AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವು

ಮೈಸೂರಿನಲ್ಲಿ ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ.

Mysore News: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವು
ಮೃತ ಲೈನ್​ಮ್ಯಾನ್​
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jul 23, 2023 | 7:45 AM

Share

ಮೈಸೂರು: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು(Mysore) ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ. ಟ್ರಾನ್ಸ್​ಫಾರ್ಮರ್​​ ದುರಸ್ತಿ ವೇಳೆ ವಿದ್ಯುತ್​ ಹರಿದು ಈ ಅವಘಡ ನಡೆದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಮೃತ ಸಂತೋಷ್ ಪೋಷಕರು, ಸ್ನೇಹಿತರು ಆರೋಪಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸಿಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನ ಡಿಕ್ಕಿ ಪಾದಚಾರಿ ವೃದ್ದ ಸಾವು

ಮೈಸೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿಯೋರ್ವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದಲ್ಲಿ ನಡೆದಿದೆ. ನರಸಿಂಹ ಸ್ವಾಮಿ‌ ತಿಟ್ಟಿ‌ನ ಬಳಿ ನಡೆದುಕೊಂಡು ಹೋಗುವಾಗ ಈ ಅವಘಡ ನಡೆದಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಇನ್ನು ಮೃತರ ಬಳಿ ಹೆಚ್​ಡಿ ಕೋಟೆಯಿಂದ ಹುಣಸೂರಿಗೆ ಪ್ರಯಾಣ ಮಾಡಿದ ಬಸ್ ಟಿಕೆಟ್ ಪತ್ತೆಯಾಗಿದ್ದು, ಸದ್ಯ ಹುಣಸೂರು ಶವಾಗಾರದಲ್ಲಿರುವ ಮೃತದೇಹ ಇಡಲಾಗಿದೆ. ಇದೀಗ ಮೃತರ ಗುರುತು ಪತ್ತೆ ಹಚ್ಚಲು ಸಹಾಯ ಮಾಡುವಂತೆ ಸಾರ್ವಜನಿಕರಿಗೆ ಹುಣಸೂರು ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ದೇವನಹಳ್ಳಿ: ವಾಟರ್​ ಹೀಟರ್​​​ನಿಂದ ವಿದ್ಯುತ್​ ಪ್ರವಹಿಸಿ ತಾಯಿ, 4 ವರ್ಷದ ಮಗು ಸಾವು

ಬೈಕ್​​ ಕದ್ದ ಕಳ್ಳರನ್ನ 24 ಗಂಟೆಯಲ್ಲಿ ಬಂಧಿಸಿದ ಬೀದರ್​ ಪೊಲೀಸ್​

ಬೀದರ್: ಬೈಕ್ ಕಳ್ಳತನವಾದ 24 ಗಂಟೆಯಲ್ಲಿಯೇ ಬೈಕ್ ಕಳ್ಳರನ್ನ ಬಂಧಿಸುವಲ್ಲಿ ಬೀದರ್ ಪಟ್ಟಣದ ಗಾಂಧಿಗಂಜ್ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಎರಡು ಬೈಕ್​ನ್ನು ಕಳ್ಳರು ಕದ್ದು ಪರಾರಾರಿಯಾಗಿದ್ದರು. ಬೈಕ್ ಕಳ್ಳತನವಾಗುತ್ತಿದ್ದಂತೆ ಬೈಕ್​ನ ಮಾಲೀಕರು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಬೈಕ್ ಮಾಲೀಕರು ದೂರಿನ ಮೇರೆಗೆ ಬೈಕ್ ಕಳ್ಳತನವಾದ 24 ಗಂಟೆಯೊಳಗೆ ಕದ್ದ ಬೈಕ್​ನ್ನ ಪತ್ತೆ ಹಚ್ಚಿದ್ದು, ಪೊಲೀಸರ ಈ ಕಾರ್ಯಕ್ಕೆ ಎಸ್ಪಿ ಅವರು ಪ್ರಶಂಸೆ ವ್ಯಕ್ತ ಪಡಿಸಿ, ಸೂಕ್ತ ಬಹುಮಾನ ಘೋಷಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:14 am, Sun, 23 July 23

ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ