ಪೋಕ್ಸೋ ಪ್ರಕರಣದ ಆರೋಪಿ ಮುರಘಾ ಶ್ರೀ ವಿರುದ್ದ ನೇರವಾಗಿ ಪ್ರಧಾನಿ, ರಾಷ್ಟ್ರಪತಿಗೆ ಪತ್ರ ಬರೆದ ಸಂತ್ರಸ್ತ ಬಾಲಕಿಯರು
ತಮಗಾದ ದೌರ್ಜನ್ಯದ ಬಗ್ಗೆ ವಿವರಿಸಿ, ತಮಗೆ ನ್ಯಾಯ ಕೊಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಂತ್ರಸ್ತ ಬಾಲಕಿಯರು ಪತ್ರ ಬರೆದಿದ್ದಾರೆ.
ಮೈಸೂರು/ ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ (pocso case) ಬಂಧನಕ್ಕೀಡಾಗಿರುವ ಮುರಘಾ ಶ್ರೀ (Dr. Shivamurthy Murugha Sharana) ವಿರುದ್ದ ನೇರವಾಗಿ ಪ್ರಧಾನಿ, ರಾಷ್ಟ್ರಪತಿಗೆ ಪತ್ರ ಬರೆದಿರುವ ಸಂತ್ರಸ್ತ ಬಾಲಕಿಯರು ತಮಗೆ ನ್ಯಾಯ ದೊರಕಿಸಿಕೊಡುವಲ್ಲಿ ನೆರವಾಗುವಂತೆ ಕೋರಿದ್ದಾರೆ. ಒಡನಾಡಿ ಸಂಸ್ಥೆ ಸಂಸ್ಥಾಪಕ ಸ್ಟ್ಯಾನ್ಲಿ (Odanadi stanley) ಈ ಕುರಿತು ಟಿವಿ 9 ಗೆ ಮಾಹಿತಿ ನೀಡಿದ್ದಾರೆ.
ತಮಗಾದ ದೌರ್ಜನ್ಯದ ಬಗ್ಗೆ ವಿವರಿಸಿ, ತಮಗೆ ನ್ಯಾಯ ಕೊಡಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ (President Droupadi Murmu) ಸಂತ್ರಸ್ತ ಬಾಲಕಿಯರು ಪತ್ರ ಬರೆದಿದ್ದಾರೆ. ಪ್ರಧಾನಿ ಮತ್ತು ರಾಷ್ಟ್ರಪತಿ ತಮ್ಮ ನೋವಿಗೆ ಸ್ಪಂದಿಸುತ್ತಾರೆ ಎಂದು ಬಾಲಕಿಯರು ಮನವಿ ಪತ್ರದಲ್ಲಿ ವಿಶ್ವಾಸ ವ್ಯಕ್ತಪಡಿಸಿರುವುದಾಗಿ ಅವರು ಹೇಳಿದ್ದಾರೆ.