ಮೈಸೂರು, ಸೆ.19: ಜಿಲ್ಲೆಯ ಕೆ.ಆರ್.ನಗರ ತಾಲೂಕು ಚುಂಚನಕಟ್ಟೆ ಬಳಿಯ ನಾಲೆಯೊಂದರಲ್ಲಿ ವ್ಯಕ್ತಿ ಶವ(Dead Body Found) ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಮೃತಪಟ್ಟಿದ್ದು ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಚುಂಚನಕಟ್ಟೆ ಪೊಲೀಸರು(Chunchanakatte Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವ್ಯಕ್ತಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರಾ? ಆತ್ಮಹತ್ಯೆಯಾ? ಕೊಲೆಯಾ? ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕ ಛಬ್ಬಿ ಗ್ರಾಮದಲ್ಲಿ ಸಾಲಬಾಧೆ ತಾಳಲಾಗದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೀಲಪ್ಪ ಗೊರವರ (38) ಆತ್ಮಹತ್ಯೆ ಮಾಡಿಕೊಂಡ ರೈತ. ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಲದಲ್ಲಿ ಗೋವಿನ ಜೋಳ ಬೆಳೆದಿದ್ದು ಮಳೆ ಇಲ್ಲದೆ ಬೆಳೆ ನಾಶವಾಗಿದೆ. ಹೀಗಾಗಿ ಮನನೊಂದು ಆತ್ಮ ಹತ್ಯೆಗೆ ಶರಣಾಗಿದ್ದಾರೆ. ರೈತನಿಗೆ KVG ಬ್ಯಾಂಕ್, ಕೈಗಡ ಸಾಲ ಸೇರಿ ಲಕ್ಷಾಂತರ ರೂ. ಸಾಲ ಇತ್ತು. ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಲಾರ ಜಿಲ್ಲೆ ಬಂಗಾರಪೇಟೆ ತಾ.ತಮ್ಮೇನಹಳ್ಳಿ ಗ್ರಾಮದಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲ್ಯಕ್ಷಕ್ಕೆ ಬಾಲಕ ಪ್ರಜ್ವಲ್(16) ಬಲಿಯಾಗಿದ್ದಾರೆ. ವಿದ್ಯುತ್ ಕಂಬಕ್ಕೆ ಗ್ರೌಂಡಿಗ್ ತಂತಿ ಹಾಕದಿರುವುದು ಘಟನೆಗೆ ಕಾರಣವಾಗಿದೆ. 11ಕೆವಿ ವಿದ್ಯುತ್ ಕಂಬದಲ್ಲಿ ವಿದ್ಯುತ್ ಸೋರಿಕೆಯಾಗಿದೆ. ವಿದ್ಯುತ್ ಕಂಬದ ಬಳಿ ಹೋದ ಬಾಲಕನಿಗೆ ವಿದ್ಯುತ್ ತಗಲಿ ಸ್ಥಳದಲ್ಲೇ ಬಾಲಕ ಮೃತಪಟ್ಟಿದ್ದಾನೆ. ವಿದ್ಯುತ್ ಕಂಬಕ್ಕೆ ಗ್ರೌಂಡಿಗ್ ಹಾಕದ ಪರಿಣಾಮ ವಿದ್ಯುತ್ ಸೋರಿಕೆಯಾಗಿದ್ದು ಬೆಸ್ಕಾಂ ಅಧಿಕಾರಿಗಳ ನಿರ್ಲ್ಯಕ್ಷಕ್ಕೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನ ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ
ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ವಿಷಹಾರ ಸೇವಿಸಿ ಒಂದು ಹಸು ಸಾವನ್ನಪ್ಪಿದ್ದು, ಎರಡು ಹಸುವಿನ ಸ್ಥಿತಿ ಗಂಭೀರವಾಗಿದೆ. ರೈತ ಮಹದೇವ ಎಂಬುವರಿಗೆ ಸೇರಿದ ಒಂದೂವರೆ ಲಕ್ಷ ಬೆಲೆಯ ಹಸುಗಳಿಗೆ ದುಷ್ಕರ್ಮಿಗಳು ತಿನ್ನುವ ಆಹಾರದಲ್ಲಿ ವಿಷ ಹಾಕಿ ಹಸುವನ್ನ ಕೊಂದ ಶಂಕೆ ವ್ಯಕ್ತವಾಗಿದೆ. ತೀವ್ರ ಅಸ್ವಸ್ಥಗೊಂಡ ಹಸುಗಳಿಗೆ ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ