ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸಲ್ಲ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ

ಮುಡಾ ಹಗರಣದ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಿಲ್ಲ ಎಂದರು. ಹಗರಣದ ಬಗ್ಗೆ ಸಿಎಂ ಏನೇನು ಮಾತನಾಡಿದರು? ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇ.ಡಿ ದಾಳಿಗೆ ಸಿಎಂ ಪ್ರತಿಕ್ರಿಯೆ ಏನಿತ್ತು ಎಂಬುದನ್ನು ತಿಳಿಯಲು ಮುಂದೆ ಓದಿ.

ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸಲ್ಲ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ
ಸಿದ್ದರಾಮಯ್ಯ
Follow us
ರಾಮ್​, ಮೈಸೂರು
| Updated By: Ganapathi Sharma

Updated on: Jul 10, 2024 | 1:33 PM

ಮೈಸೂರು, ಜುಲೈ 10: ಮುಡಾ ಹಗರಣದ ಹೆಸರು ಹೇಳುತ್ತಿದಂತೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ, ಎಷ್ಟು ಸಲ ಇದರ ಬಗ್ಗೆ ಹೇಳುವುದು? ಮುಡಾದಲ್ಲಿ 50:50 ರದ್ದಾಗಿದೆ. ನನ್ನ ಹೆಂಡತಿಯ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ. ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ಜಮೀನಿನನ್ನು ನಿಯಮಬಾಹಿರವಾಗಿ ಭೂಸ್ವಾಧೀನ ಮಾಡಿಕೊಂಡಿದ್ದರು. ಅದಕ್ಕೆ ಅವರೇ ತಪ್ಪಾಯಿತು ಎಂದು ಹೇಳಿ ಸೈಟ್ ಕೊಟ್ಟಿದ್ದಾರೆ. ಇದರಲ್ಲಿ ಯಾವ ವಿವಾದ ಇದೆ ಹೇಳಿ ಎಂದರು.

ಸುಮ್ಮನೇ ಪ್ರತಿಭಟನೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ. ಮುಡಾ ಅಕ್ರಮದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತಪ್ಪಾಗಿದೆ ಎಂಬುದು ತನಿಖೆಯಲ್ಲಿ ಗೊತ್ತಾದರೆ ಎಲ್ಲರೂ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಪ್ರಕರಣ ಸಿಬಿಐಗೆ ವಹಿಸುವ ವಿಚಾರ‌ವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪೊಲೀಸರನೇ ಸಮರ್ಥರಿಲ್ಲವಾ? ಎಲ್ಲದಕ್ಕೂ ಸಿಬಿಐ ಸಿಬಿಐ ಅನ್ನುವ ಬಿಜೆಪಿ ತಮ್ಮ ಅವಧಿಯಲ್ಲಿ ಎಷ್ಟು ಕೇಸ್​​​ಗಳನ್ನು ಸಿಬಿಐಗೆ ಕೊಟ್ಟಿದ್ದಾರೆ ಹೇಳಿ ಎಂದರು.

ಈಗೀನ ಸಿಬಿಐ ಮುಖ್ಯಸ್ಥ ಕೂಡ ಕರ್ನಾಟಕದಲ್ಲಿ ಕೆಲಸ ಮಾಡಿದವರು. ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ. ಮುಡಾ ಹಗರವನ್ನ ಸಿಬಿಐಗೆ ವಹಿಸುವುದಿಲ್ಲ ಎಂದು ಸಿಎಂ ಸ್ಪಷ್ಟವಾಗಿ ನಿರಾಕರಿಸಿದರು.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಸನಗೌಡ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇ.ಡಿ ದಾಳಿ

ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇಡಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿ, ಇಡಿ ಅಧಿಕಾರಿಗಳು ಅವರ ಕೆಲಸವನ್ನು ಮಾಡುತ್ತಾರೆ. ಇದರ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ. ಇಡಿ ದಾಳಿ ಮಾಡಲಿ, ನಾವು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಎಂದರು.

ಚಾಮರಾಜನಗರದಲ್ಲಿ ಸಿಎಂಗಾಗಿ ಕಾದು ಸುತ್ತಾದ ಕಾರ್ಯಕರ್ತರು

ಚಾಮರಾಜನಗರದಲ್ಲಿ ಕೃತಜ್ಞತಾ ಕಾರ್ಯಕ್ರಮ ಬೆಳೆಗ್ಗೆ 11 ಗಂಟೆಗೆ ಆರಂಭವಾಗಬೇಕಿತ್ತು. ಆದರೆ, 12.30 ಆದರೂ ಸಿಎಂ ಬಾರದ ಕಾರಣ ಕಾರ್ಯಕ್ರಮ ಆರಂಭವಾಗಿಲ್ಲ. ಪರಿಣಾಮವಾಗಿ 8 ವಿಧಾನಸಭಾ ಕ್ಷೇತ್ರಗಳಿಂದ ಚಾಮರಾಜನಗರಕ್ಕೆ ಬಂದಿರುವ ಸಾವಿರಾರು ಮಂದಿ ಕಾಯುವಂತಾಯಿತು. ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಕೃತಜ್ಞತಾ ಕಾರ್ಯಕ್ರಮ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್