ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು: ಮೈಸೂರಿನ ಕಾರ್ಖಾನೆಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು: ಮೈಸೂರಿನ ಕಾರ್ಖಾನೆಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಿಎಂ ಸಿದ್ದರಾಮಯ್ಯ
Follow us
TV9 Web
| Updated By: Ganapathi Sharma

Updated on: Dec 23, 2023 | 2:01 PM

ಮೈಸೂರು, ಡಿಸೆಂಬರ್ 23: ಮೈಸೂರು (Mysuru) ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಆದ್ಯತೆ ಸಿಗಬೇಕು. ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ಸಿದ್ದರಾಮಯ್ಯ ಹೇಳಿದರು.

ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು. ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ‌ ಮಾಡಿಕೊಳ್ಳುವುದು ಸೂಕ್ತ ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನಿಂಗ್: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ. ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಮುಖ್ಯಮಂತ್ರಿಗಳು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ, ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಡಳಿತದ ಅಧಿಕಾರಿಗಳು ಸಭೆಯಲ್ಲಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ