AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ಮೈಸೂರಿನ ಹೆಬ್ಬಾಳದಲ್ಲಿ ಸಿನಿಮೀಯ ರೀತಿಯಲ್ಲಿ ಕಳ್ಳತನ; ವ್ಯಕ್ತಿಯ ಮುಖಕ್ಕೆ ಮೆಣಸಿನ ಪುಡಿ ಎರಚಿ 6 ಲಕ್ಷ ರೂ. ಕಳವು

ಉದ್ಯೋಗಿ ತುಳಸೀದಾನ್ ಎಂಬವರ ಕೈಯಲ್ಲಿದ್ದ 6,05,797 ಲಕ್ಷ ರೂ. ಬ್ಯಾಗನ್ನು ಕಳ್ಳರು ಎಗರಿಸಿದ್ದು, ಅದೃಷ್ಟವಶಾತ್, 38.4 ಲಕ್ಷ ರೂ. ಇದ್ದ ಇನ್ನೊಂದು ಬ್ಯಾಗ್ ಅವರ ಬಳಿಯೇ ಉಳಿದುಕೊಂಡಿದೆ.

Mysuru News: ಮೈಸೂರಿನ ಹೆಬ್ಬಾಳದಲ್ಲಿ ಸಿನಿಮೀಯ ರೀತಿಯಲ್ಲಿ ಕಳ್ಳತನ; ವ್ಯಕ್ತಿಯ ಮುಖಕ್ಕೆ ಮೆಣಸಿನ ಪುಡಿ ಎರಚಿ 6 ಲಕ್ಷ ರೂ. ಕಳವು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jul 28, 2023 | 4:15 PM

Share

ಮೈಸೂರು: ಖಾಸಗಿ ಕಾರ್ಖಾನೆಯ ಉದ್ಯೋಗಿಯೊಬ್ಬರಿಂದ ಸಿನಿಮೀಯ ಶೈಲಿಯಲ್ಲಿ ಸುಮಾರು 6 ಲಕ್ಷ ರೂ. ದೋಚಿದ ಘಟನೆ ಮೈಸೂರಿನ (Mysuru) ಹೆಬ್ಬಾಳ (Hebbal) ಕೈಗಾರಿಕಾ ಪ್ರದೇಶದ ಬ್ಯಾಂಕ್ ಶಾಖೆ ಬಳಿ ನಡೆದಿದೆ. ಉದ್ಯೋಗಿ ತುಳಸೀದಾನ್ ಎಂಬವರ ಕೈಯಲ್ಲಿದ್ದ 6,05,797 ಲಕ್ಷ ರೂ. ಬ್ಯಾಗನ್ನು ಕಳ್ಳರು ಎಗರಿಸಿದ್ದು, ಅದೃಷ್ಟವಶಾತ್, 38.4 ಲಕ್ಷ ರೂ. ಇದ್ದ ಇನ್ನೊಂದು ಬ್ಯಾಗ್ ಅವರ ಬಳಿಯೇ ಉಳಿದುಕೊಂಡಿದೆ. ಹೆಬ್ಬಾಳ ಕೈಗಾರಿಕಾ ಪ್ರದೇಶದ ದರಸಗುಪ್ಪೆ ಎಸ್‌ಎಸ್‌ಸಿ ಪ್ರೈವೇಟ್ ಲಿಮಿಟೆಡ್‌ನ (ಚಿಲ್ಲರೆ ವ್ಯಾಪಾರಿಗಳಿಗೆ ಸರಬರಾಜು ಮಾಡುವ ದಿನಸಿ ಮತ್ತು ಐಟಿಸಿ ಸಿಗರೇಟ್‌ಗಳ ಪ್ಯಾಕೇಜಿಂಗ್ ಕಾರ್ಖಾನೆ) ಉದ್ಯೋಗಿ ತುಳಸಿದಾಸ್, ಸಂಗ್ರಹದ ಮೊತ್ತವನ್ನು ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾಗೆ ಜಮೆ ಮಾಡಲು ಬಂದಾಗ ಬುಧವಾರ ಬೆಳಿಗ್ಗೆ 10.15 ರ ಸುಮಾರಿಗೆ ಕಳ್ಳತನ ನಡೆದಿದೆ.

ಹೆಬ್ಬಾಳದಲ್ಲಿ ನಡೆದಿದ್ದೇನು?

ಮತ್ತೊಬ್ಬರು ಚಲಾಯಿಸುತ್ತಿದ್ದ ಸರಕು ಸಾಗಣೆ ವಾಹನದ ಕ್ಯಾಬಿನ್‌ನಿಂದ ತುಳಸೀದಾಸ್ ಕೆಳಗಿಳಿದಿದ್ದಾರೆ. ಅಷ್ಟರಲ್ಲಿ, ಬ್ಯಾಂಕ್ ಕಟ್ಟಡದ ಕಾಂಪೌಂಡ್ ಪಕ್ಕದಲ್ಲಿ ನಿಂತಿದ್ದ ಅಪರಿಚಿತ ವ್ಯಕ್ತಿಯೊಬ್ಬ ನಿಧಾನವಾಗಿ ಅವರತ್ತ ನಡೆದುಕೊಂಡು ಬಂದು ಮೆಣಸಿನ ಪುಡಿಯನ್ನು ಅವರ ಮುಖಕ್ಕೆ ಎರಚಿ ರೂ.ಗಳಿದ್ದ ಬ್ಯಾಗನ್ನು ಕಿತ್ತುಕೊಂಡ. ತುಳಸೀದಾಸ್ ಬಲಗೈಯಲ್ಲಿದ್ದ 6,05,797 ರೂ. ಬ್ಯಾಗನ್ನು ಹಿಂದಿನಿಂದ ಎಳೆದುಕೊಂಡ. ನಂತರ ಮತ್ತೊಬ್ಬ ವ್ಯಕ್ತಿ ಜತೆ ಬೈಕ್‌ನಲ್ಲಿ ಪರಾರಿಯಾಗಿದ್ದಾನೆ. ತುಳಸೀದಾಸ್​​​ ಎಡಗೈಯಲ್ಲಿ 38.4 ಲಕ್ಷ ರೂ. ಇದ್ದ ಇನ್ನೊಂದು ಚೀಲವಿತ್ತು. ಅದು ಅವರ ಕೈಯಲ್ಲೇ ಉಳಿದಿದೆ.

ಪರಾರಿಯಾಗುತ್ತಿದ್ದ ಖದೀಮರನ್ನು ಹಿಡಿಯಲು ತುಳಸಿದಾಸ್​ ಅವರ ಚಾಲಕ ಪ್ರಯತ್ನ ಮಾಡಿದರೂ ವ್ಯರ್ಥವಾಯಿತು. ತುಳಸೀದಾಸ್‌ ಕಿರುಚಾಟಕ್ಕೆ ಸ್ಪಂದಿಸಿ ಬ್ಯಾಂಕ್‌ನ ಕಾಂಪೌಂಡ್‌ನೊಳಗೆ ನಿಲ್ಲಿಸಿದ್ದ ಕಾರಿನಲ್ಲಿ ಕುಳಿತಿದ್ದ ಮತ್ತೊಬ್ಬ ವ್ಯಕ್ತಿಯೂ ಕಳ್ಳರನ್ನು ಬೆನ್ನಟ್ಟಿದರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ: Bengaluru Mysuru Expressway: ಎಕ್ಸ್​ಪ್ರೆಸ್​ ವೇಯಲ್ಲಿ ಬೀಳುತ್ತಿರುವ ವಿದ್ಯುತ್ ಕಂಬಗಳು; ಪ್ರಯಾಣಿಕರಿಗೆ ಆತಂಕ

ಈ ಘಟನೆ ಬ್ಯಾಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಜಯನಗರ ಉಪವಿಭಾಗದ ಎಸಿಪಿ ಎಚ್ಎಸ್ ಗಜೇಂದ್ರ ಪ್ರಸಾದ್, ಮೇಟಗಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ದಿವಾಕರ್ ಭೇಟಿ ನೀಡಿದ್ದಾರೆ. ಐಪಿಸಿ ಸೆಕ್ಷನ್ 392 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ