ಮುಡಾ ಹಗರಣದಲ್ಲಿ ಸಿಎಂ ಪುತ್ರ ಯತೀಂದ್ರ ಭಾಗಿ ಆರೋಪ: ಸಚಿವ ಬೈರತಿ ಸುರೇಶ್ ಹೇಳಿದ್ದೇನು?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ನೇತೃತ್ವದಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಬೇರೆ ಯಾರು ಅಲ್ಲ ಬಿಜೆಪಿ ಪರಿಷತ್ ಸದಸ್ಯ ಎಂದು ಎಚ್.ವಿಶ್ವನಾಥ್ ಹೀಗೊಂದು ಗಂಭೀರ ಆರೋಪ ಮಾಡಿದ್ದಾರೆ. ಆದ್ರೆ, ಈ ಆರೋಪವನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅಲ್ಲಗೆಳೆದಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಪುತ್ರ ಯತೀಂದ್ರ ಭಾಗಿ ಆರೋಪ: ಸಚಿವ ಬೈರತಿ ಸುರೇಶ್ ಹೇಳಿದ್ದೇನು?
ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್
Follow us
ದಿಲೀಪ್​, ಚೌಡಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on:Jul 01, 2024 | 8:27 PM

ಮೈಸೂರು, (ಜುಲೈ 01): ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಹೆಸರು ಕೇಳಿಬಂದಿದೆ. ಯತೀಂದ್ರ ಸಿದ್ದರಾಮಯ್ಯ ಮತ್ತು ತಂಡದ ಸಹಕಾರದಿಂದ ಮುಡಾ ಅಧಿಕಾರಿಗಳು ಸುಮಾರು 5 ಸಾವಿರ ಕೋಟಿ ರೂ. ಗಳ ಅವ್ಯವಹಾರ ನಡೆಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಿಸಿದ್ದಾರೆ. ಇನ್ನು ಇದಕ್ಕೆ ಸ್ವತಃ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್​ ಪ್ರತಿಕ್ರಿಯಿಸಿ, ಮುಡಾ ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಈ ಕ್ಷಣಕ್ಕೆ ಕಂಡುಬಂದಿಲ್ಲ. ಯತೀಂದ್ರ ಹಿಂದೆ ಶಾಸಕರಾಗಿದ್ದರು, ಅವರಿಗೂ ಇದಕ್ಕೂ ಸಂಬಂಧವಿಲ್ಲ. ಬಿಜೆಪಿ ಎಂಎಲ್​ಸಿ ವಿಶ್ವನಾಥ್ ಬಳಿ ಸಾಕ್ಷ್ಯಾಧಾರ ಇದ್ದರೆ ಕೊಡಲಿ ಎಂದು ಸ್ಪಷ್ಟಪಡಿಸಿದರು.

ಮೈಸೂರಿನಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಸುರೇಶ್, ​ಮುಡಾ ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಇದೆ ಎಂಬ ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಯತೀಂದ್ರ ಅವರ ಪಾತ್ರ ಈ ಕ್ಷಣಕ್ಕೆ ಕಂಡುಬಂದಿಲ್ಲ. ಯತೀಂದ್ರ ಈಗ ಎಂಎಲ್‌ಸಿ ಆಗಿದ್ದಾರೆ. ಈ ಹಿಂದೆ ಶಾಸಕರಾಗಿದ್ದರು ಇದಕ್ಕೂ ಅವರಿಗೂ ಸಂಬಂಧವಿಲ್ಲ. ಹೆಚ್. ವಿಶ್ವನಾಥ್ ಅವರು ನಮಗಿಂತ ಹಿರಿಯರು. ಯತೀಂದ್ರ ಬಗ್ಗೆ ಹೇಳೋದಕ್ಕೆ ಏನು ಸಾಕ್ಷಿಯಿದೆ? ಅವರ ಹೇಳಿಕೆಯನ್ನ ಆ ದೇವರೇ ಮೆಚ್ಚಬೇಕು. ವಿಶ್ವನಾಥ್ ಅವರ ಬಳಿ ಸಾಕ್ಷಿ ಇದ್ದರೆ ತಂದು ಕೊಡಲಿ ಎಂದು ಸವಾಲು ಹಾಕಿದರು.

ಇದನ್ನೂ ಓದಿ: ಮೈಸೂರು ಮುಡಾದಲ್ಲಿ ಹಗರಣ: ನಿವೇಶನಗಳ ಹಂಚಿಕೆ ರದ್ದು, ಅಧಿಕಾರಿಗಳ ತಲೆದಂಡ

ಇನ್ನೂ ಮುಡಾ ದಾಖಲಾತಿಗಳನ್ನ ಪೆನ್‌ಡ್ರೈವ್‌ನಲ್ಲಿ ಹಾಕಿ ಕೊಡುವಂತೆ ಕೇಳಿದ್ದ ವಿಶ್ವನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ನಮ್ಮಲ್ಲಿ ಪೆನ್‌ಡ್ರೈವ್‌ ಸಂಸ್ಕೃತಿ ಇಲ್ಲ. ಈ ಬಗ್ಗೆ ನನಗೆ ಗೊತ್ತಿಲ್ಲ, ವಿಶ್ವನಾಥ್ ಈಗ ಮಾತನಾಡುತ್ತಿದ್ದಾರೆ. ನನ್ನ ಬಳಿ ಸೈಟ್ ಕೊಡಿಸುವಂತೆ ವಿಶ್ವನಾಥ್ ಬಂದಿದ್ದರು. ಅದನ್ನ ನೆನಪು ಮಾಡಿಕೊಳ್ಳಲಿ. ಸುಮ್ಮನೆ ಆರೋಪಗಳನ್ನ ಮಾಡುವುದನ್ನ ನಿಲ್ಲಿಸಬೇಕು ಎಂದು ವಾಗ್ದಾಳಿ ನಡೆಸಿದರು.

ಮಾಹಿತಿ ಕಲೆಹಾಕಲು ಮುಂದಾದ ಎಂಎಲ್​ಸಿ ಹೆಚ್.ವಿಶ್ವನಾಥ್

ಈ ಬಗ್ಗೆ ಜಿಲ್ಲಾ ನೋಂದಣಾಧಿಕಾರಿ ಮತ್ತು ಮುಡಾ ನೋಂದಣಾಧಿಕಾರಿಗೆ ಪತ್ರ ಬರೆದಿದ್ದು, ಮುಡಾದಲ್ಲಿ ನೋಂದಣಿ ಬಗ್ಗೆ ಮಾಹಿತಿ ನೀಡಲು ಸೂಚಿಸಿದ್ದಾರೆ. 2020ರ ಜನವರಿಯಿಂದ ಈವರೆಗೆ ಮುಡಾ ಕಚೇರಿಯಲ್ಲಿ ನೋಂದಣಿ ಆಗಿರುವ ಸೈಟ್​ಗಳ ವಿವರ ನೀಡಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿಶ್ವನಾಥ್ ಹೇಳಿದ್ದೇನು?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ನೇತೃತ್ವದಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ. 2019ರಲ್ಲಿ ಮುಡಾ ಸುಪರ್ದಿನಲ್ಲಿ 9 ಸಾವಿರ ನಿವೇಶನಗಳಿದ್ದವು. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಮಾರಿಕೊಳ್ಳಲಾಗಿದೆ. ಹಿಂದಿನ ಬಿಜೆಪಿ ಸರಕಾರ ಹಾಗೂ ಈಗಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನಿಯಮ ಬಾಹಿರವಾಗಿ ನಿವೇಶನ ಹಂಚಿಕೆಯಾಗಿದೆ ಎಂದು ದೂರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತನಿಂದ ಮುಡಾ ಅಧೋಗತಿಗೆ ತಲುಪಿದೆ. ಒಂದಷ್ಟು ನಾಯಕರು, ಅಧಿಕಾರಿಗಳು ಸಿಂಡಿಕೇಟ್ ರಚಿಸಿಕೊಂಡಿದ್ದು, ಈ ದಂಧೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಎಲ್ಲ ಆರೋಪಿಗಳನ್ನೂ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:15 pm, Mon, 1 July 24

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ