AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್​: ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಗಡಿಪಾರಿಗೆ ಮನವಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಮೈಸೂರಿನ ಆರ್​​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ನಾಯಕ ಎಂ. ಲಕ್ಷ್ಮಣ ದೂರು ನೀಡಿದ್ದಾರೆ.

ಮುಡಾ ಕೇಸ್​: ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಗಡಿಪಾರಿಗೆ ಮನವಿ
ಎಂ ಲಕ್ಷ್ಮಣ, ಸ್ನೇಹಮಯಿ ಕೃಷ್ಣ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Aug 31, 2024 | 10:21 AM

Share

ಮೈಸೂರು, ಆಗಸ್ಟ್​ 31: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪಾತ್ರವೂ ಇದೆ ಅಂತ​ ರಾಜ್ಯಪಾಲರಿಗೆ ವಿರುದ್ಧ ದೂರು ನೀಡಿದ್ದ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು (Mysore) ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್​ ನಾಯಕ ಎಂ.ಲಕ್ಷ್ಮಣ (M Laxman) ದೂರು ನೀಡಿದ್ದಾರೆ.

ಸ್ನೇಹಮಯಿ ಕೃಷ್ಣ ವಿರುದ್ಧ ರಾಜ್ಯದ ಹಲವೆಡೆ 17 ಕ್ರಿಮಿನಲ್ ಕೇಸ್​ಗಳು​ ದಾಖಲಾಗಿವೆ. ಆಸ್ತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ ಭೂಮಿ ವಶಪಡಿಸಿಕೊಳ್ಳುವುದು, ನನ್ನನ್ನು ಸೇರಿ ನಗರದ ಗಣ್ಯರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾನೆ. ಆರ್​​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕ್ರಮ ಕೈಗೊಳ್ಳಿ. ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡಿ ಗೂಂಡಾ ಕಾಯ್ದೆ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು 2022-2023ನೇ ಸಾಲಿನಲ್ಲಿ ಒಟ್ಟು 110 ಅರ್ಜಿಗಳನ್ನು RTI ಮೂಲಕ ವಿವಿಧ ಇಲಾಖೆಗಳಿಗೆ ನೀಡಿ ದಾಖಲಾತಿಗಳನ್ನು ಪಡೆದು ಕೊಂಡಿದ್ದಾರೆ ಎಂದು ಪೊಲೀಸ್ ವರದಿ ಹೇಳುತ್ತಿದೆ. ಕೆಲ ಇಲಾಖೆಗಳ ನಕಲಿ ಸೀಲ್​ಗಳನ್ನು ಇಟ್ಟುಕೊಂಡು ಹಾಗೂ RTI ಮಾಹಿತಿ ಸೀಲ್‌ಗಳನ್ನು ನಕಲಿಯಾಗಿ ಮಾಡಿಸಿಕೊಂಡು ದಾಖಲೆಗಳನ್ನು ತಿರುಚಿ ಮತ್ತು ಕೆಲ ಅಕ್ಷರಗಳಿಗೆ whitenerನ್ನು ಹಚ್ಚಿರುವುದು ಕಂಡು ಬಂದಿದೆ.

ಇದನ್ನೂ ಓದಿ: ಮುಡಾ ಹಗರಣ ಆರೋಪಿತ ಅಧಿಕಾರಿ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ!

ಇವರ ವಿರುದ್ಧ ಸುಮಾರು 17 ಕ್ರಿಮಿನಲ್ ಪ್ರಕರಣಗಳು 10 ವರ್ಷದಿಂದ ಇದ್ದರೂ ಪೊಲೀಸ್ ಇಲಾಖೆ ಸೆಕ್ಯೂರಿಟಿ ಕೇಸ್​ನ್ನು 6 ತಿಂಗಳಿಗೊಮ್ಮೆ ಹಾಕಬೇಕಾಗಿರುವ ನಿಯಮವಿದ್ದರೂ ಹಾಕಿರುವುದಿಲ್ಲವೇಕೆ? ಇವರು ಒಬ್ಬ ರೌಡಿ ಶೀಟರ್ ಆಗಿದ್ದು ನಿರಂತರವಾಗಿ ನಗರದ ಗಣ್ಯರನ್ನು ಮತ್ತು ನನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿರುವ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದರೂ ಇವರ ಮೇಲೆ ಸೆಕ್ಯೂರಿಟಿ ಕೇಸ್​ನ್ನು ಪೊಲೀಸರು ಹಾಕದಿರುವುದು ಎಷ್ಟರಮಟ್ಟಿಗೆ ಸರಿ? ಇವನು ಒಬ್ಬ Habitual Black mailer ಆಗಿದ್ದರೂ ಮತ್ತು Extortion ನಲ್ಲಿ ತೊಡಗಿಸಿಕೊಂಡಿದ್ದರೂ ಪೊಲೀಸ್ ಇಲಾಖೆ ಜಾಣ ಕುರುಡನ್ನು ಪ್ರದರ್ಶಿಸುತ್ತಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:16 am, Sat, 31 August 24

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!