ಮೈಸೂರಿನ ಸರ್ಕಾರಿ ಶಿಕ್ಷಕರಿಗೆ ವಸ್ತ್ರ ಸಂಹಿತೆ ಜಾರಿ: ಶಿಕ್ಷಕರು ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸದಂತೆ ಆದೇಶ

| Updated By: ಆಯೇಷಾ ಬಾನು

Updated on: Nov 07, 2021 | 1:22 PM

ಮೈಸೂರು ಜಿಲ್ಲೆಯ ಉಪನಿರ್ದೇಶಕರ ಕಚೇರಿ, ಹಾಗೂ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಕಾಲೇಜುಗಳಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸುವುದನ್ನು ನಿರ್ಬಂಧಿಸಲಾಗಿದೆ.

ಮೈಸೂರಿನ ಸರ್ಕಾರಿ ಶಿಕ್ಷಕರಿಗೆ ವಸ್ತ್ರ ಸಂಹಿತೆ ಜಾರಿ: ಶಿಕ್ಷಕರು ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸದಂತೆ ಆದೇಶ
ಸಾಂದರ್ಭಿಕ ಚಿತ್ರ
Follow us on

ಮೈಸೂರು: ಕರ್ತವ್ಯದಲ್ಲಿ ಇರುವಾಗ ಜಿಲ್ಲಾ ಉಪನಿರ್ದೇಶಕರ ಕಚೇರಿ, ಕಾಲೇಜುಗಳಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸದಂತೆ ಡಿಡಿಪಿಯು ಶ್ರೀನಿವಾಸ್ ಮೂರ್ತಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯದ ವೇಳೆ ಸಿಬ್ಬಂದಿ ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸುವುದನ್ನು ನಿರ್ಭಂದಿಸಿ ಆದೇಶ ನೀಡಿದ್ದು ಜಿಲ್ಲಾಧಿಕಾರಿಗಳ ಮೌಖಿಕ ಸೂಚನೆ ಮೇರೆಗೆ DDPU ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲೆಯ ಉಪನಿರ್ದೇಶಕರ ಕಚೇರಿ, ಹಾಗೂ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಕಾಲೇಜುಗಳಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸುವುದನ್ನು ನಿರ್ಬಂಧಿಸಲಾಗಿದೆ. ವೃತ್ತಿಪರವಾಗಿ ಕಾಣಲು ಸೂಕ್ತವಾದ ಫಾರ್ಮಲ್ ಬಟ್ಟೆಗಳನ್ನು ಧರಿಸಲು ತಿಳಿಸಲಾಗಿದೆ.

ಇದನ್ನೂ ಓದಿ: ರಾಮನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ! ವಿದ್ಯಾರ್ಥಿನಿ ಸಾವು

Moto E30: 48MP ಕ್ಯಾಮೆರಾ, 5000mAh ಬ್ಯಾಟರಿಯ ಹೊಸ ಮೋಟೋ E30 ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ?

Published On - 1:16 pm, Sun, 7 November 21