ಬಿಲ್ ಪಾವತಿ ಮಾಡದಿದ್ದರೆ ವಿದ್ಯುತ್ ಸಂಪರ್ಕ ಕಡಿತ ಅನಿವಾರ್ಯ; ಪರೋಕ್ಷವಾಗಿ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಟಾಂಗ್

| Updated By: sandhya thejappa

Updated on: Jan 09, 2022 | 9:03 AM

ವಿದ್ಯುತ್ ಸಂಪರ್ಕ ಕಡಿತ ಮಾಡಿದಕ್ಕೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಚೆಸ್ಕಾಂ ಅಧಿಕಾರಿ ವಿರುದ್ಧ ಗರಂ ಆಗಿದ್ದರು. ಚೆಸ್ಕಾಂ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಬಿಲ್ ಪಾವತಿ ಮಾಡದಿದ್ದರೆ ವಿದ್ಯುತ್ ಸಂಪರ್ಕ ಕಡಿತ ಅನಿವಾರ್ಯ; ಪರೋಕ್ಷವಾಗಿ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಟಾಂಗ್
ಚೆಸ್ಕಾಂ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ
Follow us on

ಮೈಸೂರು: ಬಿಲ್ ಪಾವತಿ ಮಾಡದಿದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡುವುದು ಅನಿವಾರ್ಯ ಅಂತ ಚೆಸ್ಕಾಂ (CHESCOM) ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ (Yathindra Siddaramaiah) ಟಾಂಗ್ ಕೊಟ್ಟಿದೆ. ಅಧಿಕಾರಿ, ನೌಕರರ ವಿರುದ್ಧ ಅವಾಚ್ಯ ಶಬ್ದ ಬಳಸಬೇಡಿ. ಅಧಿಕಾರಿಗಳು, ನೌಕರರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿದ್ಯುತ್ ಸಂಪರ್ಕ ಕಡಿತ ನಮ್ಮ ಮೊದಲ ಆಯ್ಕೆಯಲ್ಲ ಅಂತ ಚೆಸ್ಕಾಂ ಅಧೀಕ್ಷಕ ಅಭಿಯಂತರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ವಿದ್ಯುತ್ ಸಂಪರ್ಕ ಕಡಿತ ಮಾಡಿದಕ್ಕೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಚೆಸ್ಕಾಂ ಅಧಿಕಾರಿ ವಿರುದ್ಧ ಗರಂ ಆಗಿದ್ದರು. ಚೆಸ್ಕಾಂ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ‘ಬಾಯಿ ಮುಚ್ಚಿಕೊಳ್ಳಿ, ಅಧಿಕ ಪ್ರಸಂಗ ಮಾಡಬೇಡ. ಏನ್ ರೀ ನಿಮ್ಮ ಹೆಸರು’ ಎಂದು ಏರು ಧ್ವನಿಯಲ್ಲಿ ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದರು. ನೀವು ಸರ್ಕಾರಿ ನೌಕರರಾಗುವುದಕ್ಕೆ ಅನ್ಫಿಟ್ ಎಂದು ಕಿಡಿಕಾರಿದ್ದ ಶಾಸಕ, ನೀವು ಇರುವುದು ಜನರ ಸಮಸ್ಯೆಯನ್ನು ಆಲಿಸುವುದಕ್ಕೆ. ವಿದ್ಯುತ್ ಸಂಪರ್ಕ ಕಡಿತ ಮಾಡುವುದಕ್ಕೆ ಅಲ್ಲ ಅಂತ ಗರಂ ಆಗಿದ್ದರು. ಏರು ಧ್ವನಿಯಲ್ಲಿ ಚೆಸ್ಕಾಂ ಅಧಿಕಾರಿಗೆ ಡಾ.ಯತೀಂದ್ರ ತರಾಟೆ ತೆಗೆದುಕೊಂಡಿರುವ ಘಟನೆ ವರುಣಾ ಕ್ಷೇತ್ರದ ತಗಡೂರು ಗ್ರಾಮದಲ್ಲಿ ನಡೆದಿತ್ತು.

ಸ್ಥಳೀಯರ ದೂರು
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ವರುಣಾ ಕ್ಷೇತ್ರದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆಂದು ಸ್ಥಳೀಯರು ದೂರು ನೀಡಿದ ಹಿನ್ನೆಲೆ ಅಧಿಕಾರಿ ವಿರುದ್ಧ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದರು. ನೀವು ದೊಡ್ಡ ದೊಡ್ಡ ಫ್ಯಾಕ್ಟರಿಗಳಲ್ಲಿ ಬಿಲ್ ವಸೂಲಿ ಮಾಡಿ. ಜನರು 500 ರೂಪಾಯಿ ಬಿಲ್ ಕೊಟ್ಟರೂ ತೆಗೆದುಕೊಳ್ಳಿ. ಜನರ ಬಳಿ ಕಂತು ಲೆಕ್ಕದಲ್ಲಿ ಹಣ ಪಡೆಯಿರಿ. ಆದರೆ ವಿದ್ಯುತ್ ಸಂಪರ್ಕ ಕಡಿತ ಮಾಡದಂತೆ ತಾಕೀತು ಮಾಡಿದ್ದರು.

ಹೀಗೆ ಚೆಸ್ಕಾಂ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆ ಇಂದು ಚೆಸ್ಕಾಂ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಈ ರೀತಿ ಮಾಡದಂತೆ ಚೆಸ್ಕಾಂ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಮಾಧ್ಯಮ ಪ್ರಕಟಣೆ

ಇದನ್ನೂ ಓದಿ

ಬೆಂಗಳೂರು: ನಗರದ ಈ ಪ್ರದೇಶಗಳಲ್ಲಿ ಇಂದಿನಿಂದ ಜ.12ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ; ಸಂಪೂರ್ಣ ಮಾಹಿತಿ ಇಲ್ಲಿದೆ

Millets Production In Karnataka: ಕರ್ನಾಟಕವು ರಾಗಿಯಂತಹ ಕಿರುಧಾನ್ಯ ಉತ್ಪಾದನೆ ಹೆಚ್ಚಿಸಬೇಕೆಂದ ಕೇಂದ್ರ ಆಹಾರ ಕಾರ್ಯದರ್ಶಿ

Published On - 9:02 am, Sun, 9 January 22