ಮೈಸೂರು ದಸರಾ ಆಚರಣೆ, ಕೊವಿಡ್ 3ನೇ ಅಲೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯ ವಿವರ ಇಲ್ಲಿದೆ

ಮೈಸೂರು, ಕೊಡಗು ಜಿಲ್ಲೆಯಲ್ಲಿ ಟೆಸ್ಟಿಂಗ್ ಹೆಚ್ಚಿಸಬೇಕು. ಮೈಸೂರು ಜಿಲ್ಲೆಗೆ 14 ಆಕ್ಸಿಜನ್ ಜನರೇಟರ್ ಮಂಜೂರು ಮಾಡುತ್ತೇವೆ. ತಜ್ಞರ ಸಲಹೆಯಿಂದ ಗಡಿ ಭಾಗದಲ್ಲಿ ಎಲ್ಲರಿಗೂ ತಪಾಸಣೆ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ಮೈಸೂರು ದಸರಾ ಆಚರಣೆ, ಕೊವಿಡ್ 3ನೇ ಅಲೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯ ವಿವರ ಇಲ್ಲಿದೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: guruganesh bhat

Updated on:Aug 09, 2021 | 5:52 PM

ಮೈಸೂರು: ಮುಂದಿನ ಒಂದೆರಡು ವಾರಗಳಲ್ಲಿ ಕೊವಿಡ್ ಹೆಚ್ಚಾಗಲಿದೆಯೋ ಕಡಿಮೆ ಆಗಲಿದೆಯೇ ನೋಡುತ್ತೇವೆ. ಹೈ ಪವರ್ ಕಮಿಟಿಯಲ್ಲಿ ಮೈಸೂರು ದಸರಾ ಬಗ್ಗೆ ಚರ್ಚೆ ಮಾಡುತ್ತೇವೆ. ಕೊರೊನಾ ಸ್ಥಿತಿಗತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಆನಂತರ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಿಸಿದರು. ಕೊರೊನಾ 3ನೇ ಅಲೆ ಬರದಂತೆ ಪ್ರಾರ್ಥನೆ ಮಾಡೋಣ. 3ನೇ ಅಲೆ ಬರದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿದೆ. ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಡಿಸಿಗಳಿಗೆ ಸೂಚಿಸಿದ್ದೇನೆ. ಕಡ್ಡಾಯವಾಗಿ ಕೊವಿಡ್-19 ಟೆಸ್ಟ್ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ದಸರಾ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ರಾಜ್ಯಕ್ಕೆ 63ರಿಂದ 64 ಲಕ್ಷ ಡೋಸ್ ಲಸಿಕೆ (Covid Vaccine) ಬರುತ್ತಿದೆ. ಮುಂದಿನ ತಿಂಗಳಿಂದ 1.5 ಕೋಟಿ ಡೋಸ್ ಲಸಿಕೆಗೆ ಮನವಿ ಮಾಡಿದ್ದೇನೆ. ಮೈಸೂರು, ಕೊಡಗು ಜಿಲ್ಲೆಯಲ್ಲಿ ಟೆಸ್ಟಿಂಗ್ ಹೆಚ್ಚಿಸಬೇಕು. ಮೈಸೂರು ಜಿಲ್ಲೆಗೆ 14 ಆಕ್ಸಿಜನ್ ಜನರೇಟರ್ ಮಂಜೂರು ಮಾಡುತ್ತೇವೆ. ತಜ್ಞರ ಸಲಹೆಯಿಂದ ಗಡಿ ಭಾಗದಲ್ಲಿ ಎಲ್ಲರಿಗೂ ತಪಾಸಣೆ ಮಾಡಲಿದ್ದೇವೆ. ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಮತ್ತು ಗಡಿ ಭಾಗದ ಗ್ರಾಮಗಳ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಿಸುತ್ತೇವೆ ಎಂದು ತಿಳಿಸಿದರು.

ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ವಿಚಾರವಾಗಿಯೂ ಮಾಹಿತಿ ನೀಡಿದ ಅವರು,ಪ್ರತಿ ಗ್ರಾಮದಲ್ಲಿ ಮಕ್ಕಳ ಹೆಲ್ತ್ ಕ್ಯಾಂಪ್ ಮಾಡಲಾಗುತ್ತೆ. ಶಾಲೆಗೆ ಬರುವ ಎಲ್ಲಾ ಮಕ್ಕಳ ತಪಾಸಣೆ ವ್ಯವಸ್ಥೆ ಮಾಡಲುತ್ತದೆ. ಅಪೌಷ್ಟಿಕ ಮಕ್ಕಳ ಬಗ್ಗೆ ಕಿಟ್ ನೀಡುವ ವ್ಯವಸ್ಥೆ ಮಾಡ್ತೇವೆ ಎಂದು ತಿಳಿಸಿದರು.

ಮೈಸೂರು ಜಿಲ್ಲೆಯಲ್ಲಿ ವೀಕೆಂಡ್ ಲಾಕ್‌ಡೌನ್​ಗೆ ವಿರೋಧಿಸಿ ಗಡಿ ಬಂದ್ ಮಾಡಿ, ನಗರ ಬಂದ್ ಮಾಡಬೇಡಿ  ಅಭಿಯಾನ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಮೈಸೂರಿನ ಹಿತದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ. ಮೈಸೂರಿಗೆ ಕೇರಳ ಮಹಾರಾಷ್ಟ್ರ ಮಾತ್ರವಲ್ಲ ಹೊರಗಿನಿಂದ ಹೆಚ್ಚು ಜನ ಬರುತ್ತಾರೆ. ನಮಗೆ ಮೈಸೂರು ಜನರ ಸುರಕ್ಷತೆ ಮುಖ್ಯ. ಇದನ್ನು ಎಲ್ಲರೂ ಅರ್ಥ ಮಾಡಿಕೊಂಡು ಸಹಕರಿಸಬೇಕು. ಮೈಸೂರಿಗರ ಅಭಿಪ್ರಾಯ ಸಂಗ್ರಹ ಮಾಡಿ ತಜ್ಞರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಿಯೇ ಸಿದ್ಧ ಮೇಕೆದಾಟು ವಿಚಾರ ನಾನು ಹತ್ತು ದಿನಗಳಲ್ಲಿ ದೆಹಲಿಗೆ ಹೋಗುತ್ತೇನೆ. ಕಾನೂನು ತಂಡದ ಮೂಲಕ ಮೇಕೆದಾಟು ವಿಚಾರವಾಗಿ ದೆಹಲಿಯಲ್ಲಿ ಚರ್ಚೆ ಮಾಡುತ್ತೇನೆ. ನಮ್ಮ ಉದ್ದೇಶ ಮೊದಲು ಡಿಪಿಆರ್ ಕ್ಲಿಯರ್ ಆಗಬೇಕು. ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದಂತಹ ಹಲವು ಸಂದರ್ಭಗಳನ್ನ ನಾವು ಎದುರಿಸಿದ್ದೇವೆ. ತಮಿಳುನಾಡಿನ ಒತ್ತಡದಿಂದ ಡಿಪಿಆರ್ಗೆ ಸಮ್ಮತಿ ಸಿಕ್ಕಿಲ್ಲ ಅನ್ನೋದು ಸರಿಯಲ್ಲ. ನಾವು ಶೀಘ್ರವೇ ಮೇಕೆದಾಟು ಪ್ರಾಜೆಕ್ಟ್ ಡಿಪಿಆರ್ ಗೆ ಅನುಮತಿ ಪಡೆಯುತ್ತೇವೆ. ಸುಪ್ರೀಂ ಕೋರ್ಟ್ ನಿರ್ದೇಶನ ಸಂಬಂಧ ನಾವು ಕೇಂದ್ರಕ್ಕೆ ಒಂದಷ್ಟು ಅಂಶಗಳನ್ನ ಮನವರಿಕೆ ಮಾಡಲಿದ್ದೇವೆ. ಆದರೆ ತಮಿಳುನಾಡು ಸುಪ್ರೀಂ ಕೋರ್ಟ್ ಆದೇಶ ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂದು ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ:

SSLC Results 2021: ಲೋಡ್ ಆಗುತ್ತಿಲ್ಲ ವೆಬ್​ಸೈಟ್; ಸಂಜೆಯ ವೇಳೆಗೆ ವಿದ್ಯಾರ್ಥಿಗಳಿಗೆ ಎಸ್​ಎಸ್​ಎಲ್​ಸಿ ಫಲಿತಾಂಶ ಕೈತಲುಪುವ ಸಾಧ್ಯತೆ

CM Basavaraj Bommai: ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರ ಜೊತೆ ನಾಡದೇವತೆ ಚಾಮುಂಡಿ ದರ್ಶನ

(CM Basavaraj Bommai says will decide Mysuru Dasara celebration after look covid situation in state)

Published On - 5:50 pm, Mon, 9 August 21

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು