Mysuru Dasara 2022: ಮೈಸೂರಿನ ಶಾಲೆಗಳಿಗೆ ಸೆ.26 ರಿಂದ ದಸರಾ ರಜೆ ಶುರು
ಸಾರ್ವಜನಿಕ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ ಅಕ್ಟೋಬರ್ 03, 2022 ರಿಂದ 16, 2022 ರವರೆಗೆ, ಒಟ್ಟು 14 ದಿನಗಳ ಕಾಲ ದಸರಾ ರಜೆ ನೀಡಿದೆ.
ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ(Dasara) ಸಂಭ್ರಮ ಮನೆ ಮಾಡಿದೆ. ಸದ್ಯ ದಸರಾ ಅಂಗವಾಗಿ ಜಿಲ್ಲೆಯ ಶಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9 ರವರೆಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಉಪನಿರ್ದೇಶಕರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ಸುತ್ತೋಲೆ ಹೊರಡಿಸಿದೆ.
2022-23ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅವಧಿಯನ್ನು ನಿಗದಿಪಡಿಸಲಾಗಿದೆ. ಮೈಸೂರು ದಸರಾ ನವರಾತ್ರಿ ಕಾರ್ಯಕ್ರಮಗಳು ದಿನಾಂಕ 26-09-2022 ರಿಂದ ಪ್ರಾರಂಭವಾಗುತ್ತಿದೆ. ಹಾಗೂ ದಿನಾಂಕ 02-10-2022ರಂದು ಮಹಾತ್ಮ ಗಾಂಧಿ ಜಯಂತಿ ಮತ್ತು 09-10-2022ರಂದು ವಾಲ್ಮೀಕಿ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವ ಷರತ್ತಿನ ಮೇರೆಗೆ ಮೈಸೂರು ಜಿಲ್ಲೆಗೆ ದಿನಾಂಕ 26-09-2022 ರಿಂದ 9-10-2022ರವರೆಗೆ ಮಕ್ಕಳ ಹಿತದೃಷ್ಟಿಯಿಂದ ದಸರಾ ರಜೆ ನೀಡಲು ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: Mrunal Thakur: ನಟಿ ಮೃಣಾಲ್ ಠಾಕೂರ್ ಸಂಬಳ ಎಷ್ಟು? ‘ಸೀತಾ ರಾಮಂ’ ಸೂಪರ್ ಹಿಟ್ ಆದ್ಮೇಲೆ ಹೆಚ್ಚಿದೆ ಡಿಮ್ಯಾಂಡ್
ಸಾರ್ವಜನಿಕ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ ಅಕ್ಟೋಬರ್ 03, 2022 ರಿಂದ 16, 2022 ರವರೆಗೆ, ಒಟ್ಟು 14 ದಿನಗಳ ಕಾಲ ದಸರಾ ರಜೆ ನೀಡಿದೆ. ವಿದ್ಯಾರ್ಥಿಗಳು ಅರ್ಧವಾರ್ಷಿಕ ಪರೀಕ್ಷೆಗೆ ಅಧ್ಯಯನ ಮಾಡಿಕೊಳ್ಳುವ ದೃಷ್ಟಿಯಿಂದ ಈ ರಜೆಯನ್ನು ಪ್ರತಿವರ್ಷ ನೀಡಲಾಗುತ್ತದೆ.
ಅಕ್ಟೋಬರ್ 16 ಕ್ಕೆ ದಸರಾ ರಜೆ ಮುಕ್ತಾಯವಾಗುತ್ತದೆ. ಅಕ್ಟೋಬರ್ 17 ರಿಂದ ನವೆಂಬರ್ 25 ರವರೆಗೆ 4ನೇ ತರಗತಿಯಿಂದ 9ನೇ ತರಗತಿಗಳಿಗೆ ಅರ್ಧವಾರ್ಷಿಕ ಪರೀಕ್ಷೆ ಹಾಗೂ ಮೌಲ್ಯಮಾಪನ ಕಾರ್ಯ ನಡೆಯಲಿದೆ. 2022-23 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟು 60 ಸರ್ಕಾರಿ ರಜಾ ದಿನಗಳು ಇರಲಿದ್ದು, 270 ಶಾಲಾ ಕರ್ತವ್ಯದ ದಿನಗಳಾಗಿವೆ. ಇನ್ನು ಅಕ್ಟೋಬರ್ 1 ರಿಂದ ಕರ್ನಾಟಕದ ಇತರೆ ಭಾಗದಲ್ಲಿ ದಸರಾ ರಜೆ ಪ್ರಾರಂಭವಾಗುತ್ತದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:21 am, Tue, 20 September 22