ಮೈಸೂರು, ಅಕ್ಟೋಬರ್ 11: ತಮಿಳುನಾಡಿಗೆ 15 ದಿನ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಇಂದು ಆದೇಶ ಹೊರಡಿಸಿದೆ. ಸದ್ಯ ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ರಾಜ್ಯದ ಡ್ಯಾಮ್ಗಳಲ್ಲಿ ಎಷ್ಟು ಟಿಎಂಸಿ ನೀರಿದೆ ಎಂದು ದಾಖಲೆ ಪಡೆದಿದ್ದಾರೆ. ತಮಿಳುನಾಡಿನ ಡ್ಯಾಮ್ನಲ್ಲಿ ಎಷ್ಟು ನೀರಿದೆ ಎಂದು ಮಾಹಿತಿ ಪಡೆದಿದ್ದಾರೆ. ಕರ್ನಾಟಕ ಜಲಾಶಯಗಳಿಗೆ 7ರಿಂದ 10 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಹಾಗಾಗಿ ನಮ್ಮ ರಾಜ್ಯದ ರೈತರ ರಕ್ಷಣೆಗೆ ಎಲ್ಲಾ ವ್ಯವಸ್ಥೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಬಿಳಿಗುಂಡ್ಲು ಜಲಮಾಪನ ಕೇಂದ್ರಕ್ಕೆ 2 ದಿನ ಕಡಿಮೆ ನೀರು ಹೋಗಿದೆ. ಬೆಂಗಳೂರಿನಲ್ಲಿ ಮಳೆಯಾದ ಕಾರಣ ಅದು ಬ್ಯಾಲೆನ್ಸ್ ಆಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮನದಟ್ಟು ಮಾಡಿಕೊಟ್ಟಿದ್ದೇವೆ. ಏನೇ ಆದೇಶ ಬಂದರೂ ನಮ್ಮ ರೈತರ ಹಿತ ಕಾಯುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ: ಕಾವೇರಿ ವಿವಾದ: ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶ
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ 192 ತಾಲೂಕು ಬರ ಘೋಷಣೆ ಮಾಡಲಾಗಿದೆ. ಮಳೆ ಬಾರದ ಕಾರಣ ಬರ ಬಂದಿದೆ. ಕಳೆದ ಬಾರಿಗಿಂತ ಅರ್ಧದಷ್ಟು ಮಳೆ ಬಂದಿದೆ. ಈಗಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಆದರು ಸರ್ಕಾರ ಇದನ್ನ ಬ್ಯಾಲೆನ್ಸ್ ಮಾಡುತ್ತೆ ಎಂದು ಹೇಳಿದ್ದಾರೆ.
ಮೇಕೆದಾಟು ವಿಚಾರವಾಗಿ ಮಾತನಾಡಿದ್ದು, ಅದನ್ನು ಸಾರ್ವಜನಿಕವಾಗಿ ಮಾತನಾಡುವುದಿಲ್ಲ. ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ನಿರ್ಧಾರ ಕೈಗೊಳ್ಳಬೇಕು. ಮೇಕೆದಾಟು ಅಣೆಕಟ್ಟು ನಿರ್ಮಾಣ ನಮ್ಮ ಮೊದಲ ಆದ್ಯತೆಯಾಗಿದೆ. ಮೇಕೆದಾಟು ವಿಚಾರವಾಗಿ ಕೋರ್ಟ್ ಮುಂದೆ ವಾದ ಮಾಡುತ್ತಿದ್ದೇವೆ. ಕೋರ್ಟ್ನಲ್ಲಿ ಮತ್ತಷ್ಟು ವಾದ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ತಮಿಳುನಾಡು ಸರ್ಕಾರಕ್ಕೆ ಕೋರ್ಟ್ ಈಗಾಗಲೇ ನಿರ್ದೇಶನ ನೀಡಿದೆ. ಡ್ಯಾಂ ಕಟ್ಟಿ 170 ಟಿಎಂಸಿ ನೀರು ಕೊಡುತ್ತಾರೆಂದು ಮನದಟ್ಟು ಮಾಡಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ; ಹೆಚ್ಡಿ ಕುಮಾರಸ್ವಾಮಿ
ಡಿಸಿಎಂ ಡಿ.ಕೆ.ಶಿವಕುಮಾರ್ ಕಾಲಿಗೆ ಶಾಸಕ ಮುನಿರತ್ನ ಬಿದ್ದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕಾಲಿಗೆ ಬಿದ್ರಾ, ನಾನೇನು ಮಠದ ಸ್ವಾಮೀಜಿನಾ. ಮುನಿರತ್ನ ದ್ವೇಷದ ರಾಜಕಾರಣ ಅಂತಾ ಹೇಳುತ್ತಿದ್ದಾರೆ. ನಮ್ಮ ಕ್ಷೇತ್ರದ ಮೆಡಿಕಲ್ ಕಾಲೇಜನ್ನು ಹೇಗೆ ತೆಗೆದರು ಅಂತಾ ಕೇಳಿ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.