ಬಿಜೆಪಿ ಅಥವಾ ಜೆಡಿಎಸ್​ನಿಂದ ಸುಪಾರಿ ಪಡೆದು ಸಲೀಂ ಹೇಳಿಕೆ ನೀಡಿರಬಹುದು: ಎಂ ಲಕ್ಷ್ಮಣ್ ಆರೋಪ

ಬಿಜೆಪಿ ಅಥವಾ ಜೆಡಿಎಸ್​ನಿಂದ ಸುಪಾರಿ ಪಡೆದು ಸಲೀಂ ಹೇಳಿಕೆ ನೀಡಿರಬಹುದು: ಎಂ ಲಕ್ಷ್ಮಣ್ ಆರೋಪ
ಕೆಪಿಸಿಸಿ ವಕ್ತಾರ ಎಂ. ಲಕ್ಷಣ್

Karnataka Congress: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಲೀಂ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಕೆಪಿಸಿಸಿಯಿಂದ ಆಂತರಿಕ ತನಿಖೆ ನಡೆಯಲಿದೆ ಎಂದು ಎಂ. ಲಕ್ಷ್ಮಣ್ ಹೇಳಿದ್ದಾರೆ.

TV9kannada Web Team

| Edited By: ganapathi bhat

Oct 17, 2021 | 6:13 PM


ಮೈಸೂರು: ಸಲೀಂ ಸುಪಾರಿ ಪಡೆದು ಈ ರೀತಿ ಹೇಳಿಕೆ ನೀಡಿರಬಹುದು. ಬಿಜೆಪಿ ಅಥವಾ ಜೆಡಿಎಸ್​ನಿಂದ ಸಲೀಂ ಸುಪಾರಿ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ನಾಗಾಲೋಟಕ್ಕೆ ಬ್ರೇಕ್ ಹಾಕಲು ಸುಪಾರಿ ಪಡೆದುಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಇದನ್ನು ಸುದ್ದಿ ಮಾಡಲು ಹುನ್ನಾರ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಲೀಂ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಕೆಪಿಸಿಸಿಯಿಂದ ಆಂತರಿಕ ತನಿಖೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆಯಲಿದೆ ಎಂದು ಎಂ. ಲಕ್ಷ್ಮಣ್ ಹೇಳಿದ್ದಾರೆ.

ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದಿಂದ 5 ಪ್ರಶ್ನೆ ಕೇಳಲಾಗಿದೆ. 1996ರಲ್ಲಿ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದ್ದು ಯಾವ ಪಕ್ಷ? ಹೆಚ್.ಡಿ. ಕುಮಾರಸ್ವಾಮಿಯನ್ನು ಸಿಎಂ ಮಾಡಿದ್ದು ಯಾರು? ಹೆಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿದ್ದು ಯಾರು? ಮುಂದಿನ ಚುನಾವಣೆಗೆ ಮುಸ್ಲಿಂ ಸಿಎಂ ಘೋಷಣೆ ಮಾಡ್ತೀರಾ? 2018 ರಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಿಟ್ಟ ಹಣ ಕಡಿತ ಮಾಡಿದ್ಯಾಕೆ? ಎಂದು ಜೆಡಿಎಸ್ ಪಕ್ಷವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕರಾದ ಸಲೀಂ ಮತ್ತು ಉಗ್ರಪ್ಪ ಅವರ ನಡುವೆ ನಡೆದಿರುವ ಸಂಭಾಷಣೆ ವೇಳೆ ತಮ್ಮ ವಿರುದ್ಧ ಕೇಳಿಬಂದ ಆರೋಪಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದರು. ಪಕ್ಷವು ತನ್ನ ನಿಯಮಗಳಂತೆ ಶಿಸ್ತುಕ್ರಮ ಜರುಗಿಸಲಿದೆ. ಮಾಧ್ಯಮಗಳಲ್ಲಿ ಬಂದಿರುವ ವರದಿ ನನಗೂ-ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದರು.

ಮಾಧ್ಯಮಗಳ ವರದಿಗಳನ್ನು ನಾನು ನಿರಾಕರಿಸುವುದಿಲ್ಲ. ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ. ನಾನು ಯಾವುದೇ ಪರ್ಸೆಂಟೇಜ್ ವಿಚಾರದಲ್ಲಿಯೂ ಭಾಗಿಯಾಗಿಲ್ಲ, ನನಗೆ ಅದರ ಅಗತ್ಯವೂ ಇಲ್ಲ. ದೂರು ಕೊಟ್ಟರೆ ತನಿಖೆ ನಡೆಸುವುದಾಗಿ ಗೃಹ ಸಚಿವರು ಹೇಳಿದ್ದಾರೆ. ಬೇಕಿದ್ದರೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಿ ಎಂದು ಹೇಳಿದ್ದರು.

ಇದನ್ನೂ ಓದಿ: ನಮ್ಮ ನಾಯಕರು ಯಾರನ್ನೂ ಮುಗಿಸುವ ಪ್ರಶ್ನೆ ಇಲ್ಲ, ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ: ಕುಮಾರಸ್ವಾಮಿಗೆ ಶಿವಕುಮಾರ್ ತಿರುಗೇಟು

ಇದನ್ನೂ ಓದಿ: ಗೋವಾ ಚುನಾವಣಾ ಜವಾಬ್ದಾರಿ ನಿರಾಕರಿಸಿದ ಡಿ.ಕೆ.ಶಿವಕುಮಾರ್; ಬೇರೆಯವರಿಗೆ ಜವಾಬ್ದಾರಿ ನೀಡುವಂತೆ ಮನವಿ

Follow us on

Related Stories

Most Read Stories

Click on your DTH Provider to Add TV9 Kannada