ಸಿಎಂ ತವರಲ್ಲಿ ಕಾಲರಾ ಪತ್ತೆ; ಒಂದೇ ಗ್ರಾಮದ ಮೂವರಲ್ಲಿ ಕಾಣಿಸಿಕೊಂಡ ರೋಗ​

ಇದೇ ಏಪ್ರಿಲ್​ 06 ರಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ 49 ವೈದ್ಯಕೀಯ ​ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ಅಂಶ ಪತ್ತೆಯಾಗಿತ್ತು. ಇದರ ಬೆನ್ನಲ್ಲೆ ವರುಣ ಕ್ಷೇತ್ರದ ತಗಡೂರು(Tagadur) ಗ್ರಾಮದ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.

ಸಿಎಂ ತವರಲ್ಲಿ ಕಾಲರಾ ಪತ್ತೆ; ಒಂದೇ ಗ್ರಾಮದ ಮೂವರಲ್ಲಿ ಕಾಣಿಸಿಕೊಂಡ ರೋಗ​
ಸಿಎಂ ತವರಲ್ಲಿ ಕಾಲರಾ ಪತ್ತೆ;
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:May 18, 2024 | 9:05 PM

ಮೈಸೂರು, ಮೇ.18: ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿಯೇ ಕಾಲರಾ(Cholera) ಪತ್ತೆಯಾಗಿದೆ. ವರುಣ ಕ್ಷೇತ್ರದ ತಗಡೂರು(Tagadur) ಗ್ರಾಮದ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ. ಗ್ರಾಮದ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿತ್ತು. ಅದರಂತೆ ಕಳೆದ ಒಂದು ವಾರದಿಂದ ಸತತ 114 ಜನರನ್ನ ಪರೀಕ್ಷೆಗೊಳಪಡಿಸಲಾಗಿತ್ತು. ಈ ವೇಳೆ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.

ಬೋರ್​ವೆಲ್ ನೀರಿನಿಂದ ಕಾಲರಾ ಬಂದಿರುವ ಶಂಕೆ

ಇನ್ನು ಕಾಲರಾ ಪತ್ತೆಯಾಗುತ್ತಿದ್ದಂತೆ ಗ್ರಾಮಕ್ಕೆ ಡಿಎಚ್ಒ ಶಿವಕುಮಾರಸ್ವಾಮಿ ಸೇರಿದಂತೆ ಹಿರಿಯ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಬೋರ್​ವೆಲ್ ನೀರಿನಿಂದ ಕಾಲರ ಬಂದಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಗ್ರಾಮದ ನಾಲ್ಕು ಬೋರ್​ವೆಲ್ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದ್ದು, ನೀರಿನ ಸ್ಯಾಂಪಲ್​ನ್ನು ಆರೋಗ್ಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ. ಗ್ರಾಮದ ಸಮುದಾಯ ಆಸ್ಪತ್ರೆಯಲ್ಲಿ ಮುಂಜಾಗೃತ ಕ್ರಮವಾಗಿ 6 ಜನ ವೈದ್ಯರು, ಆಂಬ್ಯುಲೆನ್ಸ್ ವಾಹನ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:Cholera: ಬೆಂಗಳೂರಿನಲ್ಲಿ ಮತ್ತೊಂದು ಕಾಲರಾ ಪ್ರಕರಣ ಪತ್ತೆ, ರೋಗಿಗಳ ಸಂಖ್ಯೆ 41ಕ್ಕೆ ಏರಿಕೆ

ಏ.06 ರಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ 49 ವೈದ್ಯಕೀಯ ​ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ಅಂಶ ಪತ್ತೆಯಾಗಿತ್ತು. ಹೌದು, ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡ ಹಿನ್ನಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಲೆ ಕಾಲರಾ ಪತ್ತೆಯಾಗಿತ್ತು. ಇದರ ಬೆನ್ನಲ್ಲೆ ಇದೀಗ ವರುಣ ಕ್ಷೇತ್ರದ ತಗಡೂರು ಗ್ರಾಮದ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Sat, 18 May 24

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ