AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯದುವೀರ್ ಒಡೆಯರ್ ವಿರುದ್ಧ ಟೀಕಿಸದಂತೆ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದ ಸಿಎಂ ಸಿದ್ದರಾಮಯ್ಯ

ಯದುವಂಶದ ವಿಚಾರ ಮೈಸೂರು ಭಾಗದಲ್ಲಿ ಭಾವನಾತ್ಮಕವಾಗಿದೆ. ಸ್ವಲ್ಪ ಹೆಚ್ಚು ಕಡಿಮೆ ಆದರೂ ನಮ್ಮ ಮಾತೇ ನಮಗೆ ಮುಳ್ಳಾಗುತ್ತೆ. ಬಿಜೆಪಿ ವಿರುದ್ಧ ಮಾತಾಡಿ, ಯದುವೀರ್​ ವಿರುದ್ಧ ಟೀಕೆ ಮಾಡಬೇಡಿ ಎಂದು ಪಕ್ಷದ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

ಯದುವೀರ್ ಒಡೆಯರ್ ವಿರುದ್ಧ ಟೀಕಿಸದಂತೆ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದ ಸಿಎಂ ಸಿದ್ದರಾಮಯ್ಯ
ಯದುವೀರ್ ಒಡೆಯರ್ ವಿರುದ್ಧ ಟೀಕಿಸದಂತೆ ಪಕ್ಷದ ನಾಯಕರಿಗೆ ಸಿಎಂ ಕಿವಿಮಾತು
ದಿಲೀಪ್​, ಚೌಡಹಳ್ಳಿ
| Edited By: |

Updated on: Mar 16, 2024 | 1:27 PM

Share

ಮೈಸೂರು, ಮಾರ್ಚ್​.16: ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆ ಅಖಾಡ ರಂಗೇರಿದೆ (Lok Sabha Election). ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಬಿಜೆಪಿ ಟಿಕೆಟ್ ಪ್ರತಾಪ್ ಸಿಂಹ (Pratap Simha) ಕೈತಪ್ಪಿದ್ದು ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ (Yaduveer Krishnadatta Chamaraja Wadiyar) ಅವರ ಕೈಗೆ ಸಿಕ್ಕಿದೆ. ಆದರೆ ಯದುವೀರ್​ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಯಾರನ್ನು ಕಣಕ್ಕಿಳಿಸಲಿದೆ ಎಂಬ ಕೂತುಹಲ ಮನೆ ಮಾಡಿದೆ. ಈ ನಡುವೆ ಯದುವೀರ​​ ವಿರುದ್ಧ ಟೀಕಿಸದಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ಯದುವೀರ್ ವಿರುದ್ದ ತುಟಿ ಬಿಚ್ಚಬೇಡಿ. ಬಿಜೆಪಿ ವಿರುದ್ದ ಮಾತಾಡಿ ಯದುವೀರ್ ರನ್ನು ಯಾವುದೇ ಕಾರಣಕ್ಕೂ ಟೀಕಿಸಲು ಮುಂದಾಗಬೇಡಿ. ಯದುವಂಶದ ವಿಚಾರ ಮೈಸೂರು ಭಾಗದಲ್ಲಿ ಭಾವನಾತ್ಮಕವಾಗಿದೆ. ಸ್ವಲ್ಪ ಹೆಚ್ಚು ಕಡಿಮೆ ಆದ್ರೂ ನಮ್ಮ ಮಾತೇ ನಮಗೆ ಮುಳ್ಳಾಗುತ್ತೆ. ಸರ್ಕಾರದ ಗ್ಯಾರಂಟಿಗಳು, ಬಿಜೆಪಿ ಹೇಳಿರುವ ಸುಳ್ಳುಗಳ ಮೇಲೆ ಪ್ರಚಾರ ಮಾಡಿ. ಯದುವೀರ್ ವಿಚಾರಕ್ಕೆ ಅಪ್ಪಿತಪ್ಪಿಯೂ ಹೋಗಬೇಡಿ. ಯದುವೀರ್ ವಿಚಾರದಲ್ಲಿ ಟೀಕೆ ಮಾಡಿದರೆ ಅದರ ಎಫೆಕ್ಟ್ ಮೈಸೂರು ಮಾತ್ರವಲ್ಲ ಬೇರೆ ಕ್ಷೇತ್ರದ ಮೇಲೂ ಆಗುತ್ತೆ ಎಚ್ಚರ ಇರಲಿ ಎಂದು ಪಕ್ಷದ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆಯ ಜೊತೆಗೆ ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ ಮೂಲವೇತನವನ್ನು ಶೇ. 17ರಿಂದ ಶೇ. 27.5 ರಷ್ಟು ಹೆಚ್ಚಿಸುವ ಸುಳಿವು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿಎಂ ತವರಿನಲ್ಲಿ ಇನ್ನೂ ಅಂತಿಮವಾಗದ ಕಾಂಗ್ರೆಸ್​​ ಅಭ್ಯರ್ಥಿ

ನಿನ್ನೆ ಇಡೀ ದಿನ ಸಿಎಂ ಸಿದ್ದರಾಮಯ್ಯ ಮೈಸೂರು ನಿವಾಸದಲ್ಲಿದ್ದರು. ನಾಯಕರು, ಮುಖಂಡರು ಸೇರಿದಂತೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಸಿಎಂ ವಾಪಸ್ಸಾಗಿದ್ದಾರೆ. ಆದರೆ ಇನ್ನೂ ಕೂಡ ಅಭ್ಯರ್ಥಿ ಫೈನಲ್ ಆಗಿಲ್ಲ ಎನ್ನಲಾಗುತ್ತಿದೆ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ಪ್ರತಿಷ್ಠೆ ಕಣವಾಗಿದೆ. 8 ವಿಧಾನಸಭಾ ವ್ಯಾಪ್ತಿಯ ಕ್ಷೇತ್ರದಲ್ಲಿ 5 ಕ್ಷೇತ್ರದಲ್ಲಿ ಕೈ ಶಾಸಕರಿದ್ದಾರೆ. ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ನರಸಿಂಹರಾಜ, ಚಾಮರಾಜ ಕ್ಷೇತ್ರದಲ್ಲಿ ಕೈ ಶಾಸಕರಿದ್ದು ಹುಣಸೂರು, ಚಾಮುಂಡೇಶ್ವರಿಯಲ್ಲಿ ಜೆಡಿಎಸ್, ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿ ಇದೆ. ಐದು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಗೆಲ್ಲುವ ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಯುತ್ತಿದೆ.

ಕೊನೇ ಕ್ಷಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಾರಾ ಡಾ ಯತೀಂದ್ರ ಸಿದ್ದರಾಮಯ್ಯ?

ಇನ್ನು ನಿನ್ನೆ ನಡೆದ ಮಹತ್ವದ ಸಭೆಗಳಲ್ಲಿ ಡಾ ಯತೀಂದ್ರ ಕಣಕ್ಕಿಳಿಸಲು ಒತ್ತಡ ಹೆಚ್ಚಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಎದರು ಯತೀಂದ್ರ ಮಾತ್ರ ಪ್ರಬಲ ಅಭ್ಯರ್ಥಿ ಎಂದು ಕೈ ನಾಯಕರು ಸಿಎಂ‌ ಸಿದ್ದರಾಮಯ್ಯಗೆ ಮನದಟ್ಟು ಮಾಡಿದ್ದಾರೆ. ಇಂದು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ