Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಮದ್ದು ಸ್ಫೋಟಗೊಂಡು ಹಸು ಬಾಯಿ ಛಿದ್ರ: ಸಾವು-ಬದುಕಿನ ಮಧ್ಯೆ ಮೂಕ ಜೀವ ನರಳಾಟ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿಯಲ್ಲಿ ಕಾಡುಹಂದಿ ಬೇಟೆಗೆ ಇರಿಸಿದ್ದ ಸಿಡಿಮದ್ದು ಅನಾಹುತಕ್ಕೆ ಕಾರಣವಾಗಿದೆ. ಹಸು ಮೇಯುತ್ತಿದ್ದಾಗ ಸಿಡಿಮದ್ದು ಸ್ಫೋಟಗೊಂಡು ಅದರ ಮುಖಕ್ಕೆ ಗಂಭೀರ ಗಾಯವಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಹಸು ಸಾವು-ಬದುಕಿನ ನಡುವೆ ಹೋರಾಡುತ್ತಿದೆ.

ಸಿಡಿಮದ್ದು ಸ್ಫೋಟಗೊಂಡು ಹಸು ಬಾಯಿ ಛಿದ್ರ: ಸಾವು-ಬದುಕಿನ ಮಧ್ಯೆ ಮೂಕ ಜೀವ ನರಳಾಟ
ಸಿಡಿಮದ್ದು ಸ್ಫೋಟಗೊಂಡು ಹಸು ಬಾಯಿ ಛಿದ್ರ: ಸಾವು-ಬದುಕಿನ ಮಧ್ಯೆ ಮೂಕ ಜೀವ ನರಳಾಟ
Follow us
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Mar 24, 2025 | 6:52 PM

ಮೈಸೂರು, ಮಾರ್ಚ್​ 24: ಹಂದಿ ಬೇಟೆಗೆ ಇಟ್ಟಿದ್ದ ಸಿಡಿಮದ್ದು (Explosives) ಸ್ಫೋಟಿಸಿ ಹಸುವಿನ (cow) ಬಾಯಿ ಛಿದ್ರವಾಗಿರುವಂತಹ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡಗೆ ಹಸು ಸೇರಿದ್ದು, ಮೇಯಲು ಬಿಟ್ಟಾಗ ಅವಘಡ ಸಂಭವಿಸಿದೆ. ಕಿಡಿಗೇಡಿಗಳಿಂದ ಈ ಕೃತ್ಯ ಶಂಕೆ ವ್ಯಕ್ತವಾಗಿದೆ. ಸದ್ಯ ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸಿದೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಚನ್ನನಂಜೇಗೌಡ ಅವರು ಕೆಂಪಿಸಿದ್ದನಹುಂಡಿ ಗ್ರಾಮದ ವಾಟರ್ ಟ್ಯಾಂಕ್‌ ಬಳಿ ಜಾನುವಾರು ಮೇಯಲು ಬಿಟ್ಟಿದ್ದರು. ಕಾಡು ಹಂದಿ ಬೇಟೆಗೆ ಅದೇ ಜಾಗದಲ್ಲಿ ಸಿಡಿಮದ್ದು ಅಡಗಿಸಿಟ್ಟಿದ್ದರು. ಹಸು ಮೇಯುತ್ತಿದ್ದ ವೇಳೆ ಸಿಡಿಮದ್ದು ಸ್ಫೋಟಗೊಂಡು ಗಾಯಗೊಂಡಿದೆ.

ಗೋ ಹತ್ಯೆ ಮಾಡಿ ಮಾಂಸ ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಚಾಲಕ ಪರಾರಿ

ಹುಣಸೂರಿನಲ್ಲಿ ಗೋ ಹತ್ಯೆ ಮಾಡಿ ಮಾಂಸ ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ ಆಗಿರುವಂತಹ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಮಾಂಸ ಸಾಗಾಟ ವಾಹನ ಬೆನ್ನಟ್ಟಿದ್ದ ಪೋಲಿಸರು, ಈ ವೇಳೆ ನಿಯಂತ್ರಣ ತಪ್ಪಿ ಮಾಂಸ ತುಂಬಿಕೊಂಡು ಹೋಗುತ್ತಿದ್ದ ವಾಹನ ಪಲ್ಟಿ ಆಗಿದೆ. ವಾಹನ ಅಲ್ಲೇ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಾಳ್ ಠಾಣೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ
Image
ಬೀದರ್: ಪ್ರಾಣಿ-ಪಕ್ಷಿಗಳ ದಾಹ ಇಂಗಿಸುತ್ತಿರುವ ಸ್ನೇಹಿತರ ಬಳಗ
Image
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
Image
ಗೋ ಕಳ್ಳತನ ಮಾಡೋರನ್ನು ಸರ್ಕಲಲ್ಲಿ ನಿಲ್ಲಿಸಿ ಗುಂಡಿಕ್ಕಬೇಕು: ಮಂಕಾಳ ವೈದ್ಯ
Image
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು

ಪೊಲೀಸ್ ಇಲಾಖೆಗೆ ಧನ್ಯವಾದ ಹೇಳಿದ ಪ್ರತಾಪ್ ಸಿಂಹ

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಹುಣಸೂರಿನಲ್ಲಿ ಗೋಹತ್ಯೆ ಮಾಡಿ ಮಾಂಸ ಸಾಗಿಸುತ್ತಿದ್ದ ವಾಹನವನ್ನು ಮಾಹಿತಿ ಆಧಾರದ ಮೇಲೆ ಮೈಸೂರು ಪೋಲೀಸರು ಬೆನ್ನಟ್ಟಿದಾಗ ವಾಹನ ಮಗುಚಿ ಬಿದ್ದಿದ್ದು, ಎಫ್​ಐಆರ್​ ದಾಖಲು ಮಾಡಿ ತನಿಖೆ ಆರಂಭಿಸಿದ ಪೊಲೀಸ್ ಇಲಾಖೆಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಹತ್ತಕ್ಕೂ ಹೆಚ್ಚು ನಾಯಿಗಳಿಂದ ವೃದ್ದೆ ಮೇಲೆ ದಾಳಿ

ಇತ್ತೀಚೆಗೆ ಸುಮಾರು ಏಳೆಂದು ನಾಯಿಗಳ ಗುಂಪು ಶ್ರೀನಿವಾಸಪುರ ಪಟ್ಟಣದ ವಿಜಯಲಕ್ಷ್ಮೀ ರಸ್ತೆಯಲ್ಲಿ ನಾಲ್ಕೈದು ಜನರ ಮೇಲೆ ದಾಳಿ ಮಾಡಿದ್ದವು. ಈ ಘಟನೆ ಮಾಸುವ ಮುನ್ನವೇ ಕೆಲ ದಿನಗಳಲ್ಲಿ ಶ್ರೀನಿವಾಸಪುರದ ಪಟ್ಟಣದ ಮಾರುತಿನಗರದ ನಿವಾಸಿ 65 ವರ್ಷದ ಅರಿಕೇರಿ ಗ್ರಾಮದ ಲಕ್ಷ್ಮಮ್ಮ ಎಂಬುವವರಿಗೆ ಹತ್ತಕ್ಕೂ ಹೆಚ್ಚು ನಾಯಿಗಳ ಗುಂಪು ವೃದ್ದೆ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ನಡೆದಿತ್ತು.

ಇದನ್ನೂ ಓದಿ: ಬೀದರ್​ನಲ್ಲಿ ನೀರಿಗಾಗಿ ಹಾಹಾಕಾರ: ಪ್ರಾಣಿ-ಪಕ್ಷಿಗಳ ದಾಹ ಇಂಗಿಸುತ್ತಿರುವ ಯುವಕರು

ವೃದ್ದೆಗೆ ಗಾಯಗೊಳಿಸಿದ ಪರಿಣಾಮ ತೀವ್ರ ರಕ್ತಸ್ರಾವವಾದ ಪರಿಣಾಮ ಸ್ಥಳಿಯರು ಕೂಡಲೇಆಂಬುಲೆನ್ಸ್​ಗೆ ಕರೆ ಮಾಡಿ ವೃದ್ದೆಯನ್ನು‌ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಪುರಸಭೆ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನು ಎಷ್ಟು ಜನರ ಬಲಿಯಾಗಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ