AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್​ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕೋರ್ಟ್ ತಡೆ, ಕೆಪಿಸಿಸಿ ವಕ್ತಾರ ಲಕ್ಷ್ಮಣ್​ಗೆ ನೋಟಿಸ್

ಸಂಸದ ಪ್ರತಾಪ್​ ಸಿಂಹ ವಿರುದ್ಧ ಮಾಧ್ಯಮಗಳಲ್ಲಿ ಹೇಳಿಕೆ ನೀಡದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​ಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​​ ತಡೆಯಾಜ್ಞೆ ನೀಡಿದೆ. ಎಂ.ಲಕ್ಷ್ಮಣ್​ ಅವರು ಯಾವುದೇ ಮಾಧ್ಯಮಕ್ಕೆ ಹೇಳಿಕೆ ನೀಡುವಂತಿಲ್ಲ ಎಂದು ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಫೆ.13ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

ಪ್ರತಾಪ್​ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕೋರ್ಟ್ ತಡೆ, ಕೆಪಿಸಿಸಿ ವಕ್ತಾರ ಲಕ್ಷ್ಮಣ್​ಗೆ ನೋಟಿಸ್
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಸಂಸದ ಪ್ರತಾಪ್​ ಸಿಂಹ
ರಾಮ್​, ಮೈಸೂರು
| Edited By: |

Updated on:Jan 31, 2024 | 3:55 PM

Share

ಮೈಸೂರು, ಜನವರಿ 31: ಸಂಸದ ಪ್ರತಾಪಸಿಂಹ ವಿರುದ್ಧ ಪತ್ರಿಕಾಗೋಷ್ಠಿ ನಡೆಸದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ (M.Lakshman) ಗೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​​ ತಡೆಯಾಜ್ಞೆ ನೀಡಿದೆ. ನ್ಯಾಯಾಲಯಕ್ಕೆ ನೀಡಿದ್ದ ದೂರಿನನ್ವಯ ನೋಟಿಸ್ ಜಾರಿ ಮಾಡಿದ್ದು, ಫೆ.13ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಸಂಸದ ಪ್ರತಾಪ್​ ಸಿಂಹ ವಿರುದ್ಧ ಮಾಧ್ಯಮಗಳಲ್ಲಿ ಹೇಳಿಕೆ ನೀಡದಂತೆ ಕೋರ್ಟ್​ ಸೂಚನೆ ನೀಡಿದೆ. ಸಂಸದ ಪ್ರತಾಪಸಿಂಹ ಯಾವುದೇ ಒಂದು ವಿಚಾರವಾಗಿ ಪತ್ರಿಕಾಗೋಷ್ಠಿ ಮಾಡಿ ಮಾತನಾಡಿದ ಮರುದಿನವೇ ಎಂ.ಲಕ್ಷ್ಮಣ್ ಅವರು ಕೂಡ ಪತ್ರಿಕಾಗೋಷ್ಠಿ ಮಾಡಿ ಅವರ ಹೇಳಿಕೆಗಳಿಗೆ ವಾಗ್ದಾಳಿ ಮಾಡುತ್ತಿದ್ದರು. ಹೀಗಾಗಿಯೇ ಪ್ರತಾಪ್​ ಸಿಂಹ ಕೋರ್ಟ್ ಮೊರೆ ಆಗಿದ್ದಾರೆ.

ಸಂಸದ ಪ್ರತಾಪಸಿಂಹ ವಿರುದ್ಧ ಎಂ.ಲಕ್ಷ್ಮಣ್ ಅವರು ಹೇಳಿಕೆಗಳನ್ನು ನೀಡಿದ್ದಾರೆ. ಪ್ರತಾಪ್ ಸಿಂಹ ಅವರು ಇತ್ತೀಚೆಗೆ ತಮ್ಮ ಹೆಸರನ್ನು ಬದಲಾವಣೆ ಮಾಡಿಕೊಂಡಿದ್ದರು. ಅವರಿಗೆ ಸೋಲಿನ ಭೀತಿ ಕಾಡುತ್ತಿದೆ. ಅದಕ್ಕೆ ಇನ್ನೊಂದು ‘M’ ಸೇರಿಸಿಕೊಂಡಿದ್ದಾರೆ. ‘M’ ಅಂದರೆ mockery (ಅಪಹಾಸ್ಯ) ಪ್ರತಾಪ್ ಸಿಂಹ ಅಂತ ಹೇಳಬಹುದು ಎಂದು ಎಂ.ಲಕ್ಷ್ಮಣ್​ ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ಪಾರ್ಕ್​ನಲ್ಲಿ ಟಿಪ್ಪು ಬಾವುಟ ಹಾಕಿದ್ದಾರಲ್ಲ, ಒಪ್ಪಿಗೆ ಪಡೆದಿದ್ದಾರಾ? ಸಿದ್ದರಾಮಯ್ಯ, ಪರಮೇಶ್ವರ್​ಗೆ ಪ್ರತಾಪ್​ ಸಿಂಹ ಪ್ರಶ್ನೆ

ಲೋಕಸಭೆ ಚುನಾವಣೆಯಲ್ಲಿ ತಾನು ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಹೇಳಿದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ತಿರುಗೇಟು ನೀಡಿದ್ದ ಲಕ್ಷ್ಮಣ್, 2 ಲಕ್ಷ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಅದು ಉಲ್ಟಾ ಆಗುತ್ತದೆ. ಅವರು 2 ಲಕ್ಷ ಅಂತರದಲ್ಲಿ ಸೋಲುತ್ತಾರೆ ಎಂದು ವಾಗ್ದಾಳಿ ಮಾಡಿದ್ದರು.

ಮೈಸೂರಿಗೆ ಸಂಸದ ಪ್ರತಾಪ್​ ಸಿಂಹ ಅವರ ಕೊಡುಗೆ ಏನು? ಸಿಎಂ ಸಿದ್ದರಾಮಯ್ಯ ಅವರ ಸಾಧನೆ ಮತ್ತು ಪ್ರತಾಪ್​ ಸಿಂಹ ಸಾಧನೆ ಏನು ಎಂಬುವುದರ ಕುರಿತು ಚರ್ಚೆಯಾಗಲಿ. ಈ ಬಗ್ಗೆ ಸಂಸದರ ಕಚೇರಿ ಬಳಿ ಬಹಿರಂಗ ಚರ್ಚೆ ನಡೆಸಲಿ. ನಾವು ಸಿಎಂ ಸಿದ್ದರಾಮಯ್ಯ ಅವರ ಕೆಲಸಗಳ ದಾಖಲೆ ತರುತ್ತೇವೆ ಎಂದು ಸವಾಲು ಹಾಕಿದ್ದರು.

ಇದನ್ನೂ ಓದಿ: ಅಯೋಧ್ಯೆ ಬಾಲರಾಮನ ಮೂರ್ತಿ ಶಿಲೆಗೂ ದಂಡ: ಶ್ರೀನಿವಾಸ್ ಕಟ್ಟಿದ್ದ 80 ಸಾವಿರ ರೂ. ಬಿಜೆಪಿ ನೀಡಲಿದೆ- ಪ್ರತಾಪ್​ ಸಿಂಹ

ನಿಮ್ಮ ಸುಳ್ಳು, ನಿಮ್ಮ ಡೋಂಗಿತನ ಎಲ್ಲರಿಗೂ ಗೊತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಕಿಡಿಗೇಡಿಗಳನ್ನು ಗೆಲ್ಲಿಸಬೇಡಿ ಅಂತಾ ಕೈ ಮುಗಿದಿದ್ದಾರೆ. ಇದರಲ್ಲಿ ಏನು ತಪ್ಪಿದೆ? ಎಂದು ಪ್ರಶ್ನಿಸಿದ್ದರು.

ಇನ್ನು ಕೊಡಗು ಜಿಲ್ಲೆಗೆ ತಾವು ನೀಡಿದ ಭರವಸೆಗಳನ್ನು ಈಡೇರಿಸಲಾಗದ ಪ್ರತಾಪ್ ಸಿಂಹ ಅವರು ಸುಳ್ಳು ಹೇಳುವ ಮೂಲಕ ಪಲಾಯನವಾದ ಮಾಡಿದ್ದಾರೆ ಎಂದು ಎಂ.ಲಕ್ಷ್ಮಣ್ ಆರೋಪಿಸಿದ್ದರು. ಹೀಗೆ ಸಾಕಷ್ಟು ಪ್ರತಾಪ್ ಸಿಂಹ ವಿರುದ್ಧವಾಗಿ ಹೇಳಿಕೆಗಳನ್ನು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:54 pm, Wed, 31 January 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್