AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಗೆ ತಕ್ಕ ಸಹಪಾಠಿ, ಅದಕ್ಕೊಂದು ಪಕ್ಷ, ಇವರ ಮಧ್ಯೆ ಕೇಶವಕೃಪಾ ಒದ್ದಾಟ: ಸಿ.ಎಂ. ಇಬ್ರಾಹಿಂ

ರಮೇಶ್ ಜಾರಕಿಹೊಳಿ ಸಿಡಿ ಹಗರಣದ ಕುರಿತ ಪ್ರಶ್ನೆಗೆ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಬಿಜೆಪಿ, ಯಡಿಯೂರಪ್ಪ ಅವರನ್ನು ಗೇಲಿ ಮಾಡಿದ್ದಾರೆ. ಅಷ್ಟೇ ಅಲ್ಲ, ಇವರ ಮಧ್ಯೆ ಸಿಲುಕಿ ಕೇಶವ ಕೃಪಾ, ಬಸವ ಕೃಪಾ ಒದ್ದಾಡುತ್ತಿವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗೆ ತಕ್ಕ ಸಹಪಾಠಿ, ಅದಕ್ಕೊಂದು ಪಕ್ಷ, ಇವರ ಮಧ್ಯೆ ಕೇಶವಕೃಪಾ ಒದ್ದಾಟ: ಸಿ.ಎಂ. ಇಬ್ರಾಹಿಂ
ಸಿ.ಎಂ. ಇಬ್ರಾಹಿಂ
Srinivas Mata
| Edited By: |

Updated on: Mar 03, 2021 | 8:30 PM

Share

ಮೈಸೂರು: ‘ರಾಸಲೀಲೆ, ರಸಲೀಲೆ, ಕರ್ಮಕಾಂಡದ ಮಧ್ಯೆ ರಾಜಕಾರಣ ಇದೆ. ನತದೃಷ್ಟ ಮುಖ್ಯಮಂತ್ರಿ ರಾಜ್ಯಕ್ಕೆ ಸಿಕ್ಕಿರುವುದು ದುರ್ದೈವ. ಮುಖ್ಯಮಂತ್ರಿಗೆ ತಕ್ಕನಾದ ಸಹಪಾಠಿ ಮಂತ್ರಿ, ಅದಕ್ಕೊಂದು ಪಕ್ಷ. ಇವರ ಮಧ್ಯೆ ಸಿಲುಕಿ ಕೇಶವಕೃಪ, ಬಸವಕೃಪ ಒದ್ದಾಡುತ್ತಿವೆ. ಇದು ದಿಕ್ಕು ತಪ್ಪಿದ ರಾಜಕಾರಣ’ ಎಂದು ಕಾಂಗ್ರೆಸ್​ ಪಕ್ಷದ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಬುಧವಾರ ಮೈಸೂರಿನಲ್ಲಿ ವ್ಯಂಗ್ಯವಾಡಿದರು. ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಬಗ್ಗೆ ಅವರು ಲೇವಡಿ ಮಾಡಿದರು.

‘ಈ ಹಿಂದೆಲ್ಲ ಜನ ವೋಟು ಕೊಡಬೇಕಾದರೆ ಕುಲಕಸುಬು ನೋಡುತ್ತಿದ್ದರು. ಎತ್ತು ಕೊಳ್ಳಬೇಕಿದ್ದರೆ ತಳಿ ಯಾವುದೆಂದು ನೋಡುತ್ತೇವೆ. ರೇಸ್​ನಲ್ಲಿ ಕುದುರೆಗೆ ದುಡ್ಡು ಕಟ್ಟುವ ಮುನ್ನ ಅದರ ಅಪ್ಪ-ಅಮ್ಮ ಎಷ್ಟು ರೇಸ್ ಗೆದ್ದಿದೆ ಅಂತ ನೋಡುತ್ತೇವೆ. ಈಗಿನ ರೇಸ್​​ಗಳಲ್ಲಿ ಎಷ್ಟು ದುಡ್ಡು ತಂದಿವೆ ಎಂದು ನೋಡುತ್ತಾರೆ. ಈಗ ರಾಜಕಾರಣ ಹಾಳಾಗಿಹೋಗಿದೆ’ ಎಂದು ತಮ್ಮದೇ ಧಾಟಿಯ ರೂಪಕಗಳ ಮೂಲಕ ಇಬ್ರಾಹಿಂ ಅವರು ಪ್ರಸ್ತುತ ಸನ್ನಿವೇಶವನ್ನು ವ್ಯಾಖ್ಯಾನಿಸಿದರು.

ಪರಧನ, ಪರಸತಿ, ಪರದೇಶಿ ಮಧ್ಯೆ ರಾಜಕಾರಣ ಓಡಾಟ ಮಾಡುತ್ತಿದೆ. ಈಗಿನ ಸನ್ನಿವೇಶ ಸರಿಹೋಗುತ್ತದೆಂಬ ನಂಬಿಕೆ ಇಲ್ಲ. ದೊಡ್ಡ ಕ್ರಾಂತಿಯೇ ಆಗಬೇಕಿದೆ. ಹಾಗೆ ಕ್ರಾಂತಿ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಇಬ್ರಾಹಿಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ- ಗೋಕಾಕ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ವಿಚಾರದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿ.ಎಂ. ಇಬ್ರಾಹಿಂ ಉತ್ತರಿಸಿದರು.

ಇದನ್ನೂ ಓದಿ: ರಾಜಕೀಯ ವಿಶ್ಲೇಷಣೆ | ರಮೇಶ್ ಜಾರಕಿಹೊಳಿ ಮುಂದಿರುವ ಮೂರು ಆಯ್ಕೆಗಳು

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್