AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2021: ನಾಳೆ ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ಚಾಲನೆ, ಇಂದೇ ಮೈಸೂರಿನತ್ತ ಹೊರಟ ಸಿಎಂ ಬಸವರಾಜ ಬೊಮ್ಮಯಿ, ಎಸ್.ಎಂ ಕೃಷ್ಣ

ಕೊರೊನಾ ಮಹಾಮಾರಿಯ ಆತಂಕದಿಂದ ಈ ಬಾರಿಯೂ ಸಹ ಸರಳವಾಗಿ ದಸರಾ ಆಚರಿಸಲಾಗ್ತಿದೆ. ನಾಳೆ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ. ಹಾಗಾಗಿ ಒಂದು ದಿನ ಮುಂಚಿತವಾಗಿ ಅಂದ್ರೆ ಇಂದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿಗೆ ತೆರಳ್ತಾಯಿದ್ದಾರೆ.

Mysuru Dasara 2021: ನಾಳೆ ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ಚಾಲನೆ, ಇಂದೇ ಮೈಸೂರಿನತ್ತ ಹೊರಟ ಸಿಎಂ ಬಸವರಾಜ ಬೊಮ್ಮಯಿ, ಎಸ್.ಎಂ ಕೃಷ್ಣ
ಮೈಸೂರು ದಸರಾ ಆನೆಗಳು (ಸಾಂದರ್ಭಿಕ ಚಿತ್ರ)
TV9 Web
| Updated By: ಆಯೇಷಾ ಬಾನು

Updated on: Oct 06, 2021 | 7:59 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ನಾಳೆ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿ ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ಚಾಲನೆ ಸಿಗಲಿದ್ದು ಸಿಎಂ ಬಸವರಾಜ ಬೊಮ್ಮಯಿ ಸೇರಿದಂತೆ ಹಲವು ಗಣ್ಯರು ದಸರಾ ಮಹೋತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ.

ಕೊರೊನಾ ಮಹಾಮಾರಿಯ ಆತಂಕದಿಂದ ಈ ಬಾರಿಯೂ ಸಹ ಸರಳವಾಗಿ ದಸರಾ ಆಚರಿಸಲಾಗ್ತಿದೆ. ನಾಳೆ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ. ಹಾಗಾಗಿ ಒಂದು ದಿನ ಮುಂಚಿತವಾಗಿ ಅಂದ್ರೆ ಇಂದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿಗೆ ತೆರಳ್ತಾಯಿದ್ದಾರೆ.

ಕೆಆರ್‌ಎಸ್‌ನಲ್ಲಿಂದು ಸಿಎಂ ಬಸವರಾಜ ಬೊಮ್ಮಾಯಿ ವಾಸ್ತವ್ಯ ಅಂದಹಾಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದಾರೆ. ಮೊದಲಿಗೆ ಶಾಸಕ ಎಸ್.ಎ ರಾಮದಾಸ್ ಆಯೋಜಿಸಿರುವ ಮೋದಿ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ಗೆ ತೆರಳಿ ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ದಸರಾ ಮಹೋತ್ಸವಕ್ಕೆ ಕೌಂಟ್‌ಡೌನ್ ನಾಳೆ ಬೆಳಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಕೆಆರ್‌ಎಸ್‌ನಿಂದ ನೇರವಾಗಿ ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ನಾಳೆ ಬೆಳಗ್ಗೆ 7.45ಕ್ಕೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು, 8.15ಕ್ಕೆ ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ನಂತರ ನಾಳೆ ಬೆಳಗ್ಗೆ 10.40ಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಸ್ವಾಗತಿಸಲಿದ್ದಾರೆ. ನಂತರ ರಾಷ್ಟ್ರಪತಿಗಳ ಜೊತೆ ಚಾಮರಾಜನಗರಕ್ಕೆ ತೆರಳಲಿರುವ ಸಿಎಂ, ಚಾಮರಾಜನಗರ ವೈದ್ಯಕೀಯ ಕಾಲೇಜು & ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಚಾಮರಾಜನಗರದಿಂದ ಮತ್ತೆ ಮೈಸೂರಿಗೆ ಹಿಂತಿರುಗಲಿದ್ದಾರೆ. ರಾತ್ರಿ ಮೈಸೂರು ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಳಿಕ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ಮಾಜಿ ಸಿಎಂ ಎಸ್.ಎಂ ಕೃಷ್ಣ ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟನೆ ಮಾಡಲಿದ್ದು, ಅವರು ಸಹ ಇಂದೇ ಕುಟುಂಬ ಸಮೇತ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ತಾಯಿ ಚಾಮುಂಡೇಶ್ಬರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ದಸರಾ ಉದ್ಘಾಟನೆ ಮಾಡಲಿದ್ದಾರೆ. ನಂತ್ರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀಕಂಠೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಒಟ್ನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಕೌಂಟ್‌ಡೌನ್ ಶುರುವಾಗಿದ್ದು ಗಣ್ಯಾತಿಗಣ್ಯರು ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬೀಡುಬಿಟ್ಟು ಸರಳಾ ದಸರಾದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: Bangalore Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನದಿಯಂತಾದ ರಸ್ತೆಗಳು; ಜನಜೀವನ ಅಸ್ತವ್ಯಸ್ತ

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!