AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ನನಗೆ ಸಿದ್ಧರಾಮಯ್ಯ ಗೊತ್ತು, ಅವರ ಮಗ ಯತೀಂದ್ರ ಗೊತ್ತು”: ಕುಟುಂಬವೊಂದಕ್ಕೆ ಕೈ ಮುಖಂಡನಿಂದ ಜೀವ ಬೆದರಿಕೆ

ಸಿಎಂ ಸಿದ್ಧರಾಮಯ್ಯ ಕ್ಷೇತ್ರದಲ್ಲಿ ಮತ್ತೊಂದು ಬೆದರಿಕೆ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆ ವರುಣ ವ್ಯಾಪ್ತಿಯ ಹೆಬ್ಯಾ ಗ್ರಾಮದ ಅಮಿತಾಬ್ ಎಂಬುವರ ಕುಟುಂಬಕ್ಕೆ ವರುಣ ಕ್ಷೇತ್ರದ ಕಾಂಗ್ರೆಸ್​ ಮುಖಂಡ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.ಕಾಂಗ್ರೆಸ್ ಮುಖಂಡ ರಾಜು ಎಂಬುವವರು ಜಮೀನು ವಿಚಾರಕ್ಕೆ ಅಮಿತಾಬ್ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ನನಗೆ ಸಿದ್ಧರಾಮಯ್ಯ ಗೊತ್ತು, ಅವರ ಮಗ ಯತೀಂದ್ರ ಗೊತ್ತು: ಕುಟುಂಬವೊಂದಕ್ಕೆ ಕೈ ಮುಖಂಡನಿಂದ ಜೀವ ಬೆದರಿಕೆ
ಕುಟುಂಬವೊಂದಕ್ಕೆ ಕೈ ಮುಖಂಡನಿಂದ ಜೀವ ಬೆದರಿಕೆ
ರಾಮ್​, ಮೈಸೂರು
| Edited By: |

Updated on:Jan 21, 2026 | 4:42 PM

Share

ಮೈಸೂರು, ಜ.21: ಕಾಂಗ್ರೆಸ್​​ ಮುಖಂಡರು ದಬ್ಬಾಳಿಕೆ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ಗಾಗೆ ವೈರಲ್​ ಆಗುತ್ತಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣದಲ್ಲಿ ಮಹಿಳಾ ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಗಂಭೀರ ಪ್ರಕರಣವೊಂದು ನಡೆದಿತ್ತು. ಇದೀಗ ಮತ್ತೊಂದು ಪ್ರಕರಣ ಸಿಎಂ ಸಿದ್ಧರಾಮಯ್ಯ (Congress leader threats) ಕ್ಷೇತ್ರದಲ್ಲೇ ನಡೆದಿದೆ. ವರುಣ ಕ್ಷೇತ್ರದ ಕಾಂಗ್ರೆಸ್​ ಮುಖಂಡ ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆ ವರುಣ ವ್ಯಾಪ್ತಿಯ ಹೆಬ್ಯಾ ಗ್ರಾಮದ ಅಮಿತಾಬ್ ಎಂಬುವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಮುಖಂಡ ರಾಜು ಎಂಬುವವರು ಜಮೀನು ವಿಚಾರಕ್ಕೆ ಅಮಿತಾಬ್ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜು ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜಮೀನು ವಿಚಾರಕ್ಕಾಗಿ ರಾಜು ಅಮಿತಾಬ್ ಅವರ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ. ಜತೆಗೆ ಹಲ್ಲೆ ನಡೆಸಲು ಕೂಡ ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ನಮಗೆ ಸಿದ್ದರಾಮಯ್ಯ ಗೊತ್ತು, ಯತೀಂದ್ರ ಗೊತ್ತು ಎಂದು ಧಮ್ಕಿ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಮನೆಯ ಮೇಲೆ ಕಲ್ಲು ತೋರಾಟ ಕೂಡ ಮಾಡಿದ್ದಾರೆ ಎಂದು ಅಮಿತಾಬ್ ಕುಟುಂಬ ದೂರಿನಲ್ಲಿ ಹೇಳಿದ್ದಾರೆ.

ನಾವು ಹೇಳಿದವರಿಗೆ ಜಾಗ ಕೊಡಬೇಕು , ಒಂದು ವೇಳೆ ಕೊಡಲಿ ಎಂದರೆ ಕಥೆ ಬೇರೆಯಾಗುತ್ತದೆ. ನಾನು ಯಾರು ಗೊತ್ತಾ?, ನನಗೆ ಸಿಎಂ ಸಿದ್ಧರಾಮಯ್ಯ ಕೂಡ ಗೊತ್ತು, ಅವರ ಮಗ ಯತೀಂದ್ರ ಸಹ ಗೊತ್ತು. ಮನೆಯೊಳಗೆ ಬಂದು ನಮ್ಮ ಮೇಲೆ ಕೈ ಮಾಡಿದ್ದಾರೆ. ರಾತ್ರಿ ಹೊತ್ತು ಜೀವ ಭಯದಲ್ಲೇ ಕಳೆಯುತ್ತಿದ್ದೇವೆ. ಮನೆಗೆ ಕಲ್ಲು ಕೂಡ ಹೊಡೆದಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಗಮನಕ್ಕೆ ತಂದರು ಯಾವುದೇ ಪ್ರಯೋಜನ ಆಗಿಲ್ಲ ಎಂದು ಅಮಿತಾಬ್ ಹೇಳಿದ್ದಾರೆ.

ಇದನ್ನೂ ಓದಿ: ‘ಇಲ್ಲೇ ನಿನ್ನ ಹೆಣ ಬೀಳತ್ತೆ!’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!

ಸಿಎಂ ಕ್ಷೇತ್ರದಲ್ಲಿ ಮಹಿಳಾ ಸರ್ಕಾರಿ ಅಧಿಕಾರಿ ಅವಾಚ್ಯ ಶಬ್ಧಗಳಿಂದ ನಿಂದನೆ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಇತ್ತೀಚೆಗೆ ಗ್ರಾಮ ಆಡಳಿತಾಧಿಕಾರಿ ಜಿ. ಭವ್ಯಾ ಅವರಿಗೆ ಜಿ.ಎಂ. ಪುಟ್ಟಸ್ವಾಮಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದರು. ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಮಾದರಿಯ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಗುರುತಿಸುವ ಮತ್ತು ಸ್ವಾಧೀನ ಪ್ರಕ್ರಿಯೆಯ ಹಿನ್ನೆಲೆಯಲ್ಲಿ, ಬಂಡೀಪಾಳ್ಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಜಿ. ಭವ್ಯಾ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಸೇರಿ ಜಮೀನು ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಅಡಕೆ ತೋಟ ನಿರ್ಮಿಸಿಕೊಂಡಿದ್ದ ಜಿ.ಎಂ. ಪುಟ್ಟಸ್ವಾಮಿ ಅಧಿಕಾರಿಗಳ ಮೇಲೆ ಆಕ್ರೋಶಗೊಂಡು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅಶ್ಲಿಲ ಪದಗಳಿಂದ ನಿಂದಿಸಿ ಕಾಂಗ್ರೆಸ್ ಮುಖಂಡ

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಹಾಗೂ ಅಶ್ಲಿಲ ಪದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದರು. ನಡು ರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಕೋಪಗೊಂಡು, ದೂರವಾಣಿ ಕರೆ ಮೂಲಕ ಅವ್ಯಾಚ್ಚ ಶಬ್ದಗಳನ್ನು ಬಳಸಿ ಬೆದರಿಕೆ ಹಾಕಿದ್ದರು. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್​​ ಮುಖಂಡರು ಸರ್ಕಾರಿ ಅಧಿಕಾರಿಗಳ ಮೇಲೆ ಹಾಗೂ ಸಾಮಾನ್ಯರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಅಧಿಕಾರಿಗಳು ಕೂಡ ಭಯದ ವಾತಾವರಣದಲ್ಲೇ ಕೆಲಸ ಮಾಡಬೇಕಾದ ಸ್ಥಿತಿ ಬಂದಿದೆ ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Wed, 21 January 26