ಮಾಂಸದೂಟ ಮಾಡಿ ಸುತ್ತೂರು ಮಠಕ್ಕೆ ಭೇಟಿ: ಬಿಜೆಪಿಯವರು ಲಿವರ್ ಫ್ರೈ ಮಾಡಿ ಕೊಟ್ಟಿದ್ರಾ? ಮಹಾದೇವಪ್ಪ ಕಿಡಿ

ಮೊನ್ನೆಯಷ್ಟೇ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದ ಸುತ್ತೂರು ಜಾತ್ರೆಯಲ್ಲಿ ಕಾಂಗ್ರೆಸ್ ನಾಯಕರು ಮಾಂಸ ಸೇವಿಸಿ (Non veg) ಮಠಕ್ಕೆ (suttur Mutt)ಭೇಟಿ ನೀಡಿದ್ದಾರೆಂದು ಬಿಜೆಪಿ ಆರೋಪ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯನವರು, ‘ಇಂತಹ ಸಿಲ್ಲಿ ಪ್ರಶ್ನೆಗಳನ್ನು ಕೇಳಬೇಡಿ ಎಂದು ಗರಂ ಆಗಿದ್ದರು. ಇದೀಗ ಹೆಚ್​ಸಿ ಮಹಾದೇವಪ್ಪ ಕೂಡ ಗರಂ ಆಗಿದ್ದು, ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

ಮಾಂಸದೂಟ ಮಾಡಿ ಸುತ್ತೂರು ಮಠಕ್ಕೆ ಭೇಟಿ: ಬಿಜೆಪಿಯವರು ಲಿವರ್ ಫ್ರೈ ಮಾಡಿ ಕೊಟ್ಟಿದ್ರಾ? ಮಹಾದೇವಪ್ಪ ಕಿಡಿ
ಹೆಚ್​ಸಿ ಮಹಾದೇವಪ್ಪ
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 09, 2024 | 8:23 PM

ಮೈಸೂರು, ಫೆ.09: ಕಾಂಗ್ರೆಸ್ ನಾಯಕರು ಮಾಂಸ ಸೇವಿಸಿ (Non veg) ಸುತ್ತೂರು ಮಠಕ್ಕೆ (suttur Mutt)ಭೇಟಿ ನೀಡಿದ್ದಾರೆಂದು ಬಿಜೆಪಿ ಆರೋಪ ವಿಚಾರ, ‘ಬಿಜೆಪಿಯವರು ನಮಗೆ ಊಟ ಬಡಿಸಿದ್ರಾ? ಎಂದು ಸಚಿವ ಹೆಚ್​ಸಿ ಮಹಾದೇವಪ್ಪ​ (HC Mahadevappa) ಅವರು ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ‘ಬಿಜೆಪಿಯವರಿಗೆ ಜನರ ಮೂಲಭೂತ ಹಕ್ಕುಗಳ ಅರಿವಿಲ್ಲ. ಸಂವಿಧಾನದ ಆಶಯ ಗೊತ್ತಿಲ್ಲದವರು ಈ ರೀತಿ ಮಾತನಾಡುತ್ತಿದ್ದಾರೆ. ನಮಗೆ ಬಿಜೆಪಿಯವರೇನು ಕೋಳಿ ಕೂದಿದ್ರಾ?, ಮರಿ ಮಾಂಸ ತಂದಿದ್ರಾ? ಅಥವಾ ಲಿವರ್ ಫ್ರೈ ಮಾಡಿ ಕೊಟ್ಟಿದ್ರಾ ಎಂದು ಪ್ರಶ್ನಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಬಿಜೆಪಿಯವರು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಬೇಕು. ಅದು ಬಿಟ್ಟು ಈ ರೀತಿ ಬೇಜವಾಬ್ದಾರಿಯುತ ಹೇಳಿಕೆ ನೀಡಬಾರದು ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಮಾಡಿದ ಆರೋಪವೇನು?

ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿ, ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಭೋಜನಕೂಟದಲ್ಲಿ  ಮಾಂಸದ ಊಟ ಮಾಡಿ, ನಂತರ ನೇರವಾಗಿ ದೆಹಲಿಯಿಂದ ಮೈಸೂರಿಗೆ ಬಂದ ಸಿಎಂ, ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದ ಸುತ್ತೂರು ಜಾತ್ರೆಯಲ್ಲಿ ಭಾಗವಹಿಸಿದ್ದಾರೆ. ಹೀಗೆ ಮಾಂಸದೂಟ ಮಾಡಿ ಗದ್ದುಗೆಗೆ ಭೇಟಿ ಮಾಡಿದ್ದು ಎಷ್ಟು ಸರಿ ಎಂದು ಬಿಜೆಪಿ ಪ್ರಶ್ನಿಸಿತ್ತು.

ಇದನ್ನೂ ಓದಿ:ನಾನ್‌ ವೆಜ್‌ ತಿಂದು ಸುತ್ತೂರು ಮಠಕ್ಕೆ ಭೇಟಿ: ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ಹೇಳಿದ್ದಿಷ್ಟು

ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಸಿಎಂ

ಇನ್ನು ಬಿಜೆಪಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಇಂತಹ ಸಿಲ್ಲಿ ಪ್ರಶ್ನೆಗಳನ್ನು ಕೇಳಬೇಡಿ. ಊಟ, ತಿಂಡಿ ತಿನ್ನುವುದು, ಬಟ್ಟೆ ಹಾಕುವುದರ ಬಗ್ಗೆ ಮಾತಾಡಕ್ಕಾಗುತ್ತಾ?, ಬಡವರ ಸಮಸ್ಯೆ ಹಾಗೂ ನಿರುದ್ಯೋಗ ಕುರಿತು ಮಾತಾಡೋಣ. ಅದನ್ನು ಬಿಟ್ಟು ಮಾಂಸ ಸೇವಿಸಿ ಮಠಕ್ಕೆ ಭೇಟಿ, ಹೀಗೆಲ್ಲಾ ಕೇಳಬೇಡಿ ಎಂದು ಗರಂ ಆಗಿದ್ದರು. ಇದೀಗ ಹೆಚ್​ಸಿ ಮಹಾದೇವಪ್ಪ ಕೂಡ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್