Textbook Revision: ದಪ್ಪಚರ್ಮದ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ; ಕಾಂಗ್ರೆಸ್ ನಾಯಕ ಮಹದೇವಪ್ಪ ಟೀಕೆ
ಸರ್ಕಾರದ ನಿಲುವಿನ ಬಗ್ಗೆ ಕಾಂಗ್ರೆಸ್ ನಾಯಕ ಎಚ್.ಸಿ.ಮಹದೇವಪ್ಪ ಕಟುವಾಗಿ ಟೀಕಿಸಿದ್ದಾರೆ
ಮೈಸೂರು: ಪರಿಷ್ಕೃತ ಪಠ್ಯ ಪುಸ್ತಕಗಳನ್ನು (Revised TextBooks) ಹಿಂದಕ್ಕೆ ಪಡೆಯುವುದಿಲ್ಲ ಎನ್ನುವ ಸರ್ಕಾರದ ನಿಲುವಿನ ಬಗ್ಗೆ ಕಾಂಗ್ರೆಸ್ ನಾಯಕ ಎಚ್.ಸಿ.ಮಹದೇವಪ್ಪ (HC Mahadevappa) ಕಟುವಾಗಿ ಟೀಕಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ದಪ್ಪ ಚರ್ಮದ ಸರ್ಕಾರ. ಅವರಿಗೆ ಕಣ್ಣು ಕಾಣುವುದಿಲ್ಲ, ಕಿವಿಯೂ ಕೇಳುವುದಿಲ್ಲ. ಜನಾಭಿಪ್ರಾಯಕ್ಕೆ ಈ ಸರ್ಕಾರ ಎಂದಿಗೂ ಮನ್ನಣೆ ನೀಡಿಲ್ಲ. ಕೋಮುವಾದದ (Communalism) ಅಫೀಮನ್ನು ಪಠ್ಯಪುಸ್ತಕದಲ್ಲಿ ಸೇರಿಸುವುದು ಇವರ ಉದ್ದೇಶ ಎಂದು ಹೇಳಿದರು.
ಕೋಮುವಾದದ ಉದ್ದೇಶ ಇರುವುದರಿಂದಲೇ ಯಾರ ಮಾತನ್ನೂ ಇವರು ಕೇಳುತ್ತಿಲ್ಲ. ಈ ಸರ್ಕಾರಕ್ಕೆ ಅಂಬೇಡ್ಕರ್, ಬಸವಣ್ಣ, ಕುವೆಂಪು, ಕನಕದಾಸರ ಬಗ್ಗೆ ಗೌರವ ಇಲ್ಲ. ಈ ವಿಚಾರವು ಪಠ್ಯ ಪರಿಷ್ಕರಣೆಯ ಮೂಲಕ ಮತ್ತೆ ಸಾಬೀತಾಗಿದೆ. ಬರಗೂರು ಸಮಿತಿ ತಪ್ಪು ಮಾಡಿಲ್ಲವೇ ಎಂದು ಇವರು ಈಗ ಹೇಳುವುದು ಸಮರ್ಥನೀಯವಲ್ಲ ಎಂದು ಹೇಳಿದರು.
ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ಘೋಷಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಸಾಮಾಜಿಕ ನ್ಯಾಯದ ಸಂಕೇತವಲ್ಲ. ಪ್ರಧಾನಿ ಹುದ್ದೆ, ರಾಷ್ಟ್ರಪತಿ ಹುದ್ದೆ, ಮುಖ್ಯಮಂತ್ರಿ ಹುದ್ದೆಯನ್ನು ಜಾತಿಯಿಂದ ನೋಡುವುದೇ ಸಂವಿಧಾನಕ್ಕೆ ಮಾಡುವ ಅವಮಾನ. ದ್ರೌಪದಿ ಮುರ್ಮು ಅವರು ಬಿಜೆಪಿಯಲ್ಲಿ ಹಲವು ಘಟಕಗಳಲ್ಲಿ ಕೆಲಸ ಮಾಡಿದ್ದಾರೆ. ಅವರ ಕಾರ್ಯವೈಖರಿ ಮತ್ತು ಸಾಮರ್ಥ್ಯದ ಆಧಾರದ ಮೇಲೆ ಅವಕಾಶ ನೀಡಲಾಗಿದೆ. ಜಾತಿ ನೋಡಿ ಅವರಿಗೆ ಸ್ಥಾನ ಕೊಡುವುದಾದರೆ ಅದು ತಪ್ಪು. ಬಿಜೆಪಿಯು ಇದರಲ್ಲೂ ಜಾತಿ ನಮೂದಿಸುತ್ತಾ ಸಂವಿಧಾನಕ್ಕೆ ಅಗೌರವ ತೋರುತ್ತಿದೆ ಎಂದು ದೂರಿದರು.
ಪ್ರತ್ಯೇಕ ರಾಜ್ಯದ ಬಗ್ಗೆ ಸಚಿವ ಉಮೇಶ್ ಕತ್ತಿ ನೀಡಿರುವ ಹೇಳಿಕೆ ಕುರಿತು ಪ್ರಸ್ತಾಪಿಸಿದ ಅವರು, ಕತ್ತಿ ನನಗೆ ಒಳ್ಳೆಯ ಸ್ನೇಹಿತ ಆದರೆ, ಅವನೊಬ್ಬ ಬುದ್ಧಿ ಇಲ್ಲದ ಅವಿವೇಕಿ. ಮಾಡುವುದಕ್ಕೆ ಕೆಲಸ ಇಲ್ಲದೆ ಏನೇನೋ ಕೆರೆದುಕೊಳ್ಳುತ್ತಿದ್ದಾನೆ. ಕತ್ತಿಗೆ ಮುಖ್ಯಮಂತ್ರಿ ಆಗುವ ಆಸೆ ಇದ್ದರೆ ಇಲ್ಲೇ ಆಗಲಿ. ಅದಕ್ಕಾಗಿ ಏಕೆ ಪ್ರತ್ಯೇಕ ರಾಜ್ಯ ಮಾಡಬೇಕು? ಉತ್ತರ ಕರ್ನಾಟಕ ಅಭಿವೃದ್ಧಿ ಕಂಡಿಲ್ಲ ಎಮದಾದರೆ ಅದರ ಹೊಣೆ ಯಾರದು ಎಂದು ಪ್ರಶ್ನಿಸಿದರು.
ಅರಣ್ಯ ಇಲಾಖೆಯಂಥ ಬಹು ಮುಖ್ಯವಾದ ಖಾತೆ ನಿರ್ವಹಿಸುತ್ತಿದ್ದರೂ ಇದ್ದರೂ ಕೆಲಸ ಇಲ್ಲದ ರೀತಿಯಲ್ಲಿ ಕಾಲಕಳೆಯುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಏನು ಆಗಿದೆ, ಏನು ಆಗಿಲ್ಲ ಎಂಬ ಪಟ್ಟಿ ಅವರ ಬಳಿಯೇ ಇದೆ. ಲಕ್ಷಾಂತರ ಜನರ ಹೋರಾಟದ ಫಲವಾಗಿ ಸೃಷ್ಟಿಯಾಗಿರುವ ಅಖಂಡ ಕರ್ನಾಟಕವನ್ನು ಪದೇಪದೇ ಒಡೆಯುವ ಮಾತನಾಡಬೇಡಿ. ಚುನಾವಣೆ ಹತ್ತಿರ ಬಂದಾಗಲೆಲ್ಲಾ ಇಂತಹ ಬೇಜವಾಬ್ದಾರಿ ಕೂಗು ಶುರು ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ಅಭಿವೃದ್ಧಿ ಚರ್ಚೆಗೆ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಬರಲಿ ಎನ್ನುವ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರಗೇಟು ಕೊಟ್ಟ ಅವರು, ನಾವು ಮಾಡಿರುವ ಅಭಿವೃದ್ಧಿ ಕಣ್ಣಿಗೆ ಕಾಣುತ್ತಿದೆ. ಏನೊಂದೂ ಕೆಲಸ ಮಾಡದೆ ಬರೀ ಬೊಗಳೆ ಬಿಟ್ಟುಕೊಂಡು ಓಡಾಡುತ್ತಿದ್ದಾರೆ. ಅಂಥವರ ಜೊತೆ ಏನು ಚರ್ಚೆ ಮಾಡುವುದು? ಅವರು ಏನಾದರೂ ಅಭಿವೃದ್ಧಿ ಮಾಡಿದ್ದರೆ ತಾನೆ ಚರ್ಚೆ ಮಾಡುವುದು. ಸುಮ್ಮನೆ ಕೆಲಸಕ್ಕೆ ಬಾರದ ಮಾತುಗಳನ್ನು ಆಡುತ್ತಾ ಕುಳಿತಿದ್ದಾರೆ. ನಾವು ಜಿಲ್ಲಾಸ್ಪತ್ರೆ ಕಟ್ಟದಿದ್ದರೆ ಕೋವಿಡ್ ಸಂದರ್ಭದಲ್ಲಿ ರೋಗಿಗಳನ್ನು ಎಲ್ಲಿ ಮಲಗಿಸುತ್ತಿದ್ದರು. ಇಂತಹ ನೂರು ಕೆಲಸ ಮಾಡಿದ್ದೇವೆ