Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ? ಸ್ಫೋಟಕ ಮಾಹಿತಿ ಬಹಿರಂಗ

ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ವಿವಾದದ ಗೂಡಲ್ಲಿ ಸಿಲುಕಿದ್ದಾರೆ.. ಈ ಹಿಂದೆ KSRTC ಡ್ರೈವರ್​​​ ಆತ್ಮಹತ್ಯೆ ಯತ್ನದ ಕೇಸ್​​ನಲ್ಲಿ ಸಚಿವರ ಹೆಸರು ಕೇಳಿಬಂದಿತ್ತು. ಇದೀಗ ಸಹಾಯಕ ಕೃಷಿ ನಿರ್ದೇಶಕರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ಆರೋಪ ಸಖತ್​ ಸದ್ದು​​ ಮಾಡುತ್ತಿದೆ. ಇದೀಗ ರಾಜಕೀಯ ಸಂಚಲನ ಮೂಡಿಸ್ತಿದೆ. ಇದ್ರ ಮಧ್ಯೆ ಈ ಪ್ರಕರಣದ ತನಿಖೆಯನ್ನ ಸಿಐಡಿ ನಡೆಸುತ್ತಿದ್ದು, ಅಧಿಕಾರಿಗಳು ಅಖಾಡಕ್ಕಿಳಿದಿದ್ದು, ಇದೀಗ ರಾಜ್ಯಪಾಲರಿಗೆ ಆ ಪತ್ರ ಎಲ್ಲಿಂದ ರವಾನೆಯಾಗಿದೆ ಎನ್ನುವ ಮೂಲವನ್ನು ಪತ್ತೆ ಮಾಡಿದ್ದಾರೆ.

ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ? ಸ್ಫೋಟಕ ಮಾಹಿತಿ ಬಹಿರಂಗ
ಮೈಸೂರಿನ ಅಂಚೆಕಚೇರಿಯಲ್ಲಿ ಸಿಐಡಿ ತಂಡ
Follow us
ಪ್ರಶಾಂತ್​ ಬಿ.
| Updated By: ರಮೇಶ್ ಬಿ. ಜವಳಗೇರಾ

Updated on:Aug 10, 2023 | 8:04 AM

ಮಂಡ್ಯ/ಮೈಸೂರು (ಆಗಸ್ಟ್ 10):  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ(N Chaluvaraya Swamy) ಸಚಿವರಾಗಿ ಇನ್ನೂ 3 ತಿಂಗಳು ಕಳೆದಿಲ್ಲ. ಆಗಲೇ ಸಚಿವರನ್ನ ಒಂದಿಲ್ಲೊಂದು ವಿವಾದಗಳು ಸುತ್ತಿಕೊಳ್ಳುತ್ತಿವೆ. ಕೆಲವು ದಿನಗಳ ಹಿಂದೆ KSRTC ಚಾಲಕ‌ನೊಬ್ಬನ ಆತ್ಮಹತ್ಯೆಗೆ ಯತ್ನಿಸಲು ಕೃಷಿ ಸಚಿವರು ಕಾರಣ ಎಂದು ಆರೋಪಿಸಲಾಗಿತ್ತು. ಇದೀಗ ಮಂಡ್ಯ(Mandya) ಜಿಲ್ಲೆಯ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರಿಗೆ ಸಚಿವರು ಹಣಕ್ಕೆ(Bribe) ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ(governor )ಪತ್ರ ಬರೆಯಲಾಗಿದ್ದು, ಈ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡು, ಆಡಳಿತ ಪಕ್ಷ ಮತ್ತು ವಿಪಕ್ಷಗಳ ಮಧ್ಯ ಜಟಾಪಟಿ ಸೃಷ್ಟಿಸಿದೆ. ಇದರ ಮಧ್ಯೆ ಆರೋಪದ ಸತ್ಯಸತ್ಯತೆ ತಿಳಿಯಲು ರಾಜ್ಯ ಸರ್ಕಾರ, ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಿದೆ. ಪತ್ರದ ಸತ್ಯಾಸತ್ಯತೆ ಹೊರಗೆ ತರಲು ನಿನ್ನೆಯಿಂದಲೇ CID ಅಧಿಕಾರಿಗಳು ಫಿಲ್ಡೀಗಿಳಿದಿದ್ದು, ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ ಎನ್ನುವ ಮಾಹಿತಿ ಸಿಕ್ಕಿದೆ.

ಇದನ್ನೂ ಒದಿ: ನನ್ನ ವಿರುದ್ಧ ರಾಜ್ಯಪಾಲರಿಗೆ ಬರೆದ ಪತ್ರ ನಕಲಿ: ಚಲುವರಾಯಸ್ವಾಮಿ

ಸಿಐಡಿ ಐಜಿಪಿ ಪ್ರವೀಣ್ ಮಧುಕರ್ ಪವಾರ್ ನೇತೃತ್ವದಲ್ಲಿ ನಿನ್ನೆ (ಆಗಸ್ಟ್ 09) ಮಂಡ್ಯದ ಕೃಷಿ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸುಮಾರು ಅರ್ಧ ಗಂಟೆಗಳು ಕಚೇರಿಯಲ್ಲಿ ಪರಿಶೀಲಿಸಿ, ಜಂಟಿ ನಿರ್ದೇಶಕ ಅಶೋಕ್​​​​​ರಿಂದಲೂ ಮಾಹಿತಿ ಪಡೆದುಕೊಂಡರು. ಅಷ್ಟೇ ಅಲ್ಲದೇ ರಾಜ್ಯಪಾಲರಿಗೆ ಬರೆದಿದ್ದಾರೆ ಎನ್ನಲಾದ ಪತ್ರ ಪೋಸ್ಟ್ ಆಗಿರುವುದು ಮೈಸೂರಿನ ಸರಸ್ವತಿಪುರಂ ಅಂಚೆ ಕಚೇರಿಯಿಂದ ಎಂದು ತಿಳಿದುಬಂದಿದೆ. ಹೀಗಾಗಿ ಸಿಐಡಿ ಅಧಿಕಾರಿಗಳು ಮೈಸೂರಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜುಲೈ 14ರಂದು ಮೈಸೂರಿನ ಸರಸ್ವತಿಪುರಂ ಅಂಚೆ ಕಚೇರಿಯಿಂದ ರಾಜಭವನಕ್ಕೆ ಪತ್ರ ರವಾನೆಯಾಗಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಸಿಐಡಿ ಅಧಿಕಾರಿಗಳು ಸತತ ಒಂದು ಗಂಟೆ ಕಾಲ ಅಂಚೆ ಕಚೇರಿ ಸಿಬ್ಬಂದಿ ಬಳಿ ಮಾಹಿತಿ ಪಡೆದುಕೊಂಡು ದಾಖಲೆಗಳನ್ನು ತೆಗೆದುಕೊಂಡು ತೆರೆಳಿದ್ದಾರೆ. ಅಲ್ಲದೇ ಮತ್ತಷ್ಟು ದಾಖಲೆ ಒದಗಿಸುವಂತೆ ಅಂಚೆಕಚೇರಿ ಸಿಬ್ಬಂದಿಗೆ ಸೂಚನೆ ನೀಡಿದ್ದು,  ಪತ್ರ ಯಾರು ಬರೆದರು, ನಕಲಿನಾ ಅಥವಾ ಅಸಲಿನಾ ಎಂಬ ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ.

ಸಿಐಡಿ ಅಧಿಕಾರಿಗಳಿಗೆ ನಿರಾಸೆ

ಇನ್ನು ಯಾರು ಪತ್ರ ಬಂದು ಪೋಸ್ಟ್ ಮಾಡಿದ್ದಾರೆ ಎಂದು ಸಿಐಡಿ ಅಧಿಕಾರಿಗಳು, ಮೈಸೂರಿನ ಸರಸ್ವತಿ ಪುರಂ ಪೋಸ್ಟ್ ಆಫಿಸ್ ಸಿಸಿಟಿವಿ ಪರಿಶೀಲನೆ ಮಾಡಿದ್ದಾರೆ. ಆದ್ರೆ, ಅಂದಿನ ಅಂದರೆ ಪತ್ರ ಪೋಸ್ಟ್ ಮಾಡಿದ್ದ(ಜುಲೈ 14) ದಿನದ ವೀಡಿಯೋ ಇಲ್ಲ. ಅಂದಿನ ದಿನದ ವೀಡಿಯೋ ಓವರ್ ಲ್ಯಾಪ್ ಆಗಿದ್ದರಿಂದ ಫುಟೇಜ್ ಸಿಕ್ಕಿಲ್ಲ. ಇದರಿಂದ ಸಿಐಡಿ ಅಧಿಕಾರಿಗಳಿಗೆ ನಿರಾಸೆಯಾಗಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:49 am, Thu, 10 August 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​