ಮೈಸೂರಿನಲ್ಲಿ ಮನೆ ಬಾಡಿಗೆಗೆ ಪಡೆಯಬೇಕಾದರೇ ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯ: ಮೈಸೂರು ನಗರ ಪೊಲೀಸ್ ಕಮಿಷನರ್

ಇನ್ನುಮುಂದೆ ಮೈಸೂರಿನಲ್ಲಿ ಮನೆ ಬಾಡಿಗೆಗೆ ಪಡೆಯಬೇಕಾದರೇ ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ ಎಂದು ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸುತ್ತೋಲೆ ಹೊರಡಿಸಿದ್ದಾರೆ.

ಮೈಸೂರಿನಲ್ಲಿ ಮನೆ ಬಾಡಿಗೆಗೆ ಪಡೆಯಬೇಕಾದರೇ ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯ: ಮೈಸೂರು ನಗರ ಪೊಲೀಸ್ ಕಮಿಷನರ್
ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್
Follow us
| Updated By: ವಿವೇಕ ಬಿರಾದಾರ

Updated on:Nov 26, 2022 | 12:41 PM

ಮೈಸೂರು: ಮಂಗಳೂರಿನ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ (Mamgaluru Auto Blast) ಪ್ರಕರಣದ ಶಂಕಿತ ಉಗ್ರ ನಕಲಿ ದಾಖಲೆ ನೀಡಿ ಮನೆ ಬಾಡಿಗೆ ಪಡೆದಿದ್ದನು. ಈ ಹಿನ್ನೆಲೆ ಮೈಸೂರು (Mysore) ನಗರ ಪೊಲೀಸರು ನೂತನ ನಿಯಮ ಜಾರಿಗೆ ತಂದಿದ್ದಾರೆ. ಇನ್ನುಮುಂದೆ ನಗರದಲ್ಲಿ ಮನೆ ಬಾಡಿಗೆಗೆ ಪಡೆಯಬೇಕಾದರೇ ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ. ಹಾಗೂ ಮನೆ ಮಾಲಿಕರು ಮನೆ ಮಾಲೀಕರು ಬಾಡಿಗೆ ಕೊಡುವ ಮೊದಲು, ಬಾಡಿಗೆದಾರರಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯವಾಗಿ ಪಡೆಯಬೇಕು ಎಂದು ಪೊಲೀಸ್​ ಇಲಾಖೆ ಸೂಚನೆ ನೀಡಿದೆ.

100 ರೂ ಪಾವತಿಸಿ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು. ಬ್ಯಾಚುಲರ್, ಕುಟುಂಬಗಳಿಗೆ, ಪಿಜಿ ನಡೆಸುವವರಿಗೆ ಪ್ರತ್ಯೇಕ ಅರ್ಜಿ ಹಾಕಬೇಕು. ಈಗಾಗಲೇ ಬಾಡಿಗೆ ಇರುವವರ ಬಗ್ಗೆ ಮಾಹಿತಿ ನೀಡಬೇಕು. ಈ ನಿಯಮವನ್ನು ಎಲ್ಲಾ ಠಾಣೆಗಳು ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸುತ್ತೋಲೆ ಹೊರಡಿಸಿದ್ದಾರೆ. ​​​ ತ್ರಿಬಲ್ ರೈಡಿಂಗ್ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನಗಳು ವಶಕ್ಕೆ

ಮೈಸೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲ್ಲೆ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ತ್ರಿಬಲ್ ರೈಡಿಂಗ್ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನಗಳನ್ನು ಸೀಜ್​ ಮಾಡುತ್ತಿದ್ದಾರೆ. ಮೂರು ದಿನದಲ್ಲಿ 142ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಮೂರು ದಿನ ದ್ವಿಚಕ್ರ ವಾಹನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜನರು ಸಂಚಾರ ನಿಯಮಗಳನ್ನು ಪಾಲಿಸಬೇಕು. ವಿದ್ಯಾರ್ಥಿಗಳಿಗೆ ವಾಹನ ಕೊಡುವ ಮುನ್ನ ಪೋಷಕರು ಎಚ್ಚರ ವಹಿಸಬೇಕು. ಪದೇ ಪದೇ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ದಂಡದ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಟಿವಿ9ಗೆ ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 12:20 pm, Sat, 26 November 22