AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಮಹೋತ್ಸವಕ್ಕೆ ಮೈಸೂರು ರಾಜವಂಶಸ್ಥರಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಸೋಮಶೇಖರ್

ಬುಧವಾರ ಮಧ್ಯಾಹ್ನ 2 ಗಂಟೆಗೆ ದಸರಾ ಉದ್ಘಾಟಕರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಆಗಮಿಸುತ್ತಾರೆ. ಮೈಸೂರು ನಗರದ ಆರಂಭದಲ್ಲೇ ಅವರಿಗೆ ಸ್ವಾಗತ ಕೋರುತ್ತೇವೆ ಎಂದು ಅವರು ತಿಳಿಸಿದರು.

ದಸರಾ ಮಹೋತ್ಸವಕ್ಕೆ ಮೈಸೂರು ರಾಜವಂಶಸ್ಥರಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಸೋಮಶೇಖರ್
ಸಚಿವ ಎಸ್.ಟಿ. ಸೋಮಶೇಖರ್ (ಸಂಗ್ರಹ ಚಿತ್ರ)
TV9 Web
| Updated By: guruganesh bhat|

Updated on: Oct 05, 2021 | 5:12 PM

Share

ಮೈಸೂರು: ದಸರಾ ಉದ್ಘಾಟನೆ ವೇಳೆ 400 ಜನರಿಗೆ ಅವಕಾಶ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೇನೆ ಎಂದು ಮೈಸೂರಿನಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಜಂಬೂಸವಾರಿ ವೇಳೆಯೂ ಹೆಚ್ಚು ಜನ ಭಾಗಿಯಾಗಬೇಕು. ಇದಕ್ಕೂ ಅನುಮತಿ ನೀಡುವಂತೆ ಸರ್ಕಾರಕ್ಕೆ ಕೇಳಿದ್ದೇನೆ. ನನ್ನ ಮನವಿ ಸಿಎಂ ಆಲಿಸಿ ಹೊಸ ಆದೇಶ ಹೊರಡಿಸಬಹುದು ಎಂದು ಸಚಿವ ಎಸ್.ಟಿ. ಸೋಮಶೇಖರ್‌ ತಿಳಿಸಿದರು. 

ದಸರಾಗೆ ಅಡಚಣೆ ಆಗದಂತೆ ಸಹಕಾರ ನೀಡುವಂತೆ ರಾಜವಂಶಸ್ಥರನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ಪ್ರತಿವರ್ಷದಂತೆ ಈ ವರ್ಷವು ಅವರಿಗೆ ಗೌರವಧನ ನೀಡಲಾಗಿದೆ. ಈ ಬಾರಿಯು ಬನ್ನಿಮಂಟಪದಲ್ಲಿ ಪಂಜಿನ ಕವಾಯತು ನಡೆಸಲಾಗುವುದಿಲ್ಲ. ಬುಧವಾರ ಮಧ್ಯಾಹ್ನ 2 ಗಂಟೆಗೆ ದಸರಾ ಉದ್ಘಾಟಕರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಆಗಮಿಸುತ್ತಾರೆ. ಮೈಸೂರು ನಗರದ ಆರಂಭದಲ್ಲೇ ಅವರಿಗೆ ಸ್ವಾಗತ ಕೋರುತ್ತೇವೆ ಎಂದು ಅವರು ತಿಳಿಸಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2021ಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಅವರಿಗೆ ದಸರಾಗೆ ಸಚಿವ ಎಸ್.ಟಿ. ಸೋಮಶೇಖರ್‌ ಅಧಿಕೃತ ಆಹ್ವಾನ ನೀಡಿದರು. ಸಚಿವರಿಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್ ನಾಗೇಂದ್ರ, ಮೇಯರ್ ಸುನಂದಪಾಲನೇತ್ರ, ಮುಡಾ ಅಧ್ಯಕ್ಷ ಹೆಚ್ ವಿ ರಾಜೀವ್, ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್, ಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ, ಸೇರಿದಂತೆ ಹಲವರು ಸಹಯೋಗ ನೀಡಿದ್ದರು.

ದಸರಾ ಆಚರಣೆಗೆ ಕರ್ನಾಟಕ ಸರ್ಕಾರದಿಂದ ಗೈಡ್​ಲೈನ್ಸ್ ಬಿಡುಗಡೆ; ಮೈಸೂರಿಗೆ ಪ್ರತ್ಯೇಕ ಮಾರ್ಗಸೂಚಿ ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರ ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ. ಸರಳವಾಗಿ ದಸರಾ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಮೈಸೂರು ದಸರಾ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ದಸರಾ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುವುದು. ಈ ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಇತರೆ ಇಲಾಖೆ ಮುಖ್ಯಸ್ಥರುಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಅಂತ ತಿಳಿಸಿದೆ.

ಮೈಸೂರು ದಸರಾ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅರಮನೆ ಆವರಣದಲ್ಲಿ ದಸರಾ ಆಚರಣೆ ನಡೆಸಬೇಕು. ಜನರು ಮಾಸ್ಕ್, ಸ್ಯಾನಿಟೈಸ್​ನ ಕಡ್ಡಾಯವಾಗಿ ಬಳಸಬೇಕು. ವರ್ಚುವಲ್ ಮೂಲಕ ಜಂಬೂಸವಾರಿ ವೀಕ್ಷಣೆ ಮಾಡಬೇಕು ಅಂತ ತಿಳಿಸಿದ ಸರ್ಕಾರ, ಅ.7ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಅನುಮತಿ ನೀಡಿದೆ.

8 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 500 ಜನರಿಗೆ ಅವಕಾಶ ನೀಡಲಾಗಿದೆ. ಜಂಬೂಸವಾರಿ, ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ರಾಜ್ಯ ಸರ್ಕಾರ ಅವಕಾಶ ನೀಡಿ ಮಾರ್ಗಸೂಚಿ ಹೊರಡಿಸಿದೆ. ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್​ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಕೊರೊನಾ ಹಿನ್ನಲೆ ಸರಳ ಮತ್ತು ಭಕ್ತಿ ಪೂರ್ವಕ ದಸರಾ ಆಚರಣೆಗೆ ಆದ್ಯತೆ ನೀಡಿದ ಸರ್ಕಾರ, ಮೈಸೂರು ಹೊರತಾಗಿ ಬೇರೆ ದಸರಾಗೆ 400 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಸಾಮಾಜಿಕ ಅಂತರ ಉಲ್ಲಂಘನೆ ‌ಮಾಡಿದರೆ ಕಾರ್ಯಕ್ರಮ ರದ್ದುಗೊಳಿಸಲಾಗುತ್ತದೆ. ಅರಮನೆ ಆವರಣದಲ್ಲಿ ನಡೆಯವ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆಯೂ ಕೊರೊನಾ ನಿಯಮ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಜನರು ದಸರಾಗೆ ಬರಬೇಡಿ. ಅನ್​ಲೈನ್​ ಮೂಲಕ ವೀಕ್ಷಿಸಿ ಅಂತ ತಿಳಿಸಿದೆ.

ಇದನ್ನೂ ಓದಿ:

Dasara 2021 Guidelines: ದಸರಾ ಆಚರಣೆಗೆ ಕರ್ನಾಟಕ ಸರ್ಕಾರದಿಂದ ಗೈಡ್​ಲೈನ್ಸ್ ಬಿಡುಗಡೆ; ಮೈಸೂರಿಗೆ ಪ್ರತ್ಯೇಕ ಮಾರ್ಗಸೂಚಿ

Dasara 2021: ಮೈಸೂರು ದಸರಾ ಎಷ್ಟೊಂದು ಸುಂದರಾ..ಇಲ್ಲಿದೆ 7 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿ