ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಅನಂತಕುಮಾರ ಹೆಗಡೆ ವಿರುದ್ಧ ಪೊಲೀಸ್ ಕಮಿಷನರ್‌ಗೆ ಲಿಖಿತ ದೂರು

ಸಿಎಂ ಸಿದ್ದರಾಮಯ್ಯ ಅವರಿಗೆ ಏಕವಚನದಲ್ಲಿ ವಾಗ್ದಾಳಿ ವಿಚಾರವಾಗಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ದ ನಗರದ ಪೊಲೀಸ್ ಕಮಿಷನರ್‌ಗೆ ಡಿಸಿಪಿ ಮುತ್ತುರಾಜ್ ಮೂಲಕ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಲಿಖಿತ ದೂರು ನೀಡಿದ್ದಾರೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇವರನ್ನು ಚುನಾವಣೆ ಮುಗಿಯುವವರೆಗೆ ಬಂಧಿಸಬೇಕು ಎಂದು ದೂರಿನಲ್ಲಿ ಉಲೇಖಿಸಲಾಗಿದೆ. 

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಅನಂತಕುಮಾರ ಹೆಗಡೆ ವಿರುದ್ಧ ಪೊಲೀಸ್ ಕಮಿಷನರ್‌ಗೆ ಲಿಖಿತ ದೂರು
ಅನಂತಕುಮಾರ ಹೆಗಡೆ, ಸಿಎಂ ಸಿದ್ದರಾಮಯ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 14, 2024 | 10:55 PM

ಮೈಸೂರು, ಜನವರಿ 14: ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಏಕವಚನದಲ್ಲಿ ವಾಗ್ದಾಳಿ ವಿಚಾರವಾಗಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ದ ನಗರದ ಪೊಲೀಸ್ ಕಮಿಷನರ್‌ಗೆ ಡಿಸಿಪಿ ಮುತ್ತುರಾಜ್ ಮೂಲಕ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಲಿಖಿತ ದೂರು ನೀಡಿದ್ದಾರೆ. ಅನಂತ ಕುಮಾರ್ ಹೆಗಡೆ ಕೋಮು ಸಂಘರ್ಷಕ್ಕೆ ಪ್ರಚೋದಿಸುತ್ತಿದ್ದಾರೆ. ಸಮುದಾಯಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಎಂ. ಲಕ್ಷ್ಮಣಗೆ ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಡಾ. ಬಿ.ಜೆ ವಿಜಯಕುಮಾರ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

ದೂರಿನಲ್ಲೇನಿದೆ?

ಜನವರಿ 13ರಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕುಮಟಾದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯನವರನ್ನು ಏಕವಚನದಲ್ಲಿ ನಿಂದಿಸುವುದಲ್ಲದೆ ಪ್ರಚೋದಿಸುವ ಮಾಡಿದ್ದಾರೆ. ಹಿಂದೂ ಸಮಾಜವನ್ನು ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಮುರುಕುರಾಮಯ್ಯ ಅಂಥವರು ಒಡೆಯುತ್ತಿದ್ದಾರೆ ಎಂದು ಆಧಾರರಹಿತ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮವಾಗಲಿದೆ: ಸಂಸದ ಅನಂತಕುಮಾರ್ ಹೆಗಡೆ

ನಮ್ಮ ವಿರೋಧಿ ಸಿದ್ದರಾಮಯ್ಯ ಹೊರತು ಕಾಂಗ್ರೆಸ್ ಅಲ್ಲ. ಅಲ್ಪಸಂಖ್ಯಾತರ ಮತಗಳಿಗಾಗಿ ಗತಿಗೆಟ್ಟ ಮಾನಸಿಕತೆಗೆ ನಮ್ಮ ವಿರೋಧವಿದೆ. ಇದಲ್ಲದೇ ಭಟ್ಕಳದ ಚಿನ್ನದಪಳ್ಳಿ ಮಸೀದಿ ಧ್ವಂಸ ಮಾಡುವುದಾಗಿ ಹೇಳಿದ್ದಾರೆ. ಅನಂತಕುಮಾರ್ ಹೆಗಡೆಯವರು “ಸಿದ್ದರಾಮಯ್ಯ ನೀ ಬರ್ಲಿ ಬಿಡ್ಲಿ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ” ಎಂದು ನಿಂದಿಸಿದ್ದಾರೆ. ಇವರು ನಿರಂತರವಾಗಿ ಸಿದ್ದರಾಮಯ್ಯನವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುತ್ತಾರೆ.

ಇದನ್ನೂ ಓದಿ: ಪ್ರಚೋದನಾಕರಿ ಹೇಳಿಕೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುವೋಟೊ ಕೇಸ್ ದಾಖಲು

ಈಗ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಪ್ರಚೋದಿಸುತ್ತಿದ್ದಾರೆ. ರಾಜ್ಯದಲ್ಲಿ ಸಮುದಾಯಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಬಿಜೆಪಿ ಬಂದಿರುವುದೇ ದೇಶದಲ್ಲಿ ಸಂವಿಧಾನ ಬದಲಾವಣೆಯನ್ನು ಮಾಡುವುದಕ್ಕಾಗಿ ಎಂದು ಹೇಳಿದ್ದರು. ಆದ್ದರಿಂದ ಕೂಡಲೇ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇವರನ್ನು ಚುನಾವಣೆ ಮುಗಿಯುವವರೆಗೆ ಬಂಧಿಸಬೇಕು ಎಂದು ದೂರಿನಲ್ಲಿ ಉಲೇಖಿಸಲಾಗಿದೆ.

ಅನಂತಕುಮಾರ ಹೆಗಡೆ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಖಂಡಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿಯ ಅಂಬೇಡ್ಕರ್ ವೃತ್ತದಲ್ಲಿ ಅನಂತಕುಮಾರ ಹೆಗಡೆ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟನೆ ಮಾಡಿದ್ದಾರೆ. ಉತ್ತರ ಕನ್ನಡ ಬಿಜೆಪಿ ಸಂಸದ ಹೆಗಡೆ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದು, ಅನಂತಕುಮಾರ ಹೆಗಡೆ ಬಂಧಿಸುವಂತೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ