ಮೈಸೂರು ರೆಸಾರ್ಟ್​​ನಲ್ಲಿ ಕುಳಿತು ಸಿಎಂ ಸಿದ್ದರಾಮಯ್ಯ ಆಪರೇಷನ್ ಹಸ್ತ: ಯಡಿಯೂರಪ್ಪ ಆಪ್ತರಿಗೆ ಗಾಳ

ಮೈಸೂರಿನ ಹೆಚ್​ಡಿ ಕೋಟೆಯ ಖಾಸಗಿ ರೆಸಾರ್ಟ್​ನಲ್ಲಿ ಮೂರು ದಿನ ವಾಸ್ತವ್ಯ ಹೂಡಿರುವ ಸಿಎಂ ಸಿದ್ದರಾಮಯ್ಯ ಅಲ್ಲಿಂದಲೇ ಮೈಸೂರು ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ರಣತಂತ್ರ ಹೆಣೆಯುತ್ತಿದ್ದಾರೆ. ಅದಕ್ಕಾಗಿ ಆಪರೇಷನ್ ಹಸ್ತಕ್ಕೆ ಅಣಿಯಾಗಿರುವ ಅವರು, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಆಪ್ತರಿಗೇ ಗಾಳ ಹಾಕಿದ್ದಾರೆ.

ಮೈಸೂರು ರೆಸಾರ್ಟ್​​ನಲ್ಲಿ ಕುಳಿತು ಸಿಎಂ ಸಿದ್ದರಾಮಯ್ಯ ಆಪರೇಷನ್ ಹಸ್ತ: ಯಡಿಯೂರಪ್ಪ ಆಪ್ತರಿಗೆ ಗಾಳ
ಸಿದ್ದರಾಮಯ್ಯ
Follow us
ದಿಲೀಪ್​, ಚೌಡಹಳ್ಳಿ
| Updated By: Ganapathi Sharma

Updated on:Mar 26, 2024 | 8:07 AM

ಮೈಸೂರು, ಮಾರ್ಚ್​ 26: ಲೋಕಸಭೆ ಚುನಾವಣೆಯಲ್ಲಿ (Lok Sabha Elction) ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಗೆಲ್ಲಿಸಲು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ (Siddaramaiah) ಮೂರು ದಿನಗಳ ಮೈಸೂರು (Mysuru) ಪ್ರವಾಸದಲ್ಲಿದ್ದಾರೆ. ಇದೇ ವೇಳೆ, ಮೈಸೂರಿನ ರೆಸಾರ್ಟ್​ನಲ್ಲಿ ಕುಳಿತುಕೊಂಡೇ ‘ಆಪರೇಷನ್ ಹಸ್ತ’ಕ್ಕೆ (Operation Hasta) ಮುಂದಾಗಿದ್ದಾರೆ. ಮಾಜಿ ಸಿಎಂ, ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಆಪ್ತರಿಗೆ ಸಿಎಂ ಸಿದ್ದರಾಮಯ್ಯ ಗಾಳ ಹಾಕಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಆಪ್ತ ಹೆಚ್​​ವಿ ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಸಿದ್ದರಾಮಯ್ಯ ಗಾಳ ಹಾಕಿದ್ದಾರೆ. ವರುಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸದಾನಂದರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿದ್ದಾರೆ.

ಈ ಹಿಂದೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಬೆನ್ನಿಗೆ ನಿಂತಿದ್ದ ಸದಾನಂದರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಸಿದ್ದರಾಮಯ್ಯ ಬಹುತೇಕ ಯಶಸ್ವಿಯಾಗಿದ್ದಾರೆ. ಸದಾನಂದ ವೀರಶೈವ ಸಮುದಾಯದ ಮುಖಂಡ ಸಹ ಆಗಿದ್ದು, ಅವರನ್ನು ಸೆಳೆಯುವ ಮೂಲಕ ವೀರಶೈವ ಮತಗಳ ಕ್ರೂಡೀಕರಣಕ್ಕೂ ಸಿದ್ದರಾಮಯ್ಯ ಯೋಜನೆ ರೂಪಿಸಿದ್ದಾರೆ.

ಇವರುಗಳ ಜೊತೆ ಮಾಜಿ ಮೇಯರ್ ಎಲ್ ಬೈರಪ್ಪ, ಪಾಲಿಕೆಯ ಕೆಲವು ಮಂದಿ ಮಾಜಿ ಸದಸ್ಯರು ಕೂಡ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಮೈಸೂರು ಕೊಡಗು, ಚಾಮರಾಜನಗರ ಕ್ಷೇತ್ರವನ್ನು ಶತಾಯುಗತಾಯ ಗೆಲ್ಲಲೇ ಬೇಕು ಎಂದು ಯೋಜನೆ ಹಾಕಿಕೊಂಡಿರುವ ಸಿದ್ದರಾಮಯ್ಯ, ಇದೇ ಕಾರಣಕ್ಕೆ ಆಪರೇಷನ್ ಹಸ್ತ ನಡೆಸುತ್ತಿದ್ದಾರೆ.

ದನ್ನೂ ಓದಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಶಾಕ್​​: ಯಡಿಯೂರಪ್ಪ ಆಪ್ತ ಹೆಚ್​​ವಿ ರಾಜೀವ್​ ಕಾಂಗ್ರೆಸ್​ಗೆ

ಮೈಸೂರು ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ವಿಚಾರವಾಗಿ ಈಗಾಗಲೇ ಪಕ್ಷದ ಶಾಸಕರು, ಮುಖಂಡರ ಜೊತೆ ಸಿದ್ದರಾಮಯ್ಯ ಒಂದು ಸುತ್ತಿನ ಸಭೆ ನಡೆಸಿದ್ದರು. ಭಾನುವಾರ ರಾತ್ರಿಯೇ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಖಾಸಗಿ ರೆಸಾರ್ಟ್​ಗೆ ತೆರಳಿದ್ದು, ವಿಶ್ರಾಂತಿ ನೆಪದಲ್ಲಿ ಪಕ್ಷದ ಗೆಲುವಿಗೆ ರಣತಂತ್ರ ರೂಪಿಸುತ್ತಿದ್ದಾರೆ.

ಇದನ್ನೂ ಓದಿ: ತವರು ಜಿಲ್ಲೆಯಲ್ಲಿ ಮೂರು ದಿನ ಸಿದ್ದರಾಮಯ್ಯ ಠಿಕಾಣಿ; ಮೈಸೂರು, ಚಾಮರಾಜನಗರ ಗೆಲ್ಲಲು ಮಾಸ್ಟರ್ ಪ್ಲಾನ್

ರೆಸಾರ್ಟ್ ಬಳಿ ಕಾರ್ಯಕರ್ತರು ಯಾರೂ ಕೂಡ ಬರಬಾರದೆಂದು ಸೂಚನೆ ನೀಡಿರುವ ಸಿದ್ದರಾಮಯ್ಯ, ಕೇವಲ ಶಾಸಕರು, ಪ್ರಮುಖ ಮುಖಂಡರಿಗೆ ಮಾತ್ರ ಭೇಟಿಗೆ ಅವಕಾಶ ನೀಡಿದ್ದಾರೆ. ಎರಡು ಲೋಕಸಭೆ ಕ್ಷೇತ್ರಗಳ ಎಲ್ಲಾ ವಿಧಾನಸಭಾ ಕ್ಷೇತ್ರದ ಇಂಚಿಂಚು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅದರ ಜತೆಗೆ, ಪಕ್ಷಕ್ಕೆ ಪೂರಕವಾಗಬಲ್ಲಂಥ ನಾಯಕರನ್ನು ಬಿಜೆಪಿಯಿಂದ ಸೆಳೆಯುತ್ತಿದ್ದಾರೆ. ಅದರಲ್ಲೂ ಯಡಿಯೂರಪ್ಪ ಆಪ್ತರನ್ನೇ ಸೆಳೆಯಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:07 am, Tue, 26 March 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್