ತವರು ಜಿಲ್ಲೆಯಲ್ಲಿ ಸಿದ್ದರಾಮಯ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ, ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಸಿಎಂ ಸಿದ್ದರಾಮಯ್ಯ ಆಗಸ್ಟ್ 28 , 29 ಹಾಗೂ 30 ರಂದು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸುತ್ತಿರುವುದು ಗೃಹಲಕ್ಷ್ಮಿ ಗ್ಯಾರಂಟಿಯ ಯೋಜನೆಯ ಲೋಕಾರ್ಪಣೆಗಾಗಿ. ಆಗಸ್ಟ್ 30ರಂದು ಬೆಳಗ್ಗೆ 11 ಗಂಟೆಗೆ ಗೃಹಲಕ್ಷ್ಮಿ ಯೋಜನೆ ಜಾರಿಯಾಗಲಿದೆ.
ಮೈಸೂರು, ಆ.27: ಸಿದ್ದರಾಮಯ್ಯ(Siddaramaiah) ಎರಡನೇ ಬಾರಿ ಸಿಎಂ ಆದ ನಂತರ ತವರಿನ ಕಡೆ ಹೆಚ್ಚು ಮುಖ ಮಾಡಿರಲಿಲ್ಲ. ಹಚ್ಚಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರಲಿಲ್ಲ. ಇದೀಗ ಸಿದ್ದರಾಮಯ್ಯ ಸಿಎಂ ಆಗಿ ಮೂರು ತಿಂಗಳ ನಂತರ ತವರು ಜಿಲ್ಲೆಯಲ್ಲಿ ಮೂರು ದಿನ ಪ್ರವಾಸ ಕೈಗೊಂಡಿದ್ದಾರೆ. ಕೈ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮಿ(Gruha Lakshmi Scheme) ಲೋಕಾರ್ಪಣೆ ಸೇರಿದಂತೆ ಹತ್ತಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಭಾಗಿಯಾಗುತ್ತಿದ್ದಾರೆ ಮೂರು ದಿನಗಳ ಸಿದ್ದರಾಮಯ್ಯ ಅವರ ಮ್ಯಾರಥಾನ್ ಕಾರ್ಯಕ್ರಮಗಳ ಸಂಪೂರ್ಣ ವಿವರ ಇಲ್ಲಿದೆ.
ಸಿಎಂ ಸಿದ್ದರಾಮಯ್ಯ ಆಗಸ್ಟ್ 28 , 29 ಹಾಗೂ 30 ರಂದು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸುತ್ತಿರುವುದು ಗೃಹಲಕ್ಷ್ಮಿ ಗ್ಯಾರಂಟಿಯ ಯೋಜನೆಯ ಲೋಕಾರ್ಪಣೆಗಾಗಿ. ಆಗಸ್ಟ್ 30ರಂದು ಬೆಳಗ್ಗೆ 11 ಗಂಟೆಗೆ ಗೃಹಲಕ್ಷ್ಮಿ ಯೋಜನೆ ಜಾರಿಯಾಗಲಿದೆ. ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಗಾಗಿ ಅದ್ದೂರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್ ಸಚಿವರು, ಶಾಸಕರು ಸೇರಿ ಹಲವರು ಸಿದ್ದರಾಮಯ್ಯಗೆ ಸಾಥ್ ನೀಡಲಿದ್ದಾರೆ. ಇದಕ್ಕೆ ಕಳೆದ ಒಂದು ವಾರದಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭರ್ಜರಿ ಸಿದ್ದತೆ ನಡೆಯುತ್ತಿದೆ.
ಇದನ್ನು ಹೊರತುಪಡಿಸಿ ಸಿಎಂ ಸಿದ್ದರಾಮಯ್ಯ ತಬರು ಜಿಲ್ಲೆಯ ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಆಗಸ್ಟ್ 28 ರ ಬೆಳಗ್ಗೆ 11 ಗಂಟೆಗೆ ಸಿದ್ದರಾಮಯ್ಯ ರಸ್ತೆ ಮೂಲಕ ಮೈಸೂರಿಗೆ ಆಗಮಿಸಲಿದ್ದಾರೆ. ಜಿ.ಪಂ. ಸಭಾಂಗಣದಲ್ಲಿ ಆಯೋಜಿಸಿರುವ ಕೆಡಿಪಿ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ಅಂದು ರಾತ್ರಿ 7 ಗಂಟೆಗೆ ಹೋಟೆಲ್ ಜೆ.ಪಿ.ಪ್ಯಾಲೇಸ್ ನಲ್ಲಿ ಗಂಗೋತ್ರಿ ವಿದ್ಯಾರ್ಥಿಗಳೊಂದಿಗೆ ಸಿದ್ದರಾಮಯ್ಯ ಸಂವಾದ ನಡೆಸಲಿದ್ದಾರೆ.
ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿ
ಸಂವಾದದ ನಂತರ ಸಿದ್ದರಾಮಯ್ಯ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 29 ರಂದು ಬೆಳಿಗ್ಗೆ 10,30 ಕ್ಕೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 1 ಗಂಟೆಗೆ ಕಡಕೋಳ ಕೈಗಾರಿಕಾ ಪ್ರದೇಶದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 1,45ಕ್ಕೆ ಸಿದ್ದರಾಮಯ್ಯ ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಸುಟ್ಟ ಗಾಯಗಳ ನವೀಕರಣ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮೈಸೂರು ಚಾಮರಾಜನಗರ ಶಾಸಕರುಗಳನ್ನು ಭೇಟಿ ಮಾಡಿ ಸಭೆ ನಡೆಸಲಿದ್ದಾರೆ. ಇದಾದ ನಂತರ ಸಂಜೆ 6 ಗಂಟೆಗೆ ಮೈಸೂರು ಜಿಲ್ಲಾ ವಕೀಲರ ಸಂಘದ ಕಚೇರಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ: ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆ ರಾಜಕೀಯಕ್ಕೆ ಮಿಗಿಲಾದ ಬಾಂಧವ್ಯವಿದೆ: ಎಂಪಿ ರೇಣುಕಾಚಾರ್ಯ, ಬಿಜೆಪಿ ನಾಯಕ
ಇನ್ನು ಆಗಸ್ಟ್ 30ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಗೃಹ ಲಕ್ಷ್ಮಿ ಯೋಜನೆಯ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದ ನಂತರವು ಸಿದ್ದರಾಮಯ್ಯ ಮೈಸೂರಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಗೃಹಲಕ್ಷ್ಮಿ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 3.50ಕ್ಕೆ ಸಿದ್ದಲಿಂಗಪುರದ ಕನಕ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗವಹಿಸುತ್ತಿದ್ದಾರೆ. ನಂತರ ಸಂಜೆ 6.30ಕ್ಕೆ ಉದಯಗಿರಿಯ ಅಲ್ ಬದರ್ ವೃತ್ತ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದ ನಂತರ ಸಿದ್ದರಾಮಯ್ಯ 7.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಮೈಸೂರಿನಿಂದ ಹೊರಟು ರಾತ್ರಿ 9.30ಕ್ಕೆ ಸಿದ್ದು ಬೆಂಗಳೂರು ತಲುಪಲಿದ್ದಾರೆ.
ಎರಡನೇ ಬಾರಿ ಸಿಎಂ ಆದ ನಂತರ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ತವರು ಜಿಲ್ಲೆಯಲ್ಲಿ ಇಷ್ಟೋಂದು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವುದು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆ ಸಹಾ ಹತ್ತಿರದಲ್ಲಿದ್ದು ಹಳೇ ಮೈಸೂರು ಭಾಗದಲ್ಲಿ ಕಮಲವನ್ನು ಕಿತ್ತು ಹಾಕಿ ಜೆಡಿಎಸ್‌ಗೆ ಬ್ರೇಕ್ ಹಾಕಿ ಕೈ ಎತ್ತುವ ಕಾರ್ಯತಂತ್ರ ಸಿದ್ದರಾಮಯ್ಯ ಅವರ ಪ್ರವಾಸದಲ್ಲಿ ಅಡಗಿದೆ ಅನ್ನೋದು ರಾಜಕೀಯ ಪರಿಣಿತರ ಅಭಿಪ್ರಾಯವಾಗಿದೆ.
ಮೈಸೂರಿಗೆ ಸಂಬಂಧಿಸಿದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ