ಮೈಸೂರಿನಲ್ಲಿ ನಿರ್ಮಾಣವಾಗುತ್ತಿದೆ ಸಿಎಂ ಸಿದ್ಧರಾಮಯ್ಯ ಕನಸಿನ ಅರಮನೆ! ಹೇಗಿದೆ ನೋಡಿ

ಸಿಎಂ ಸಿದ್ಧರಾಮಯ್ಯ ಅವರು ಕಳೆದ ವರ್ಷವೇ ತಮ್ಮ ಹೊಸ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಸದ್ಯ ಅಂತಿಮ ಹಂತಕ್ಕೆ ತಲುಪಿದೆ. ಮೈಸೂರು ಜಿಲ್ಲೆಯ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿ 85/120 ವಿಸ್ತೀರ್ಣದಲ್ಲಿ ಐಷಾರಾಮಿ ಬಂಗಲೆ ನಿರ್ಮಾಣ ಆಗುತ್ತಿದೆ.  

Follow us
ದಿಲೀಪ್​, ಚೌಡಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 31, 2023 | 3:53 PM

ಮೈಸೂರು, ಜುಲೈ 31: ಸಿಎಂ ಸಿದ್ಧರಾಮಯ್ಯ (Siddaramaiah) ಅವರ ಐಷಾರಾಮಿ ಕನಸಿನ ಮನೆ ನಿರ್ಮಾಣ ಕಾರ್ಯ ಅಂತಿಮ ಹಂತಕ್ಕೆ ತಲುಪಿದೆ. ಜಿಲ್ಲೆಯ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿ 85/120 ವಿಸ್ತೀರ್ಣದಲ್ಲಿ ಐಷಾರಾಮಿ ಬಂಗಲೆ ನಿರ್ಮಾಣ ಆಗುತ್ತಿದೆ. ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದಿಂದ ಹಲವು ಬಾರಿ ಆಯ್ಕೆಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ನಗರದಲ್ಲಿ ಸ್ವಂತ ಮನೆ ಇರಲಿಲ್ಲ. ಹಾಗಾಗಿ ಸದ್ಯ ಮೂರು ಅಂತಸ್ತಿನ ಮನೆ ನಿರ್ಮಾಣ ಆಗುತ್ತಿದೆ.

ಮಗನ ಪುಣ್ಯತಿಥಿ ವೇಳೆ ಹೊಸ ಮನೆಗೆ ಭೇಟಿ

ಸೆಲ್ಲಾರ್, ಗ್ರೌಂಡ್ ಫ್ಲೋರ್, ಫಸ್ಟ್ ಹಾಗೂ ಸೆಕೆಂಡ್ ಫ್ಲೋರ್ ಹೊಂದಿದ್ದು,​ ಬಂಗಲೆ ಪ್ರವೇಶಕ್ಕೆ ಎರಡು ಮುಖ್ಯ ದ್ವಾರಗಳಿವೆ. ಕಟ್ಟಡದ ಪ್ಲಾಸ್ಟರಿಂಗ್, ವೈರಿಂಗ್ ಹಾಗೂ ವುಡ್‌ವರ್ಕ್ ಕೆಲಸ ಪ್ರಗತಿಯಲ್ಲಿದೆ. ಸಿಎಂ ಸಿದ್ಧರಾಮಯ್ಯ ಇತ್ತೀಚೆಗೆ ಮಗನ ಪುಣ್ಯತಿಥಿಗೆ ಆಗಮಿಸಿದ್ದ ವೇಳೆ ಬಂಗಲೆ ವೀಕ್ಷಣೆ ಮಾಡಿದ್ದರು.

ಇದನ್ನೂ ಓದಿ: ಇನ್ಮುಂದೆ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ, ಚಾರ್ಜ್ ಎಷ್ಟು?

ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಅರ್ಧ ಗಂಟೆ ಮನೆ ಒಳಗೆ ಇದ್ದು ಕಾಮಗಾರಿ ವೀಕ್ಷಿಸಿದ್ದರು. ಸಿಎಂ ಸಿದ್ಧರಾಮಯ್ಯ ಇಲ್ಲಿಯವರೆಗೂ ನಾಲ್ಕು ಬಾರಿ ಮನೆ ಬದಲಿಸಿದ್ದಾರೆ. ಬಾಡಿಗೆ, ಬೆಂಬಲಿಗರು, ಸ್ನೇಹಿತರ ಮನೆಯಲ್ಲೇ ಸಿದ್ದರಾಮಯ್ಯ ವಾಸ ಮಾಡುತ್ತಿದ್ದರು.

ಬೇರೆಯವ ಮನೆಯಲ್ಲೇ ಕಾಲ ಕಳೆದುಕೊಂಡು ಬಂದ ಸಿಎಂ 

ಸದ್ಯ ಆಪ್ತ ಮರಿಸ್ವಾಮಿ ಮನೆಯಲ್ಲಿ ಸಿದ್ದರಾಮಯ್ಯ ವಾಸವಿದ್ದಾರೆ. ಇದಕ್ಕೂ ಮೊದಲು ವಿಜಯನಗರ ಎರಡನೇ ಹಂತ ಬಡಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೊದಲ ಮನೆ ಇತ್ತು. ಉಪ ಮುಖ್ಯಮಂತ್ರಿ ಆಗಿದ್ದ ವೇಳೆ ಆ ಮನೆಯನ್ನು ಮಾರಲಾಗಿತ್ತು. ನಂತರ ಬೇರೆಯವ ಮನೆಯಲ್ಲೇ ಕಾಲ ಕಳೆದುಕೊಂಡು ಬಂದಿದ್ದರು. ಆದರೆ ಸದ್ಯ ಸಿಎಂ ಸಿದ್ಧರಾಮಯ್ಯ ಅವರ ಕನಸಿನ ಮನೆ ನಿರ್ಮಾಣವಾಗುತ್ತಿದೆ.

ಇದನ್ನೂ ಓದಿ: ಬಿಎಂಟಿಸಿ ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ ₹79 ಲಕ್ಷ ವಂಚನೆ; 7 ಅಧಿಕಾರಿಗಳ ವಿರುದ್ಧ FIR

ಸಿಎಂ ಸಿದ್ಧರಾಮಯ್ಯ ಆಪ್ತರು ಹೇಳುವ ಪ್ರಕಾರ, ರಾಜಕೀಯ ನಿವೃತ್ತಿಯ ನಂತರ ಮೈಸೂರಿನಲ್ಲೇ ವಾಸಿಸಲು  ಯೋಚನೆಯಲ್ಲಿದ್ದಾರೆ ಎನ್ನಲಾಗಿದೆ. ಕಳೆದ ವರ್ಷವೇ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ