ಪುತ್ರ ಯತೀಂದ್ರ ವಿಡಿಯೋ ವೈರಲ್​ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ 2 ದಿನ ಮೈಸೂರು ಜಿಲ್ಲೆ ಪ್ರವಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಕನಕ ವಿದ್ಯಾರ್ಥಿ ನಿಲಯ, ಕಡಲೆ ಮಾರಮ್ಮ ದೇವಸ್ಥಾನ ಉದ್ಘಾಟನೆ ಸೇರಿದಂತೆ ಹಲವು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಪುತ್ರ ಯತೀಂದ್ರ ವಿಡಿಯೋ ವೈರಲ್​ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ 2 ದಿನ ಮೈಸೂರು ಜಿಲ್ಲೆ ಪ್ರವಾಸ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Nov 17, 2023 | 7:13 AM

ಮೈಸೂರು ನ.17: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ತಂದೆ (ಸಿದ್ದರಾಮಯ್ಯ) ಅವರ ಜೊತೆ ಮೊಬೈಲ್​​ನಲ್ಲಿ ಮಾತನಾಡಿರುವ ವಿಡಿಯೋ ವಿವಾದಕ್ಕೆ ಕಾರಣವಾಗಿದ್ದು, ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು (ನ.17) ಮೈಸೂರು (Mysore) ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಕನಕ ವಿದ್ಯಾರ್ಥಿ ನಿಲಯ, ಕಡಲೆ ಮಾರಮ್ಮ ದೇವಸ್ಥಾನ ಉದ್ಘಾಟನೆ ಸೇರಿದಂತೆ ಹಲವು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಶುಕ್ರವಾರ ಮತ್ತು ಶನಿವಾರ (ನ.17,18) ಎರಡು ದಿನ ತವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 12.55ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ತೆರಳುತ್ತಾರೆ. ಅಲ್ಲಿಂದ ಮಧ್ನಾಹ್ನ 2 ಗಂಟೆಗೆ ರಸ್ತೆಯ ಮೂಲಕ ನಂಜನಗೂಡಿಗೆ ಭೇಟಿ ನೀಡುತ್ತಾರೆ. ನಂತರ 2.30ಕ್ಕೆ ಕನಕದಾಸ ಸಾರ್ವಜನಿಕ ವಿದ್ಯಾರ್ಥಿ ನಿಲಯ ಉದ್ಘಾಟಿಸಲಿದ್ದಾರೆ. ಬಳಿಕ 3 ಗಂಟೆಗೆ ಕಳಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಡೇಮಾಲಮ್ಮ ದೇವಸ್ಥಾನ ಲೋಕಾರ್ಪಣೆಗೊಳಿಸುತ್ತಾರೆ. ಬಳಿಕ ಮೈಸೂರಿಗೆ ವಾಪಸ್​​ ಆಗುತ್ತಾರೆ.

ಇದನ್ನೂ ಓದಿ: ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯ ನಿವೃತ್ತಿ: ಪುತ್ರನ ವಿಡಿಯೋ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಶನಿವಾರ (ನ.18) ರ ಪ್ರವಾಸ

18 ರಂದು ಬೆಳಿಗ್ಗೆ 10ಗಂಟೆಗೆ ದಿವಂಗತ ಪ.ಮಲ್ಲೇಶ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿ ದಿ ಸ್ಟೇಟ್ ಆಫ್ ದಿ ಆರ್ಟ್ ಮ್ಯಾನುಫ್ಯಾಕ್ಟರಿಂಗ್ ಫೆಸಿಲಿಟಿ ಆಫ್ ಐಟಿಸಿ ಇಂಡಿವಿಶನ್ ಲಿಮಿಟೆಡ್​ನ ಸಮಾರಂಭಲ್ಲಿ ಭಾಗಿಯಾಗುತ್ತಾರೆ.

ಸಂಜೆ 4 ಗಂಟೆಗೆ ಎಸ್‌ವಿಇಐ ವಿದ್ಯಾಸಂಸ್ಥೆಯ ರಜತ ಮಹೋತ್ಸವ ಮತ್ತು ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ನರೆವೇರಿಸಿ, ಸಂಜೆ 4.30ಕ್ಕೆ ಕಲಾಮಂದಿರದಲ್ಲಿ ಡಾ. ಹರೀಶ್ ಕುಮಾರ್ ಬರೆದಿರುವ ಆಧುನಿಕ ಭಾರತದ ನಿರ್ಮಾತೃ ಡಾ. ಬಾಬು ಜಗಜೀವನರಾಮ್ ಮತ್ತು ಬಾಬೂಜಿ ಚಿತ್ರ ಸಂಪುಟ ಬಿಡುಗಡೆ ಮಾಡಲಿದ್ದಾರೆ. ರಾತ್ರಿ 7 ಗಂಟೆ ರಸ್ತೆ ಮೂಲಕ ಮದ್ದೂರು ತಾಲ್ಲೂಕಿನ ಶಿವಪುರ ಗ್ರಾಮಕ್ಕೆ ತೆರಳಲಿದ್ದಾರೆ.

ಏನಿದು ಯತೀಂದ್ರ ಸಿದ್ದರಾಮಯ್ಯ ವಿಡಿಯೋ

ಆಶ್ರಯ ಸಮಿತಿ ಅಧ್ಯಕ್ಷರಾಗಿರುವ (ಸಾಂವಿಧಾನಿಕ ಹುದ್ದೆ) ಯತೀಂದ್ರ ಅವರು ಜನ ಸಂಪರ್ಕ ಸಭೆಯಲ್ಲಿ ಎಲ್ಲರ ಮನವಿ ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಲು ಯತೀಂದ್ರ ಅವರು ಯತ್ನಿಸಿದ್ದಾರೆ. ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಯತೀಂದ್ರ ಅವರು ದೂರವಾಣಿ ಕರೆ ಮಾಡಿ ಅಪ್ಪ ಹೇಳಿ ಅಂತ ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್​ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೋ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಹಾಗೆ ವಿಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಈ ವಿಡಿಯೋ, ಸುದ್ದಿ ಲಿಂಕ್​ ಇಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:08 am, Fri, 17 November 23

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!