ದೇವೇಗೌಡರು ಜೆಡಿಎಸ್​ನಿಂದ ಉಚ್ಚಾಟನೆ ಮಾಡಿಕ್ಕೆ ಕಾಂಗ್ರೆಸ್ ಸೇರಬೇಕಾಯ್ತು: ಸಿಎಂ ಸಿದ್ದರಾಮಯ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 16, 2023 | 6:58 PM

ಮೈಸೂರಿನ ಕನಕ ಭವನದಲ್ಲಿ ಕಾಗಿನೆಲೆ ಮಹಾಸಂಸ್ಥಾನದಿಂದ ಆಯೋಜಿಸಿದ ನೂತನ ಶಾಸಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, 2005ರಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಜೆಡಿಎಸ್​ನಿಂದ ಉಚ್ಚಾಟನೆ ಮಾಡಿದರು. ಬಳಿಕ ನಾನು ಅನಿವಾರ್ಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಬೇಕಾಯಿತು. ಜನರ ಆಶೀರ್ವಾದದಿಂದ 2ನೇ ಬಾರಿ ಸಿಎಂ ಆಗುವ ಅವಕಾಶ ಸಿಕ್ಕಿದೆ ಎಂದಿದ್ದಾರೆ.

ದೇವೇಗೌಡರು ಜೆಡಿಎಸ್​ನಿಂದ ಉಚ್ಚಾಟನೆ ಮಾಡಿಕ್ಕೆ ಕಾಂಗ್ರೆಸ್ ಸೇರಬೇಕಾಯ್ತು: ಸಿಎಂ ಸಿದ್ದರಾಮಯ್ಯ
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, ಸಿಎಂ ಸಿದ್ದರಾಮಯ್ಯ
Follow us on

ಮೈಸೂರು, ಅಕ್ಟೋಬರ್​​ 16: 2005ರಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಜೆಡಿಎಸ್​ನಿಂದ ಉಚ್ಚಾಟನೆ ಮಾಡಿದರು. ಬಳಿಕ ನಾನು ಅನಿವಾರ್ಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಬೇಕಾಯಿತು. ಕುರುಬ ಜಾತಿಯಲ್ಲಿ ಹುಟ್ಟಿರೋದು ಆಕಸ್ಮಿಕ. ನಮ್ಮ‌ ಜಾತಿಯವನು ಸಿಎಂ ಆಗಿದ್ದಾನೆ ಅಂತಾ ನಿಮಗೆ ಹೆಮ್ಮೆ ಇದೆ. ಜನರ ಆಶೀರ್ವಾದದಿಂದ 2ನೇ ಬಾರಿ ಸಿಎಂ ಆಗುವ ಅವಕಾಶ ಸಿಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ನಗರದ ಕನಕ ಭವನದಲ್ಲಿ ಕಾಗಿನೆಲೆ ಮಹಾಸಂಸ್ಥಾನದಿಂದ ಆಯೋಜಿಸಿದ ನೂತನ ಶಾಸಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಜಾತ್ಯತೀತವಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ರಾಜಕೀಯ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ

ಎಲ್ಲಾ ಸಮುದಾಯಕ್ಕೂ ನಾನು ಗೌರವ ಕೊಡುತ್ತೇನೆ. ನೊಂದ ಸಮುದಾಯಕ್ಕೆ ನ್ಯಾಯ ಕೊಡಲು ಪ್ರಯತ್ನ ಮಾಡುತ್ತೇನೆ. ಎಲ್ಲಾ ಜಾತಿಗಳಿಗೂ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದು, ನಿಮ್ಮ ಆಶೀರ್ವಾದದಿಂದ ಈ ರೀತಿ ಕೆಲಸ ಮಾಡಲು ಸಾಧ್ಯವಾಗಿದೆ. ರಾಜಕೀಯ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ. ಆರೋಪವೇ ಬೇರೆ ಇರುತ್ತೆ, ಸತ್ಯವೇ ಬೇರೆ ಇರುತ್ತೆ. ಆ ಆರೋಪಗಳಿಗೆ ನಾನು ಏನು ಮಾಡುವುದಕ್ಕೆ ಆಗಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ ಆರೋಪ

ನಾವು ಉಚಿತ ಬಸ್ ಪ್ರಯಾಣ ಮಾಡಿರುವುದರಿಂದ ಮಹಿಳೆಯರು 70 ಕೋಟಿಗೂ ಹೆಚ್ಚು ಪ್ರಯಾಣ ಮಾಡಿದ್ದಾರೆ. ನಮ್ಮ‌ ಗ್ಯಾರಂಟಿ ಯೋಜನೆಗಳಿಂದ 4-5 ಸಾವಿರ ರೂ. ಹಣ ಪ್ರತಿಯೊಬ್ಬರಿಗೂ ಸಿಗುತ್ತಿದೆ. ವರ್ಷಕ್ಕೆ 50-60 ಸಾವಿರ ರೂ. ಪ್ರತಿಯೊಬ್ಬರಿಗೂ ಸಿಗುತ್ತಿದೆ. ಹಿಂದೆ ಯಾರು ಇಂತಹ ಕೆಲಸ ಮಾಡಿರಲಿಲ್ಲ. ಇದರಿಂದ‌ ಹಳ್ಳಿಗಾಡಿನ ಜನ ಹಾಗೂ ಬಡವರು ನೆಮ್ಮದಿ‌ ಜೀವನ ಮಾಡುತ್ತಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿದೆಯೇ ವಿದ್ಯುತ್ ಕೊರತೆ? ಅಧಿಕಾರಿಗಳ ಜತೆಗಿನ ಸಭೆಯ ಬಳಿಕ ಸಚಿವ ಕೆಜೆ ಜಾರ್ಜ್ ನೀಡಿದ ಮಾಹಿತಿ ಇಲ್ಲಿದೆ

ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕೊರತೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗಿರುವುದು ನಿಜ. ರೈತರ ಪಂಪ್​ಸೆಟ್​ಗಳಿಗೆ ನಿತ್ಯ 5 ಗಂಟೆ ತ್ರಿಫೇಸ್ ವಿದ್ಯುತ್​ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಮತ್ತು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ಆಗಿರಲಿಲ್ಲ. ಹೀಗಾಗಿ ರಾಜ್ಯದಲ್ಲಿ ವಿದ್ಯುತ್ ಕೊರತೆ ಉಂಟಾಗಿದೆ. ರಾಜ್ಯದಲ್ಲಿ 2000 ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.