ಮಠದ ಹಾಸ್ಟೆಲ್​​​​​​​​ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ಆರೋಪ: ಸ್ವಾಮೀಜಿ ವಿರುದ್ಧ ಎಫ್​ಐಆರ್​​​ ದಾಖಲು

| Updated By: ಗಂಗಾಧರ​ ಬ. ಸಾಬೋಜಿ

Updated on: Aug 27, 2022 | 1:23 PM

ಮಠ ನಡೆಸುವ ಪ್ರೌಢಶಾಲೆಯಲ್ಲೇ ಓದುತ್ತಿರುವ ವಿದ್ಯಾರ್ಥಿನಿಯರು ಸರದಿಯಂತೆ ಸ್ವಾಮೀಜಿ ಬಳಿಗೆ ಹೋಗಬೇಕು. ಒಂದು ವೇಳೆ ಹೋಗಲು ನಿರಾಕರಿಸಿದರೆ ಹಾಸ್ಟೆಲ್ ವಾರ್ಡನ್ ಮತ್ತು ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಾರೆ.

ಮಠದ ಹಾಸ್ಟೆಲ್​​​​​​​​ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ಆರೋಪ: ಸ್ವಾಮೀಜಿ ವಿರುದ್ಧ ಎಫ್​ಐಆರ್​​​ ದಾಖಲು
ಪ್ರಾತಿನಿಧಿಕ ಚಿತ್ರ
Follow us on

ಮೈಸೂರು: ತಮ್ಮದೇ ಮಠದ ಹಾಸ್ಟೆಲ್​ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿ ನಾಡಿನ ಪ್ರತಿಷ್ಠಿತ ಮಠ ಒಂದರ ಸ್ವಾಮೀಜಿ ವಿರುದ್ಧ ದೌರ್ಜನ್ಯಕೊಳಗಾದ ಇಬ್ಬರು ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಳನಾಡಿ ಸಂಸ್ಥೆಗೆ ದೂರು ನೀಡಲಾಗಿದೆ. ದೂರು ಪಡೆದ ಸಂಸ್ಥೆಯೂ ಆಪ್ತ ಸಮಾಲೋಚನೆ ನಡೆಸುತ್ತಿದೆ. ಮಠ ನಡೆಸುವ ಪ್ರೌಢಶಾಲೆಯಲ್ಲೇ ಓದುತ್ತಿರುವ ವಿದ್ಯಾರ್ಥಿನಿಯರು ಸರದಿಯಂತೆ ಸ್ವಾಮೀಜಿ ಬಳಿಗೆ ಹೋಗಬೇಕು. ಒಂದು ವೇಳೆ ಹೋಗಲು ನಿರಾಕರಿಸಿದರೆ ಹಾಸ್ಟೆಲ್ ವಾರ್ಡನ್ ಮತ್ತು ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಾರೆ ಎಂದು ವಿದ್ಯಾರ್ಥಿನಿಯರು ಆಪ್ತ ಸಮಾಲೋಚನೆ ಸಂದರ್ಭದಲ್ಲಿ ಹೇಳಿದ್ದಾರೆ ಎನ್ನಲಾಗುತ್ತಿದೆ.

ಸಂಸ್ಥೆ ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ವಿಚಾರಣೆ ಮಾಡಿದ್ದು, ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ತಿಳಿದುಬಂದಿದೆ ಎನ್ನಲಾಗುತ್ತಿದೆ. ಸ್ವಾಮೀಜಿ ವಿರುದ್ಧ ಪೋಕ್ಸ್‌ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Viral Video: ಏಷ್ಯಾಕಪ್​ಗೆ ಎಂಟ್ರಿ: ಟೀಮ್ ಇಂಡಿಯಾ ಸ್ಟೈಲ್​ನಲ್ಲಿ ಡ್ಯಾನ್ಸ್ ಮಾಡಿದ ಹಾಂಗ್ ಕಾಂಗ್

ನೆರವು ಒದಗಿಸುವ ಭರವಸೆ:

ಆಶೀರ್ವಾದದ ನೆಪದಲ್ಲಿ ವಿದ್ಯಾರ್ಥಿನಿಯರನ್ನು ಬೆಡ್​ರೊಂಗೆ ಕರೆಯುವ ಸ್ವಾಮೀಜಿ, ಕುಟುಂಬದ ಮಾಹಿತಿಯನ್ನು ಪಡೆಯುತ್ತಾರೆ. ಪೋಷಕರಿಗೆ ಕಷ್ಟವಿದ್ದರೆ ನೆರವು ಒದಗಿಸುವುದಾಗಿಯೂ ಭರವಸೆ ನೀಡುತ್ತಿದ್ದು, ನಂತರ ಲೈಂಗಿಕ ಉದ್ದೇಶಕ್ಕೆ ಬಳಸಿಕೊಳ್ಳುತ್ತಾರೆ ಎಂದು ವಿದ್ಯಾರ್ಥಿನಿಯರು ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ನಮಗೆ ಹೇಳುತ್ತಿದ್ದರು.

ಲೈಂಗಿಕ ಕ್ರಿಯೆಗೆ ಒಪ್ಪದಿದ್ದರೆ ಹಣ್ಣು ಮತ್ತು ಸಿಹಿಯಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಅತ್ಯಾಚಾರ ನಡೆಸುತ್ತಾರೆ ಎಂದು ದೂರಲಾಗಿದೆ. ದೌರ್ಜನ್ಯದ ಕುರಿತು ಯಾರಿಗಾದರು ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಕಿರುಕುಳ ಪ್ರಶ್ನಿಸಿದ ಕಾರಣ ಹಾಸ್ಟೆಲ್‍ನಿಂದ ಹೊರ ಹಾಕಲಾಗುತ್ತಿತ್ತು ಎಂದು ನೊಂದ ವಿದ್ಯಾರ್ಥಿನಿಯರು ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದ ಪ್ರತಿಷ್ಠಿತ ಮಠವೊಂದರ ಸ್ವಾಮೀಜಿ ಮೇಲೆ ವಿದ್ಯಾರ್ಥಿನಿಯರು ಆರೋಪ ಮಾಡಿದ್ದು, ಈ ಕುರಿತಾಗಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ಒಡನಾಡಿ ಸಂಸ್ಥೆಯ ಪರಶುರಾಂ ಎನ್ನುವವರು ಹೇಳಿದಾರೆ.

ಮಕ್ಕಳ ಮಾಹಿತಿ ಮೇರೆಗೆ ದೂರು ದಾಖಲು: ಕೌನ್ಸಿಲರ್ ಸರಸ್ವತಿ

ಒಡನಾಡಿ ಸಂಸ್ಥೆಯ ಕೌನ್ಸಿಲರ್ ಸರಸ್ವತಿ ಹೇಳಿಕೆ ನೀಡಿದ್ದು, ಮಕ್ಕಳನ್ನ ಈಗಾಗಲೇ ಕೌನ್ಸೆಲಿಂಗ್​ ಮಾಡಲಾಗಿದೆ. ಮಕ್ಕಳು ತಮಗಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ಮಕ್ಕಳು ನೀಡಿದ ಮಾಹಿತಿ ಮೇರೆಗೆ ದೂರು ದಾಖಲಾಗಿದೆ. ಶ್ರೀಗಳು ಸಂಜೆ 6 ಗಂಟೆ ವೇಳೆಗೆ ಮಕ್ಕಳನ್ನ ಕರೆಸಿಕೊಂಡು ದೌರ್ಜನ್ಯ ಎಸಗುತ್ತಿದ್ರು ಎಂದು ಮಕ್ಕಳು ಮಾಹಿತಿ ನೀಡಿದ್ದಾರೆ. ಮಠದಲ್ಲಿನ ಸಿಬ್ಬಂದಿ ಸ್ವಾಮೀಜಿಗೆ ಸಹಾಯ ಮಾಡುತ್ತಿದ್ದರು. ಇದೇ ರೀತಿ ಮಠದಲ್ಲಿ ಹಲವು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆಂದು ಒಡನಾಡಿ ಸಂಸ್ಥೆಯ ಕೌನ್ಸಿಲರ್ ಸರಸ್ವತಿ ಹೇಳಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:11 am, Sat, 27 August 22