ಮೈಸೂರು: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ಯಾತ್ರಾ (Bharat Jodo Yatra) 3ನೇ ದಿನಕ್ಕೆ ಕಾಲಿಟ್ಟಿದೆ. ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿ, ಮಹಾತ್ಮಾ ಗಾಂಧಿ ಪ್ರತಿಮೆಗೆ ರಾಹುಲ್ ಪುಷ್ಪನಮನ ಸಲ್ಲಿಸಲಿದ್ದಾರೆ. ನಂತರ ಕಾರ್ಯಕರ್ತರಿಂದ ಸಸಿ ನೆಡುವ ಕಾರ್ಯಕ್ರಮವಿದೆ. ಬೆಳಗ್ಗೆ 10ಕ್ಕೆ ಬದನವಾಳು ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ, ಶಾಲೆಯ ಗೋಡೆಗೆ ಬಣ್ಣ ಹಚ್ಚುವುದು ಮತ್ತಿತರ ಶ್ರಮದಾನ ಚಟುವಟಿಕೆ ನಡೆಸಲಿದ್ದಾರೆ. ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ನಡೆಯಲಿರುವ ಸಂವಾದದಲ್ಲಿ ಗ್ರಾಮೋದ್ಯೋಗಿಗಳ ಜೊತೆಗೆ ಮಾತನಾಡಲಿದ್ದಾರೆ. ಸಂಜೆ 4 ಗಂಟೆಗೆ ಕಡಕೋಳ ಕೈಗಾರಿಕಾ ಪ್ರದೇಶದಿಂದ ಯಾತ್ರೆ ಮತ್ತೆ ಆರಂಭವಾಗಲಿದೆ. ಮೈಸೂರಿನ ಎಪಿಎಂಸಿ ಯಾರ್ಡ್ವರೆಗೆ ಪಾದಯಾತ್ರೆಯಲ್ಲಿ ಬರುವ ರಾಹುಲ್, ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಬದನವಾಳು ಗ್ರಾಮಕ್ಕೆ 1927ರ ಸ್ವಾತಂತ್ರ ಹೋರಾಟದ ಸಂದರ್ಭದಲ್ಲಿ ಮಹಾತ್ಮಾಂಧಿ ಭೇಟಿ ಕೊಟ್ಟಿದ್ದರು. ಈಗ ಭಾರತ ಐಕ್ಯತಾ ಯಾತ್ರೆಯ ವೇಳೆ ರಾಹುಲ್ ಗಾಂಧಿ ಬದನಾಳು ಗ್ರಾಮಕ್ಕೆ ಭೇಟಿ ನೀಡುತ್ತಿದ್ದಾರೆ. ಗ್ರಾಮದಲ್ಲಿ ನಡೆಯಲಿರುವ ಹಲವು ಚಟುವಟಿಕೆಗಳಲ್ಲಿ ಮದ್ಯಾಹ್ನ 3 ಗಂಟೆಯವರೆಗೂ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ರಾಹುಲ್ ಗಾಂಧಿಗಾಗಿ ವಿಶೇಷ ವೇದಿಕೆ ಸಿದ್ಧವಾಗಿದ್ದು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಕಾಯುತ್ತಿದ್ದಾರೆ.
ಬದನಾಳು ಗ್ರಾಮದಲ್ಲಿ ಸಂವಾದದ ನಂತರ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ರಾಹುಲ್ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ರಾಹುಲ್ ದೇಗುಲಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಸಂಜೆ 4 ಗಂಟೆಯಿಂದ ಅವರು ಮತ್ತೆ ತಮ್ಮ ಪಾದಯಾತ್ರೆ ಮುಂದುವರಿಸಲಿದ್ದಾರೆ.
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗಾಯಕಿ ಸಂಗೀತಾ ಕಟ್ಟಿ ಗುಲಾಬಿ ಹೂ ನೀಡಿ ಸ್ವಾಗತಿಸಿದರು. ಗ್ರಾಮದಲ್ಲಿಯೇ ಸಿದ್ದರಾಮಯ್ಯ ಉಪಹಾರ ಸೇವಿಸಲಿದ್ದಾರೆ. ಗ್ರಾಮಕ್ಕೆ ಕಾಂಗ್ರೆಸ್ನ ಹಲವು ಹಿರಿಯ ನಾಯಕರು ಭೇಟಿ ನೀಡಿದ್ದಾರೆ.
Published On - 8:20 am, Sun, 2 October 22