AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಕುಂಭಮೇಳಕ್ಕೆ ದಿನಗಣನೆ: ಮೈಸೂರು ಜಿಲ್ಲೆಯಲ್ಲಿ ನಾಳೆಯಿಂದ ಕುಂಭಮೇಳ

ಮೈಸೂರು ಜಿಲ್ಲೆಯ ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ ಮೂರು ದಿನಗಳ ಕಾಲ ಕುಂಭಮೇಳ ನಡೆಯಲಿದೆ. ಮೂರು ವರ್ಷಗಳಿಗೊಮ್ಮೆ ನಡೆಯುವ ಈ ಕುಂಭಮೇಳಕ್ಕೆ ಸಚಿವ ಡಾ. ಎಚ್. ಸಿ. ಮಹದೇವಪ್ಪ ಚಾಲನೆ ನೀಡಲಿದ್ದಾರೆ. ಲಕ್ಷಾಂತರ ಭಕ್ತರು ಪುಣ್ಯಸ್ನಾನಕ್ಕೆ ಆಗಮಿಸುವ ನಿರೀಕ್ಷೆಯಿದೆ.

ಕರ್ನಾಟಕದ ಕುಂಭಮೇಳಕ್ಕೆ ದಿನಗಣನೆ: ಮೈಸೂರು ಜಿಲ್ಲೆಯಲ್ಲಿ ನಾಳೆಯಿಂದ ಕುಂಭಮೇಳ
ಕರ್ನಾಟಕದ ಕುಂಭಮೇಳಕ್ಕೆ ದಿನಗಣನೆ: ಮೈಸೂರು ಜಿಲ್ಲೆಯಲ್ಲಿ ನಾಳೆಯಿಂದ ಕುಂಭಮೇಳ
Follow us
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Feb 09, 2025 | 8:14 AM

ಮೈಸೂರು, ಫೆಬ್ರವರಿ 09: ಉತ್ತರ ಪ್ರದೇಶದ ಪ್ರಯಾಗ್​ರಾಜ್​​ನಲ್ಲಿ 144 ವರ್ಷಗಳ ಬಳಿಕ ಪವಿತ್ರ ಕುಂಭಮೇಳ (Kumbh Mela) ನಡೆಯುತ್ತಿದೆ. ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಇದೀಗ ಇತ್ತ ಕರ್ನಾಟಕದಲ್ಲಿ ಕೂಡ ಕುಂಭಮೇಳ ಆರಂಭವಾಗುತ್ತಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಅಂದರೆ ಫೆ. 10 ರಿಂದ 3 ದಿನಗಳ ಕಾಲ ಕುಂಭಮೇಳ ನಡೆಯಲಿದೆ.

ಮೂರು ವರ್ಷಕ್ಕೊಮ್ಮೆ ಜಿಲ್ಲೆಯ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಡಾ ಹೆಚ್. ಸಿ‌ ಮಹದೇವಪ್ಪ ಕುಂಭಮೇಳಕ್ಕೆ ಚಾಲನೆ ನೀಡಲಿದ್ದಾರೆ. ಆದಿ ಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಸೇರಿ ಹಲವರು‌ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ತ್ರಿವೇಣಿ ಸಂಗಮದಲ್ಲಿ ಅಪ್ಪು ಫೋಟೋ ಹಿಡಿದು ಪುಣ್ಯ ಸ್ನಾನ ಮಾಡಿದ ಅಭಿಮಾನಿ: ವಿಡಿಯೋ ನೋಡಿ

ದಕ್ಷಿಣದ ಪವಿತ್ರ ನದಿಗಳಾದ ಕಾವೇರಿ, ಕಪಿಲಾ ಮತ್ತು ಸ್ಫಟಿಕ ಸರೋವರ ಸಂಗಮವಾದ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಮಾಘಮಾಸದ ಪುಣ್ಯಸ್ನಾನಕ್ಕೆ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಇನ್ನು ಭಕ್ತಾದಿಗಳಿಗೆ ಮೂಲಸೌಕರ್ಯ ಸೇರಿ ಹಲವು ವ್ಯವಸ್ಥೆ ಕೂಡ ಮಾಡಲಾಗಿದೆ.

ಕುಂಭಮೇಳ ಹಿನ್ನೆಲೆ ತ್ರಿವೇಣಿ ಸಂಗಮಕ್ಕೆ ನಿರ್ಮಲಾನಂದನಾಥ ಶ್ರೀ ಭೇಟಿ, ಪರಿಶೀಲನೆ 

ಕುಂಭಮೇಳ ಹಿನ್ನೆಲೆ ಈಗಾಗಲೇ ಜಿಲ್ಲಾಡಳಿತ ಕೂಡ ಸಕಲ ಸಿದ್ಧತೆ ಮಾಡಿಕೊಂಡಿದೆ. ಇತ್ತೀಚೆಗೆ ನಿರ್ಮಲಾನಂದನಾಥ ಶ್ರೀಗಳು ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ಮಾಡಿದ್ದರು. ಬಳಿಕ ಅಧಿಕಾರಿಗಳ ಜೊತೆಗೆ ಸಭೆ ಮಾಡಿ, ಯಾವುದೇ ಲೋಪದೋಷವಾಗದಂತೆ  ಕ್ರಮವಹಿಸಲು ಸಲಹೆ ನೀಡಿದ್ದರು.

ಇದನ್ನೂ ಓದಿ: Maha Kumbh Mela 2025: ತ್ರಿವೇಣಿ ಸಂಗಮದಲ್ಲಿ ಮಿಂದವರು ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಎಂದರು!

ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಕುಂಭಮೇಳಕ್ಕೆ ಆಗಮಿಸುತ್ತಾರೆ. ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ನೀಡಬೇಕು. ಕುಂಭಮೇಳ ಯಶಸ್ವಿಗೆ ಅಧಿಕಾರಿಗಳು, ಸಾರ್ವಜನಿಕರ ಸಹಕಾರ ಮುಖ್ಯ ಎಂದು ಹೇಳಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್