ಇಂದು ಸಿಎಂ ಬಸವರಾಜ ಬೊಮ್ಮಾಯಿ ಮೈಸೂರು ಪ್ರವಾಸ: ಕೆಆರ್​ಎಸ್​​ ಜಲಾಶಯಕ್ಕೆ ಬಾಗಿನ ಅರ್ಪಣೆ, ಸಕಲ ಸಿದ್ಧತೆ

| Updated By: Digi Tech Desk

Updated on: Jul 20, 2022 | 11:46 AM

ಅತಿ ಹೆಚ್ಚು ಬಾರಿ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಬಿ.ಎಸ್.ಯಡಿಯೂರಪ್ಪ ಪಾತ್ರವಾಗಿದ್ದರು. ಇದೀಗ ಅತ್ಯಂತ ಕಡಿಮೆ ಅವಧಿಯಲ್ಲಿ 2 ಬಾರಿ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಸಿಎಂ ಬೊಮ್ಮಾಯಿ ಪಾತ್ರವಾಗಲಿದ್ದಾರೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ಮೈಸೂರು ಪ್ರವಾಸ: ಕೆಆರ್​ಎಸ್​​ ಜಲಾಶಯಕ್ಕೆ ಬಾಗಿನ ಅರ್ಪಣೆ, ಸಕಲ ಸಿದ್ಧತೆ
ಬಾಗಿನ ಅರ್ಪಣೆಗೆ ಸಿದ್ಧಗೊಂಡ ಕೆಆರ್​​ಎಸ್​ ಡ್ಯಾಂ
Follow us on

ಮೈಸೂರು: ಇಂದು ಸಿಎಂ ಬಸವರಾಜ ಬೊಮ್ಮಾಯಿ ಮೈಸೂರು, ಮಂಡ್ಯ ಪ್ರವಾಸದಲ್ಲಿದ್ದು, ಬೆಳಗ್ಗೆ 8.30ಕ್ಕೆ‌ ಬೆಂಗಳೂರಿನ ಹೆಚ್​​​​ಎಎಲ್ ವಿಮಾನ‌ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ‌ ಬೆಳಗ್ಗೆ 9.20ಕ್ಕೆ ಮೈಸೂರು ಮಂಡಕಹಳ್ಳಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದರು. ರಸ್ತೆ ಮೂಲಕ ಬೆಳಗ್ಗೆ 9.45ಕ್ಕೆ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವರ್ಧಂತಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ರಸ್ತೆ ಮೂಲಕ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಬೆಳಗ್ಗೆ 11ಕ್ಕೆ ಜಿಲ್ಲೆ ಹೆಚ್​ಡಿ‌ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಲಿಕ್ಯಾಪ್ಟರ್ ಮೂಲಕ ಕೆಆರ್​ಎಸ್​​ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿ, ಮಧ್ಯಾಹ್ನ 2.10ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಯಾವ ಸಿಎಂಗೂ ಒಲಿಯದ ಅದೃಷ್ಟ ಸಿಎಂ ಬೊಮ್ಮಾಯಿಗೆ

KRS ಡ್ಯಾಂ ಇತಿಹಾಸದಲ್ಲಿ ಯಾವ ಸಿಎಂಗೂ ಸಿಗದ ಅದೃಷ್ಟ ಬಸವರಾಜ ಬೊಮ್ಮಾಯಿಗೆ ಸಿಕ್ಕಿದ್ದು, ಕೇವಲ 8 ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಬಾಗಿನ ಅರ್ಪಣೆ ಮಾಡಿದ್ದಾರೆ. ಸಾಮಾನ್ಯವಾಗಿ ಆಗಸ್ಟ್​ನಲ್ಲಿ ಭರ್ತಿಯಾಗುತ್ತಿದ್ದ KRS ಡ್ಯಾಂ
ಹೀಗಾಗಿ ಮತ್ತೆ ಬಾಗಿನ ಅರ್ಪಣೆಗೆ ಒಂದು ವರ್ಷದ ಕಾಯಬೇಕಿತ್ತು. ಇದೇ ಮೊದಲ ಬಾರಿಗೆ 8 ತಿಂಗಳ ಅಂತರದಲ್ಲಿ 2ನೇ ಬಾರಿ ಬಾಗಿನ ಅರ್ಪಣೆಗೆ ಅವಕಾಶ ಸಿಕ್ಕಿದೆ. ಕಳೆದ ವರ್ಷ ಅಕ್ಟೋಬರ್ ಅಂತ್ಯದಲ್ಲಿ ಭರ್ತಿಯಾಗಿದ್ದ ಡ್ಯಾಂಗೆ ನವೆಂಬರ್ 2 ರಂದು  ಸಿಎಂ ಬೊಮ್ಮಾಯಿ ಬಾಗಿನ ಅರ್ಪಿಸಿದ್ದರು. ಈ ವರ್ಷ ಜುಲೈನಲ್ಲೇ ಕನ್ನಂಬಾಡಿ ಕಟ್ಟೆ ಭರ್ತಿಯಾಗಿದ್ದು, 6 ಬಾರಿ ಬಾಗಿನ ಬಿಟ್ಟು ಅತಿ ಹೆಚ್ಚು ಬಾರಿ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಬಿ.ಎಸ್.ಯಡಿಯೂರಪ್ಪ ಪಾತ್ರವಾಗಿದ್ದರು. ಇದೀಗ ಅತ್ಯಂತ ಕಡಿಮೆ ಅವಧಿಯಲ್ಲಿ 2 ಬಾರಿ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಸಿಎಂ ಬೊಮ್ಮಾಯಿ ಪಾತ್ರವಾಗಲಿದ್ದಾರೆ.

ಸಿಎಂ ಕುರ್ಚಿಗಾಗಿ ಡಿಕೆಶಿ ಮತ್ತು ಸಿದ್ದರಾಮಯ್ಯ ರೇಸ್​​: ಸಿಎಂ ಬೊಮ್ಮಾಯಿ

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಸಿಎಂ ಬೊಮ್ಮಾಯಿ, ಡಿ.ಕೆ ಶಿವಕುಮಾರ ಬಹಳ ವರ್ಷಗಳಿಂದ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಲು ಕಾಂಗ್ರೆಸ್​​ನವರೇ ಬಿಡ್ತಿಲ್ಲ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ ಮಧ್ಯೆ ಸಿಎಂ ರೇಸ್​ಗಾಗಿ ಸ್ಪರ್ಧೆ ನಡೀತಿದೆ. ಇಬ್ಬರು ನಾನೊಂದು ತೀರ ನೀನೊಂದು ತೀರ ಎಂಬಂತಾಗಿದ್ದಾರೆ ಎಂದು ನಗರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು.