AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಸುಮ್ಮನೇ ಕುಳಿತಿದ್ದರೂ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

ನಾವು ಸುಮ್ಮನೇ ಕುಳಿತಿದ್ದರೂ ಸಹ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ನಾವು ಸುಮ್ಮನೇ ಕುಳಿತಿದ್ದರೂ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Dec 10, 2022 | 3:42 PM

Share

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಮನೆಗೆ ಹೋಗುವ ಕಾರ್ಯಕ್ರಮ‌ ಇದೆ. ಅದಕ್ಕಾಗಿ ಅವರು ಆ ರೀತಿ ಹೇಳುತ್ತಿದ್ದಾರೆ ಎಂದು ನಾವು ಸುಮ್ಮನೇ ಕುಳಿತಿದ್ದರೂ ಸಹ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ (Cm Bommai) ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಸಿದ್ದರಾಮಯ್ಯ ಮನೆಗೆ ಹೋಗುವುದು ನಿಶ್ಚಿತವಾಗಿದೆ. ಅದಕ್ಕೆ ಆ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು. ಇನ್ನು ಗುಜರಾತ್ ಚುನಾವಣೆ ನಂತರ ಸಹಜವಾಗಿಯೇ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲಾ ತಯಾರಿ ನಡೆಸುತ್ತಿದ್ದೇವೆ. ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಅದಕ್ಕಾಗಿ ಎಲ್ಲಾ ತಯಾರಿ ನಡೆಸಿದ್ದೇವೆ. ಅವಧಿಗೆ ಮುನ್ನ ಚುನಾವಣೆ ಪ್ರಶ್ನೆಗೆ ಇಂತಹವೆಲ್ಲಾ ನಿಮಗೆ ಯಾರು ಹೇಳುತಾರೆ ಎಂದು ಗರಂ ಆಗಿ ಸಿಎಂ ಬೊಮ್ಮಾಯಿ ಉತ್ತರಿಸಿದ್ದಾರೆ.

ಬಸವಣ್ಣ ಅಂದ್ರೆ ಒಂದು ವಿಚಾರ, ಬಸವಣ್ಣ ಸರ್ವಕಾಲಕ್ಕೂ ಪ್ರಸ್ತುತ

ನಗರದ ಸುತ್ತೂರು ಶಾಖಾ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಬೆಳ್ಳಿಬೆಳಗು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ಬಸವಣ್ಣ ಯಾವುದೇ ಒಂದು ಸಮುದಾಯಕ್ಕೆ ಸೇರಿದವರಲ್ಲ. ಬಸವಣ್ಣ ಅಂದರೆ ಒಂದು ವಿಚಾರ, ಬಸವಣ್ಣ ಸರ್ವಕಾಲಕ್ಕೂ ಪ್ರಸ್ತುತ ಎಂದು ಹೇಳಿದರು. ಮಹಿಳೆಯರ ಮೇಲಿನ ದೌರ್ಜನ್ಯ, ಅಸಮಾನತೆ ಇನ್ನೂ ಇದೆ ಎಂದರು.

ಇದನ್ನೂ ಓದಿ: ಕರ್ನಾಟಕದಲ್ಲೂ ಗುಜರಾತ್‌ ಮಾದರಿ ಎಲೆಕ್ಷನ್ ಸುದ್ದಿ ಬೆನ್ನಲ್ಲೇ ಅಖಾಡಕ್ಕಿಳಿದ RSS: ಮೇಲಿಂದ ಮೇಲೆ ಸಿಎಂ ಭೇಟಿ

ಬಸವಣ್ಣ ಕಾಯಕ ಸಮಾಜದ ನಿರ್ಮಾಣಕ್ಕೆ ಪಣ ತೊಟ್ಟಿದ್ದರು. ಕನ್ನಡವನ್ನು ಬಸವಣ್ಣ ವಚನಗಳ ಮೂಲಕ ಶ್ರೀಮಂತಗೊಳಿಸಿದ್ದಾರೆ. ಇವೆಲ್ಲವನ್ನು ನಾವು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಣ ಇದ್ದವರು ಮಾತ್ರ ಶ್ರೀಮಂತರಲ್ಲ, ಗುಣವಂತರೂ ಶ್ರೀಮಂತರೇ. ಕಾಮ, ಮದ, ಮತ್ಸರದ ಸಂಕೋಲೆಯಲ್ಲಿ ಸಿಲುಕಿದವನು ಮನುಷ್ಯ ಎಂದು ಹೇಳಿದರು.

ಬಸವಣ್ಣರ ಭಕ್ತರಿಗೆ ಸಿಎಂ ಬೊಮ್ಮಾಯಿ ಕರೆ

ಎಲ್ಲರೂ ಕೂಡಿ ಸಂಕಲ್ಪ ಮಾಡಿ. ಪ್ರತಿ ದಿನದ ನಿರ್ಧಾರ ಆಚಾರ ವಿಚಾರದಲ್ಲಿ ಅಳವಡಿಸಿಕೊಳ್ಳೋಣ. ಹಲವು ರೀತಿಯ ಅಸಮಾನತೆ ಇದೆ. ಬಸವಣ್ಣ ಕಾಯಕ ಸಮಾಜದ ನಿರ್ಮಾಣಕ್ಕೆ ಪಣ ತೊಟ್ಟಿದ್ದರು. ಕಾಯಕವೇ ಕೈಲಾಸ ದಾಸೋಹ ಸಂಸ್ಕೃತಿಯ ಬಗ್ಗೆ ಉಲ್ಲೇಖಿಸಿದ್ದಾರೆ. ಕರ್ತವ್ಯ ಬೇರೆ ಕಾಯಕ ಬೇರೆ. ನಡೆ ನುಡಿಗಳಲ್ಲಿ ಬಸವಣ್ಣ ದಾರಿ‌ ಕೊಟ್ಟಿದ್ದಾನೆ. ಕನ್ನಡವನ್ನು ಬಸವಣ್ಣ ತಮ್ಮ ವಚನಗಳ ಮೂಲಕ ಶ್ರೀಮಂತಗೊಳಿಸಿದ್ದಾರೆ. ಇವೆಲ್ಲವನ್ನೂ ನಾವು ದಿನ ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಸವಣ್ಣರ ಭಕ್ತರಿಗೆ ಸಿಎಂ ಬೊಮ್ಮಾಯಿ ಕರೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:41 pm, Sat, 10 December 22