ಲೋಕಸಭೆಗಾಗಿ ಕಾಂಗ್ರೆಸ್ 30 ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡಿಲ್ಲವಾ? ಎಂದು ಜೆಡಿಎಸ್ ಮೈತ್ರಿ ಸಮರ್ಥಿಸಿಕೊಂಡ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್
ಕಾಂಗ್ರೆಸ್‌ನಲ್ಲಿ ಲಿಂಗಾಯತರ ಕಡೆಗಣನೆ ಆರೋಪ ವಿಚಾರ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರ ತುಂಬಾ ಆಘಾತಕಾರಿಯಾದುದು. ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅವರು ಹೇಳಿರುವ ಈ ಮಾತು ತುಂಬಾ ಗಂಭೀರವಾದದ್ದು ಎಂದಿದ್ದಾರೆ ಸಂಸದ ವಿ ಶ್ರೀನಿವಾಸಪ್ರಸಾದ್.
ಮೈಸೂರು, ಅಕ್ಟೋಬರ್ 2: ಲೋಕಸಭೆ ಚುನಾವಣೆಗಾಗಿ (Lok Sabha elections 2024) ಕಾಂಗ್ರೆಸ್ಸಿಗರು (Congress) 30 ಪಕ್ಷಗಳ ಜತೆ ಮೈತ್ರಿ (Alliance) ಮಾಡಿಕೊಂಡಿದ್ದಾರೆ. ಅಂತಹುದರಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ತಪ್ಪೇನು ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವನ್ನು (BJP-JDS alliance) ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ (MP V Srinivas Prasad) ಸಮರ್ಥಿಸಿಕೊಂಡಿದ್ದಾರೆ. ಅವರು ಮೈತ್ರಿ ಮಾಡಿಕೊಂಡರೆ ತಪ್ಪಲ್ಲ, ಇವರು ಮಾಡಿಕೊಂಡ್ರೆ ತಪ್ಪಾ? ಮೈತ್ರಿ ಪಕ್ಷಗಳ ಸೋಲು, ಗೆಲುವಿನ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಸಂಸದ ಶ್ರೀನಿವಾಸ ಪ್ರಸಾದ್ ಇತ್ತೀಚಿನ ಮೈತ್ರಿ ರಾಜಕಾರಣಗಳ ಬಗ್ಗೆ ಷರಾ ಬರೆದಿದ್ದಾರೆ.
ಇನ್ನು ಕಾಂಗ್ರೆಸ್‌ನಲ್ಲಿ ಲಿಂಗಾಯತರ ಕಡೆಗಣನೆ ಆರೋಪ ವಿಚಾರ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರ ತುಂಬಾ ಆಘಾತಕಾರಿಯಾದುದು. ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅವರು ಹೇಳಿರುವ ಈ ಮಾತು ತುಂಬಾ ಗಂಭೀರವಾದದ್ದು ಎಂದಿದ್ದಾರೆ ಸಂಸದ ವಿ ಶ್ರೀನಿವಾಸಪ್ರಸಾದ್.
ರೀ ಸಿದ್ದರಾಮಯ್ಯ, ಇದನ್ನು ನೀವು ಹೇಳುವ ಅವಶ್ಯಕತೆ ಇಲ್ಲ – ಸಂಸದ ಶ್ರೀನಿವಾಸಪ್ರಸಾದ್
ಕಾವೇರಿ ವಿಚಾರದಲ್ಲಿ ರಾಜ್ಯ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ ಎಂಬ ಕಾಂಗ್ರೆಸ್ಸಿಗರ ಆರೋಪಕ್ಕೆ ಸಂಸದ ವಿ. ಶ್ರೀನಿವಾಸ ಪ್ರಸಾದ್ ತಿರುಗೇಟು ನೀಡಿದ್ದಾರೆ. ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದೇವೆ. ನಾವೆಲ್ಲರೂ ಒಗ್ಗಟ್ಟಾಗಿ ಹೋಗುತ್ತಿದ್ದೇವೆ. ಈ ವಿಚಾರದಲ್ಲಿ ಪ್ರತಿಯೊಬ್ಬರೂ ಮಾತನಾಡುವ ಅವಶ್ಯಕತೆ ಇಲ್ಲ. ನಾವು ಕಾಂಗ್ರೆಸ್ ನಾಯಕರಿಂದ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ. ಕಾವೇರಿ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ಮಾಡಬೇಕು ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಸೂಕ್ಷ್ಮವಾಗಿ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ