ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸ್ನೇಹಿತನ ಜೊತೆ ಹೋಗಿದ್ದ ಯುವತಿಯ ಮೇಲೆ ಕಾಮುಕರು ಎರಗಿದ್ದು ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದೆ.
ಯುವತಿ ಮೇಲೆ ಅತ್ಯಾಚಾರವೆಸಗಿದ ಮಾಜಿ ಸಚಿವರಿಗೆ ರಕ್ಷಣೆ ನೀಡುವಂತೆ ಅದೇರೀತಿ ಮೈಸೂರಿನ ರೇಪಿಸ್ಟ್‌ಗಳನ್ನ ರಕ್ಷಣೆ ಮಾಡುವಂತಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿರುವ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದೆ. ಸಿದ್ದು ಸವದಿಯನ್ನು ರಕ್ಷಿಸಿದ ಮಹಿಳಾ ವಿರೋಧಿ ಈ ಬಿಜೆಪಿಯಿಂದ ಮಹಿಳೆಯರ ರಕ್ಷಣೆ ಬಯಸುವುದು ವ್ಯರ್ಥ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ @BJP4Karnataka ಸರ್ಕಾರ.
ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿದ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ!
ಸಿದ್ದು ಸವದಿಯನ್ನ ರಕ್ಷಿಸಿದ ಮಹಿಳಾ ವಿರೋಧಿ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ.
— Karnataka Congress (@INCKarnataka) August 26, 2021
ಮೈಸೂರಿನಂತಹ ನಗರದಲ್ಲಿ ಅತ್ಯಾಚಾರ ಪ್ರಕರಣ ನಡೆದು 24 ಗಂಟೆಗೂ ಅಧಿಕ ಸಮಯ ಕಳೆದಿದ್ದರೂ ಆರೋಪಿಗಳನ್ನು ಬಂಧಿಸಲಾಗದ್ದು @BJP4Karnataka ಆಡಳಿತದಲ್ಲಿ ಗೃಹ ಇಲಾಖೆಯ ಕಾರ್ಯಕ್ಷಮತೆ ಕುಸಿದಿರುವುದಕ್ಕೆ ಸಾಕ್ಷಿ.
ಇದುವರೆಗೂ ಗೃಹಸಚಿವರು, ಬಿಜೆಪಿಯ ಮಹಿಳಾ ನಾಯಕಿಯರು ಸಂತ್ರಸ್ತೆಯನ್ನು ಭೇಟಿಯಾಗದಿರುವುದು ಬಿಜೆಪಿಯ ನಿರ್ಲಕ್ಷ್ಯ ಧೋರಣೆಗೆ ನಿದರ್ಶನ.
— Karnataka Congress (@INCKarnataka) August 26, 2021
ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ
ಸದ್ಯ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ಆಯುಕ್ತ ಚಂದ್ರಗುಪ್ತರಿಂದ ತನಿಖೆ ಪ್ರಗತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜೊತೆಗೆ ಈ ಹಿಂದೆ ಅತ್ಯಾಚಾರ ನಡೆದ ಸ್ಥಳದಲ್ಲಿ ಆಗಿರುವ ಕೆಲ ಘಟನೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಮದ್ಯ ಪಾರ್ಟಿಗಳು ನಡೆಯುತ್ತಿದ್ದವಾ? ಯುವಕ, ಯುವತಿ ಈ ಸ್ಥಳಕ್ಕೆ ಬರುವುದಕ್ಕೆ ಕಾರಣವೇನು? ಪ್ರತಿಯೊಂದು ವಿಚಾರದ ಬಗ್ಗೆಯೂ ಎಡಿಜಿಪಿ ಪ್ರತಾಪ್ ರೆಡ್ಡಿ ಮಾಹಿತಿ ಪಡೆಯುತ್ತಿದ್ದಾರೆ.
ಮೊಬೈಲ್ ಟವರ್ ಲೊಕೇಶನ್ನಿಂದ ಆರೋಪಿ ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದು ಸದ್ಯ ಸ್ಥಳದಲ್ಲಿ ಸಾವಿರಾರು ಮೊಬೈಲ್ ನಂಬರ್ ಬಳಕೆಯಾಗಿರುವುದು ಪತ್ತೆಯಾಗಿದೆ. ಮೊಬೈಲ್ ನಂಬರ್ಗಳನ್ನ ಫಿಲ್ಟರ್ ಮಾಡಲಾಗುತ್ತಿದೆ. ಮೊದಲಿಗೆ ಸಂತ್ರಸ್ತೆಯ ಸ್ನೇಹಿತನ ಮೊಬೈಲ್ ಬಳಕೆಯಾಗಿರುವ ಸುಳಿವು ಸಿಕ್ಕಿರಲಿಲ್ಲ. ಇದರಿಂದ ಇಂದು ಕೂಡ ನಂಬರ್ ಟ್ರೇಸಿಂಗ್ ಮಾಡಲಾಗಿದೆ. ಇಂದು ಯುವಕ ನಂಬರ್ ಬಳಕೆ ಮಾಹಿತಿ ಸಿಕ್ಕಿದೆ. ಸದ್ಯ ನಂಬರ್ ಫಿಲ್ಟರ್ ಮಾಡಿ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಘಟನಾ ಸ್ಥಳದಲ್ಲಿ ನಡೆದಿರುವ ಅಪರಾಧ ಪ್ರಕರಣಗಳ ಆರೋಪಿಗಳ ಪಟ್ಟಿ ತಯಾರಿ ಮಾಡಲಾಗುತ್ತಿದೆ. ಸರಗಳ್ಳತನ, ದರೋಡೆ, ಬೈಕ್, ಮೊಬೈಲ್‌ಗಳ ಕಳ್ಳತನ, ಹಣ ಕಸಿದು ಪರಾರಿಯಾದವರ ಬಗ್ಗೆ ಪಟ್ಟಿ ತಯಾರಿ ಮಾಡಿ ಆರೋಪಿಗಳನ್ನು ವಿಚಾರಣೆಗೊಳಪಡಿಸಲಿರುವ ಪೊಲೀಸರು. ಸದ್ಯ ಚಾಮುಂಡಿ ಬೆಟ್ಟದ ತಪ್ಪಲಿನ ಪ್ರದೇಶ ಅನೈತಿಕ ಚಟುವಟಿಕೆಗಳ ತಾಣವಾಗಿದೆ.
ಇದನ್ನೂ ಓದಿ: ರೇಪ್ ಮಾಡಿ ವಿಡಿಯೋ ಮಾಡಿದ್ದ ಕಾಮುಕರು ದೂರು ಕೊಡದಂತೆ ಬೆದರಿಸಿದ್ದರು; ಸ್ನೇಹಿತನಿಗೆ ಕಲ್ಲಿನಿಂದ ಹೊಡೆದಿದ್ದರು
Published On - 11:07 am, Thu, 26 August 21