AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಗಂಡ-ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ

ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವಂತಹ ಘಟನೆ ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿ ನಡೆದಿದೆ. ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಓರ್ವನ ಶವ ಸೇರಿದಂತೆ ದಂಪತಿ, ಇಬ್ಬರು ಹೆಣ್ಣು ಮಕ್ಕಳ ಶವಪತ್ತೆಯಾಗಿದೆ.

ಮೈಸೂರು: ಗಂಡ-ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ
ಮೃತ ಕುಟುಂಬ
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 27, 2023 | 4:45 PM

Share

ಮೈಸೂರು, ಆಗಸ್ಟ್​ 27: ಒಂದೇ ಕುಟುಂಬದ ನಾಲ್ವರ ಶವ ಪತ್ತೆ (Dead bodies) ಆಗಿರುವಂತಹ ಘಟನೆ ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿ ನಡೆದಿದೆ. ಮನೆಯೊಂದರಲ್ಲಿ ದಂಪತಿ ಮಹದೇವಸ್ವಾಮಿ(48), ಅನಿತಾ (35), ಪುತ್ರಿಯರಾದ ಚಂದ್ರಕಲಾ(17), ಧನಲಕ್ಷ್ಮೀ(15) ಮೃತರು. ದೊಡ್ಡ ಮಗಳು ಚಂದ್ರಕಲಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನಿತಾ ಮೃತದೇಹ ಕುರ್ಚಿ ಮೇಲೆ, ಚಿಕ್ಕ ಮಗಳು ಕೊಠಡಿಯಲ್ಲಿ ಮತ್ತು ಮಹದೇವ ಸ್ವಾಮಿ ಶವ ಹಾಲ್‌ನಲ್ಲಿ ಪತ್ತೆಯಾಗಿದೆ. ಮೃತ ಮಹದೇವಸ್ವಾಮಿ ಬಂಡಿಪಾಳ್ಯದಲ್ಲಿ ಮಳಿಗೆ ಹೊಂದಿದ್ದರು.

ಮೂಲತಃ ಮೈಸೂರು ತಾಲ್ಲೂಕು ಬರಡನಪುರ ಗ್ರಾಮದವರಾಗಿದ್ದು, ಎರಡು ತಿಂಗಳ ಹಿಂದೆ ಚಾಮುಂಡಿಪುರಂ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ಕುಟುಂಬ ವಾಸವಾಗಿತ್ತು. ಸದ್ಯ ಪೊಲೀಸ್​ ಆಯುಕ್ತ ರಮೇಶ್ ಬಾನೋತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ಕುರಿತಾಗಿ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಾರು ಡಿಕ್ಕಿ: ಪೌರ ಕಾರ್ಮಿಕನಿಗೆ ಗಂಭೀರ ಗಾಯ

ಬೆಳ್ಳಂಬೆಳಗ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯನಿರತ ಪೌರ ಕಾರ್ಮಿಕನಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಡೆದಿದೆ. ಮಹದೇವ (36) ಅಪಘಾತದಲ್ಲಿ ಗಾಯಗೊಂಡ ಪೌರ ಕಾರ್ಮಿಕ. ಅತಿ ವೇಗದೊಂದಿಗೆ ಚಾಲಕನ ಮೊಬೈಲ್ ಬಳಕೆ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಳೆಹಣ್ಣಿನ ವಿಚಾರಕ್ಕೆ ಕಿರಿಕ್; ಕಿಡ್ನಾಪ್ ಮಾಡಿ ದರೋಡೆ ಮಾಡಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್

ಅಪಘಾತದಲ್ಲಿ ಪೌರಕಾರ್ಮಿಕನ ಕಾಲಿನ ಪಾದ ಬೇರ್ಪಟ್ಟಿದ್ದು, ಗಾಯಾಳು ಮಹದೇವ್‌ಗೆ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರು ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ದೇವರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಚಲಿಸುತ್ತಿದ್ದ ಕ್ಯಾಂಟರ್​​ನ​​ ಚಕ್ರದ ಕೆಳಗೆ ಬಿದ್ದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕ್ಯಾಂಟರ್ ಕೆಳಗೆ‌ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ಬಳಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಆತ್ಮಹತ್ಯೆಯ ದೃಶ್ಯ ಸಿಸಿಟಿವಿ‌ಯಲ್ಲಿ ಸೆರೆ ಆಗಿದೆ. ಮೃತನ ಗುರುತು ಹಾಗೂ ಆತ್ಮಹತ್ಯೆಗೆ ಕಾರಣ ಪತ್ತೆಯಾಗಿಲ್ಲ, ಆದರೆ ಸುಮಾರು 45 ರಿಂದ 50 ವರ್ಷ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದ ಹತ್ಯೆ: ತಂದೆಯಿಂದಲೇ ಮಗಳ ಕೊಲೆ

ರಾತ್ರಿ ಎಂದಿನಂತೆ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಈ‌ ವೇಳೆ ಕ್ಯಾಂಟರ್ ಆಗಮನಕ್ಕಾಗೆ‌ ರಸ್ತೆ ಬದಿಯಲ್ಲಿ ಕಾದು ನಿಂತಿದ್ದ ವ್ಯಕ್ತಿ, ಕ್ಯಾಂಟರ್ ಮುಂದೆ ಸಾಗುತ್ತಿದ್ದಂತೆ ಹಿಂಬದಿ ಚಕ್ರದ ಕೆಳಗಡೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:02 pm, Sun, 27 August 23

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ