AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿರುವ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ -ಬಿಜೆಪಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್

ಯುವತಿ ಮೇಲೆ ಅತ್ಯಾಚಾರವೆಸಗಿದ ಮಾಜಿ ಸಚಿವರಿಗೆ ರಕ್ಷಣೆ ನೀಡುವಂತೆ ಅದೇರೀತಿ ಮೈಸೂರಿನ ರೇಪಿಸ್ಟ್‌ಗಳನ್ನ ರಕ್ಷಣೆ ಮಾಡುವಂತಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿರುವ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದೆ.

ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿರುವ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ -ಬಿಜೆಪಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್
ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿರುವ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ -ಬಿಜೆಪಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್
TV9 Web
| Edited By: |

Updated on:Aug 26, 2021 | 11:30 AM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸ್ನೇಹಿತನ ಜೊತೆ ಹೋಗಿದ್ದ ಯುವತಿಯ ಮೇಲೆ ಕಾಮುಕರು ಎರಗಿದ್ದು ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದೆ.

ಯುವತಿ ಮೇಲೆ ಅತ್ಯಾಚಾರವೆಸಗಿದ ಮಾಜಿ ಸಚಿವರಿಗೆ ರಕ್ಷಣೆ ನೀಡುವಂತೆ ಅದೇರೀತಿ ಮೈಸೂರಿನ ರೇಪಿಸ್ಟ್‌ಗಳನ್ನ ರಕ್ಷಣೆ ಮಾಡುವಂತಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿರುವ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದೆ. ಸಿದ್ದು ಸವದಿಯನ್ನು ರಕ್ಷಿಸಿದ ಮಹಿಳಾ ವಿರೋಧಿ ಈ ಬಿಜೆಪಿಯಿಂದ ಮಹಿಳೆಯರ ರಕ್ಷಣೆ ಬಯಸುವುದು ವ್ಯರ್ಥ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ಸದ್ಯ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ಆಯುಕ್ತ ಚಂದ್ರಗುಪ್ತರಿಂದ ತನಿಖೆ ಪ್ರಗತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜೊತೆಗೆ ಈ ಹಿಂದೆ ಅತ್ಯಾಚಾರ ನಡೆದ ಸ್ಥಳದಲ್ಲಿ ಆಗಿರುವ ಕೆಲ ಘಟನೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಮದ್ಯ ಪಾರ್ಟಿಗಳು ನಡೆಯುತ್ತಿದ್ದವಾ? ಯುವಕ, ಯುವತಿ ಈ ಸ್ಥಳಕ್ಕೆ ಬರುವುದಕ್ಕೆ ಕಾರಣವೇನು? ಪ್ರತಿಯೊಂದು ವಿಚಾರದ ಬಗ್ಗೆಯೂ ಎಡಿಜಿಪಿ ಪ್ರತಾಪ್ ರೆಡ್ಡಿ ಮಾಹಿತಿ ಪಡೆಯುತ್ತಿದ್ದಾರೆ.

ಮೊಬೈಲ್ ಟವರ್ ಲೊಕೇಶನ್ನಿಂದ ಆರೋಪಿ ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದು ಸದ್ಯ ಸ್ಥಳದಲ್ಲಿ ಸಾವಿರಾರು ಮೊಬೈಲ್ ನಂಬರ್ ಬಳಕೆಯಾಗಿರುವುದು ಪತ್ತೆಯಾಗಿದೆ. ಮೊಬೈಲ್ ನಂಬರ್ಗಳನ್ನ ಫಿಲ್ಟರ್ ಮಾಡಲಾಗುತ್ತಿದೆ. ಮೊದಲಿಗೆ ಸಂತ್ರಸ್ತೆಯ ಸ್ನೇಹಿತನ ಮೊಬೈಲ್ ಬಳಕೆಯಾಗಿರುವ ಸುಳಿವು ಸಿಕ್ಕಿರಲಿಲ್ಲ. ಇದರಿಂದ ಇಂದು‌ ಕೂಡ ನಂಬರ್ ಟ್ರೇಸಿಂಗ್ ಮಾಡಲಾಗಿದೆ. ಇಂದು ಯುವಕ ನಂಬರ್ ಬಳಕೆ ಮಾಹಿತಿ ಸಿಕ್ಕಿದೆ. ಸದ್ಯ ನಂಬರ್ ಫಿಲ್ಟರ್ ಮಾಡಿ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಘಟನಾ ಸ್ಥಳದಲ್ಲಿ ನಡೆದಿರುವ ಅಪರಾಧ ಪ್ರಕರಣಗಳ ಆರೋಪಿಗಳ ಪಟ್ಟಿ ತಯಾರಿ ಮಾಡಲಾಗುತ್ತಿದೆ. ಸರಗಳ್ಳತನ, ದರೋಡೆ, ಬೈಕ್, ಮೊಬೈಲ್‌ಗಳ ಕಳ್ಳತನ, ಹಣ ಕಸಿದು ಪರಾರಿಯಾದವರ ಬಗ್ಗೆ ಪಟ್ಟಿ ತಯಾರಿ ಮಾಡಿ ಆರೋಪಿಗಳನ್ನು ವಿಚಾರಣೆಗೊಳಪಡಿಸಲಿರುವ ಪೊಲೀಸರು. ಸದ್ಯ ಚಾಮುಂಡಿ ಬೆಟ್ಟದ ತಪ್ಪಲಿನ ಪ್ರದೇಶ ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ಇದನ್ನೂ ಓದಿ: ರೇಪ್ ಮಾಡಿ ವಿಡಿಯೋ ಮಾಡಿದ್ದ ಕಾಮುಕರು ದೂರು ಕೊಡದಂತೆ ಬೆದರಿಸಿದ್ದರು; ಸ್ನೇಹಿತನಿಗೆ ಕಲ್ಲಿನಿಂದ ಹೊಡೆದಿದ್ದರು

Published On - 11:07 am, Thu, 26 August 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ