AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಗೃಹಿಣಿಗೆ ಮೆಸೆಜ್ ಮಾಡಿದ್ದಕ್ಕೆ ಹತ್ಯೆ, ಅಸಲಿಗೆ ಯುವಕನ ಹೆಣ ಬಿದ್ದಿದ್ದು ಯಾಕೆ ಗೊತ್ತಾ?

ಗೃಹಿಣಿಗೆ ಮೆಸೇಜ್ ಮಾಡಿದಕ್ಕೆ ಯುವಕನನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಪ್ರಕರಣದ ಅಸಲಿಯತ್ತು ಬೆಳಕಿಗೆ ಬಂದಿದೆ. ಮತ್ತೊಬ್ಬನ ಮೇಲಿನ ದ್ವೇಷ ತೀರಿಸಿಕೊಳ್ಳಲು ಸ್ನೇಹಿತನನ್ನು ಕೊಲೆ‌ ಮಾಡಿದ ಮಾಹಿತಿ ಪೊಲೀಸರಿಗೆ ತಿಳಿದುಬಂದಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಮೈಸೂರು: ಗೃಹಿಣಿಗೆ ಮೆಸೆಜ್ ಮಾಡಿದ್ದಕ್ಕೆ ಹತ್ಯೆ, ಅಸಲಿಗೆ ಯುವಕನ ಹೆಣ ಬಿದ್ದಿದ್ದು ಯಾಕೆ ಗೊತ್ತಾ?
ಒಬ್ಬನ ಮೇಲಿನ ದ್ವೇಷಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi|

Updated on:Sep 02, 2023 | 9:55 AM

Share

ಮೈಸೂರು, ಸೆ.2: ಯುವಕನೊಬ್ಬನ ಕೊಲೆ ಪ್ರಕರಣ (Murder Case) ಸಂಬಂಧ ಆರೋಪಿಯನ್ನು ಬಂಧಿಸಿದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅದರಂತೆ, ಪ್ರಕರಣದ ಹಿಂದಿನ ಅಸಲಿಯತ್ತು ಬಹಿರಂಗವಾಗಿದೆ. ಹೆಂಡತಿಗೆ ಮೆಸೆಜ್ ಮಾಡಿದ ವಿಚಾರವಾಗಿ ಮಹಿಳೆಯ ಪತಿ ಮತ್ತು ಯುವಕನೊಬ್ಬನ ನಡುವೆ ಜಗಳ ನಡೆದಿತ್ತು. ಈ ವಿಚಾರವಾಗಿ ದ್ವೇಷ ಬೆಳೆಸಿದ ಮಹಿಳೆಯ ಪತಿ, ತನ್ನ ಆತ್ಮೀಯ ಸ್ನೇಹಿತನನ್ನು ಕೊಲೆ ಮಾಡಿ ಪ್ರಕರಣವನ್ನು ಮತ್ತೊಬ್ಬರ ಮೇಲೆ ಎತ್ತಿಹಾಕುವ ಯತ್ನ ನಡೆದಿರುವುದು ತಿಳಿದುಬಂದಿದೆ.

ಹೆಚ್‌ಡಿ.ಕೋಟೆ ತಾಲೂಕಿನ ನೇರಳೆಹುಂಡಿ ಗ್ರಾಮದಲ್ಲಿ ಭಾನುಪ್ರಕಾಶ್ ಎಂಬ ಯುವಕನ‌ ಕೊಲೆ ಆಗಿತ್ತು. ಪ್ರಕರಣ ಸಂಬಂಧ ಗಲಾಟೆ ಮಾಡಿದ್ದ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಭಾನುಪ್ರಕಾಶ್ ಕೊಲೆ ಮಾಡಿದ್ದು ಆತನ ಸ್ನೇಹಿತ ದಿನೇಶ್ ಎಂಬುದು ಬಹಿರಂಗವಾಗಿದೆ.

ಇದನ್ನೂ ಓದಿ: ಮೈಸೂರು: ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ಅಣ್ಣ, ಅತ್ತಿಗೆಯ ಬರ್ಬರ ಕೊಲೆ

ದಿನೇಶ್ ಆತನ ಗೆಳೆಯ ಭೀಮನ ಜೊತೆ ಸೇರಿ ಭಾನುಪ್ರಕಾಶ್ ಕತ್ತು ಸೀಳಿ ಕೊಲೆ ಮಾಡಿದ್ದರು. ಗ್ರಾಮದ ಹೊರ ವಲಯದಲ್ಲಿ ಶವ ಬಿಟ್ಟು ಡ್ರ್ಯಾಗರ್ ಕಬಿನಿ ನದಿಗೆ ಬಿಸಾಕಿದ್ದರು. ಈ ಕೊಲೆಯನ್ನು ಅದೇ ಗ್ರಾಮದ ಎನ್.ಪ್ರಕಾಶ್ ಎಂಬುರವ ಮೇಲೆ ಬರುವಂತೆ ಮಾಡಿದ್ದ.

ಕೊನೆಗೆ ಮೊಬೈಲ್ ಟವರ್ ಲೊಕೇಶನ್ ಮೂಲಕ ಪೊಲೀಸರು ಕೊಲೆ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಕೊಲೆಗೆ ಆರೋಪಿ ದಿನೇಶ್ ಹಾಗೂ ಎನ್.ಪ್ರಕಾಶ್ ನಡುವೆ ಇದ್ದು ಹಳೆ ದ್ವೇಷವೇ ಕಾರಣ ಎಂದು ತಿಳಿದುಬಂದಿದೆ. ಇಬ್ಬರ ನಡುವಿನ ದ್ವೇಷದಲ್ಲಿ ಆತ್ಮೀಯ ಸ್ನೇಹಿತನನ್ನೇ ಕೊಂದಿರುವುದು ವಿಪರ್ಯಾಸವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:04 am, Sat, 2 September 23

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ