಾವತಿಸುವಂತೆ ಮನವಿ ಮಾಡಿದರೂ ಸ್ಪಂದಿಸದ ಇಲಾಖಾ ಕಚೇರಿಗಳ ಪಟ್ಟಿಮಾಡಿಕೊಂಡ ಚೆಸ್ಕಾಂ ಈ ರೀತಿಯ ನಿರ್ಧಾರ ತೆಗೆದುಕೊಂಡಿತ್ತು.
ಚೆಸ್ಕಾಂನ ನಿರ್ಧಾರದಿಂದಾಗಿ ಮೈಸೂರು ಸರ್ಕಾರಿ ಕಚೇರಿಗಳು ಕಗ್ಗತ್ತಲಲ್ಲಿ ಮುಳುಗಿತ್ತು. ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನ ಸೌಧ, ಸಬ್ ರಿಜಿಸ್ಟಾರ್ ಕಚೇರಿ, PWD, ಸಣ್ಣನೀರಾವರಿ, ಮಹಾರಾಣಿ ಕಾಲೇಜು ಸೇರಿದಂತೆ ಬೇರೆ ಬೇರೆ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಇದರಿಂದಾಗಿ ಕಚೇರಿಗಳ ಕೆಲಸದಲ್ಲಿ ವ್ಯತ್ಯಯವಾಗುತ್ತಿದ್ದು, ಅಧಿಕಾರಿಗಳು ಹಾಗೂ ಕೆಲಸ ಮಾಡಿಸಿಕೊಳ್ಳಲು ಬಂದ ಜನ ಸಾಮಾನ್ಯರು ಪರದಾಡುವಂತಾಗಿತ್ತು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಒಟ್ಟು 5 ವಿದ್ಯುತ್ ಮೀಟರ್ಗಳಿಂದ 3 ಲಕ್ಷದ 50 ಸಾವಿರ ರೂಪಾಯಿ ಬಿಲ್ ಬಾಕಿ ಇತ್ತು. ಮಿನಿ ವಿಧಾನಸೌಧದಲ್ಲಿ ಒಟ್ಟು 6 ಮೀಟರ್ಗಳಿಂದ 3 ಲಕ್ಷದ 90 ಸಾವಿರ ರೂಪಾಯಿ ಬಿಲ್ ಬಾಕಿ ಉಳಿದಿತ್ತು. PWD ಕಚೇರಿಯಲ್ಲಿ 56 ಸಾವಿರ ರೂ, ಸಣ್ಣ ನೀರಾವರಿ ಇಲಾಖೆ 18 ಸಾವಿರ ರೂ ಬಿಲ್ ಬಾಕಿ ಇದೆ ಎನ್ನಲಾಗಿದೆ. ವಿದ್ಯುತ್ ಸಂಪರ್ಕ ಕಡಿತದಿಂದಾಗಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಕೆಲಸವೂ ಸ್ಥಗಿತವಾಗಿದ್ದು, ತಾಲ್ಲೂಕು ಕಚೇರಿಯಲ್ಲಿ ಕೆಲಸ ಸ್ಥಗಿತದಿಂದ ಜನರು ಪರದಾಡಬೇಕಾಗಿತ್ತು.
ಇದನ್ನೂ ಓದಿ:
ಉರಿ ಜಲವಿದ್ಯುತ್ ಸ್ಥಾವರಗಳ ಮೇಲೆ ದಾಳಿ ನಡೆಸಲು ಸಿದ್ಧವಾಗಿದೆ ಹೊಸದೊಂದು ಉಗ್ರ ಸಂಘಟನೆ; ಸ್ಥಳದಲ್ಲಿ ಬಿಗಿ ಭದ್ರತೆ
ತಿಂಗಳಿಗೆ 20,401 ರೂಪಾಯಿ ವಿದ್ಯುತ್ ಬಿಲ್; ತುಮಕೂರಿನ ವ್ಯಕ್ತಿಗೆ ಬಿಲ್ ಮೂಲಕವೇ ಶಾಕ್ ಕೊಟ್ಟ ಬೆಸ್ಕಾಂ
Published On - 11:50 am, Sun, 2 January 22