ಇಂದಿನಿಂದ ಮೂರು ದಿನ ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ, ವೇಳಾಪಟ್ಟಿ ಹೀಗಿದೆ

ಸಿಎಂ ಸಿದ್ದರಾಮಯ್ಯನವರು ಇಂದಿನಿಂದ 3 ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಂಜೆ 5.30ಕ್ಕೆ ಮೈಸೂರಿಗೆ ತೆರಳಿಲಿದ್ದು ಬಳಿಕ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು ರಾತ್ರಿ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ 10.15ಕ್ಕೆ ಸಿಎಂ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಲಿದ್ದಾರೆ. ಈ ಮೂಲಕ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇಂದಿನಿಂದ ಮೂರು ದಿನ ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ, ವೇಳಾಪಟ್ಟಿ ಹೀಗಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Oct 14, 2023 | 9:10 AM

ಮೈಸೂರು, ಅ.14: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2023) ಮಹೋತ್ಸವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah) ಇಂದಿನಿಂದ 3 ದಿನಗಳ ಕಾಲ ಮೈಸೂರು (Mysore) ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಂಜೆ 5.30ಕ್ಕೆ ಬೆಂಗಳೂರಿಂದ ರಸ್ತೆ ಮೂಲಕ ಮೈಸೂರಿಗೆ ತೆರಳಿಲಿದ್ದಾರೆ. ಬಳಿಕ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು ರಾತ್ರಿ ಮೈಸೂರಿನಲ್ಲಿಯೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಬೆಳಿಗ್ಗೆ 10.15ಕ್ಕೆ ಸಿಎಂ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಲಿದ್ದಾರೆ. ಈ ಮೂಲಕ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ದಸರಾ ಕುಸ್ತಿ ಪಂದ್ಯಾವಳಿಗೆ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದು, ದೇವರಾಜ ಅರಸು ವಿವಿದೊದ್ದೇಶ ಕ್ರೀಡಾಂಗಣದಲ್ಲಿ ವಸ್ತು ಪ್ರದರ್ಶನವನ್ನ ಉದ್ಘಾಟನೆ ಮಾಡಲಿದ್ದಾರೆ. ರಾತ್ರಿ 7ಕ್ಕೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಇನ್ನು ನಾಳೆ ರಾತ್ರಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲೇ ಉಳಿಯಲಿದ್ದಾರೆ.

ಅಕ್ಟೊಬರ್ 16 ರಂದು ಯುವರಾಜ ಕಾಲೇಜು ಹಿರಿಯ ಸಂಘದಿಂದ ಆಯೋಜಿಸಿರುವ 20ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ನಂತ್ರ ಮಧ್ಯಾಹ್ನ 12ಕ್ಕೆ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ ವತಿಯಿಂದ ಪೌರಕಾರ್ಮಿಕರಿಗೆ ನಿರ್ಮಿಸಿರುವ ಸಮುದಾಯ ಭವನವನ್ನ ಸಿಎಂ ಉದ್ಘಾಟಿಸಲಿದ್ದಾರೆ. ಸಂಜೆ 4 ಗಂಟೆಗೆ ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಕನಕ ಗುರು ಪೀಠದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಲಿದ್ದಾರೆ. ಅ.16ರ ಸಂಜೆ 5.55ಕ್ಕೆ ಮೈಸೂರಿನಿಂದ ಸಿಎಂ ಸಿದ್ದರಾಮಯ್ಯ ನಿರ್ಗಮಿಸಲಿದ್ದಾರೆ. ಮೈಸೂರಿನ ಮಂಡಕಹಳ್ಳಿ ಏರ್​ಪೋರ್ಟ್​ನಿಂದ​ ಬೆಂಗಳೂರಿಗೆ ಸಿಎಂ ವಾಪಸ್ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: Mysore Dasara 2023: ಮೈಸೂರು ದಸರಾ ಆರಂಭದಲ್ಲೇ ವಿಘ್ನ, ತಪ್ಪಿದ ಭಾರೀ ಅನಾಹುತ!

ಗಜಪಡೆಗೆ ಸಿಡಿಮದ್ದು ತಾಲೀಮು ಭರ್ಜರಿ

ವಿಶ್ವವಿಖ್ಯಾತ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಸಿಡಿಮದ್ದು ತಾಲೀಮು ನಡೆಸಲಾಯಿತು. ನಗರ ಸಶಸ್ತ್ರ ಮೀಸಲು ಪಡೆಯವರು ಫಿರಂಗಿಯಲ್ಲಿ ಸಿಡಿಮದ್ದುಗಳನ್ನು ಸಿಡಿಸಿ ಆನೆಗಳು ಭಾರೀ ಸದ್ದಿಗೆ ಹೊಂದಿಕೊಳ್ಳುವಂತೆ ತರಬೇತಿ ನೀಡಿದ್ರು. ವಿಜಯದಶಮಿಯಂದು ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವಾಗ, ರಾಷ್ಟ್ರಗೀತೆ ನುಡಿಸುವಾಗ ಗೌರವಾರ್ಥವಾಗಿ 3 ಸುತ್ತಿನಲ್ಲಿ 21 ಬಾರಿ ಕುಶಲ ತೋಪುಗಳನ್ನು ಸಿಡಿಸುವುದು ಸಂಪ್ರದಾಯ. ಹೀಗೆ ಸಿಡಿಮದ್ದು ಸಿಡಿಸಿದಾಗ ಉಂಟಾಗುವ ಶಬ್ದದಿಂದ ಆನೆಗಳು, ಕುದುರೆಗಳು ವಿಚಲಿತಗೊಳ್ಳುತ್ತವೆ. ಹೀಗಾಗಿ ಆನೆಗಳು ಕುದುರೆಗಳು ಈ ಸಿಡಿಮದ್ದು ಶಬ್ದಕ್ಕೆ ಹೊಂದಿಕೊಳ್ಳಲು ಈ ತಾಲೀಮು ನಡೆಸಲಾಯಿತು.

ಅರಮನೆಯ ಮುಂಭಾಗ ವಸ್ತು ಪ್ರದರ್ಶನ ಆವರಣದಲ್ಲಿ ಆನೆಗಳಿಗೆ ಈ ತರಬೇತಿ ನೀಡಲಾಯಿತು. ಮೊದಲ ಸಲ ಒಟ್ಟು 14 ಆನೆಗಳು, 43 ಕುದುರೆಗಳು ತಾಲೀಮಿನಲ್ಲಿ ಭಾಗವಹಿಸಿದ್ವು. ಆದ್ರೆ, 2ನೇ ಬಾರಿ ಕೇವಲ 9 ಆನೆಗಳು ಹಾಗೂ 28 ಕುದುರೆಗಳು ಮಾತ್ರ ಭಾಗಿಯಾಗಿದ್ವು.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್