ಮೈಸೂರು: ಹುಚ್ಚುನಾಯಿಗಳ ದಾಳಿ; 35ಕ್ಕೂ ಹೆಚ್ಚು ಜನರಿಗೆ ಗಾಯ

| Updated By: ganapathi bhat

Updated on: Mar 03, 2022 | 7:59 AM

ಪಾದಾಚಾರಿಗಳನ್ನು ಕಚ್ಚಿದ ಹುಚ್ಚು ನಾಯಿಗಳ ಗುಂಪು, 35ಕ್ಕೂ ಅಧಿಕ ಜನರನ್ನು ಕಚ್ಚಿ ಪರಾರಿಯಾಗಿವೆ. ನಾಯಿಗಳ ಉಪಟಳದಿಂದ ಸಾರ್ವಜನಿಕರು ಬಹಳ ತೊಂದರೆಗೆ ಒಳಗಾಗಿದ್ದಾರೆ. ಘಟನೆ ಬೆನ್ನಲ್ಲೇ ನಾಯಿಗಳ ಹಾವಳಿ ತಡೆಯುವಂತೆ ಸಾರ್ವಜನಿಕರ ಒತ್ತಾಯ ಕೇಳಿಬಂದಿದೆ.

ಮೈಸೂರು: ಹುಚ್ಚುನಾಯಿಗಳ ದಾಳಿ; 35ಕ್ಕೂ ಹೆಚ್ಚು ಜನರಿಗೆ ಗಾಯ
ಪ್ರಾತಿನಿಧಿಕ ಚಿತ್ರ
Follow us on

ಮೈಸೂರು: ಹುಚ್ಚು ನಾಯಿಗಳ ದಾಳಿಗೆ 35ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಜಿಲ್ಲೆಯ ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ನಡೆದಿದೆ. ಹುಚ್ಚು ನಾಯಿಗಳ ದಾಳಿಯಿಂದ ಶಾಲಾ ಮಕ್ಕಳು ಸೇರಿದಂತೆ 35ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಗಾಯಗೊಂಡವರಿಗೆ ಸದ್ಯ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಲಾ ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾದಾಚಾರಿಗಳನ್ನು ಕಚ್ಚಿದ ಹುಚ್ಚು ನಾಯಿಗಳ ಗುಂಪು, 35ಕ್ಕೂ ಅಧಿಕ ಜನರನ್ನು ಕಚ್ಚಿ ಪರಾರಿಯಾಗಿವೆ. ನಾಯಿಗಳ ಉಪಟಳದಿಂದ ಸಾರ್ವಜನಿಕರು ಬಹಳ ತೊಂದರೆಗೆ ಒಳಗಾಗಿದ್ದಾರೆ. ಘಟನೆ ಬೆನ್ನಲ್ಲೇ ನಾಯಿಗಳ ಹಾವಳಿ ತಡೆಯುವಂತೆ ಸಾರ್ವಜನಿಕರ ಒತ್ತಾಯ ಕೇಳಿಬಂದಿದೆ.

ಹೊನ್ನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದೇ ಜನ ಪರದಾಟ

ಇತ್ತ ತುಮಕೂರು ಜಿಲ್ಲೆಯ, ಹೊನ್ನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದೇ ಜನ ಪರದಾಟ ಪಟ್ಟ ಘಟನೆ ನಡೆದಿದೆ. ವೈದ್ಯರು ಇಲ್ಲದ ಕಾರಣ ಅಪಘಾತವಾಗಿ ಬಂದಿದ್ದ ವ್ಯಕ್ತಿ ನರಳಾಡುವ ಸ್ಥಿತಿ ಬಂದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಯೂ ಇಲ್ಲದೇ ಸಂಕಷ್ಟ ಎದುರಾಗಿದೆ. ಅಪಘಾತ ಪ್ರಕರಣಗಳನ್ನು ನೋಡದೇ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ.

ನರ್ಸ್ ನನ್ನ‌ ಡ್ಯೂಟಿ ಮುಗಿದಿದೆ, ಬೀಗ ಇಲ್ಲ ಅಂತಾ ನಿರ್ಲಕ್ಷ್ಯ ತೋರಿರುವ ಆರೋಪ ಕೇಳಿಬಂದಿದೆ. ಹೀಗಾಗಿ, ವ್ಯಕ್ತಿ ಆರೋಗ್ಯ ಕೇಂದ್ರದ ಮುಂದೆಯೇ ವ್ಯಕ್ತಿಯ ನರಳಾಡುವಂತಾಗಿದೆ. ಅಪಘಾತವಾಗಿ ತಲೆಗೆ ಹಾಗೂ ಕಾಲುಗಳಿಗೆ ಗಾಯವಾಗಿತ್ತು. ಬಳಿಕ ತಿಪಟೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹೊನ್ನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಆಸ್ಪತ್ರೆ ವಿರುದ್ಧ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಮೈಸೂರು: ಜಿಂಕೆ ಮರಿ‌ ಬೇಟೆ ಆಡಿದ ಚಿರತೆ; ಕ್ಯಾಮೆರಾದಲ್ಲಿ ಸೆರೆಯಾದ ಭಯಾನಕ ದೃಶ್ಯ ನೋಡಿ

ಇದನ್ನೂ ಓದಿ: ಆನ್‌ಲೈನ್ ಮೂಲಕ ವಂಚಿಸುತ್ತಿದ್ದವರ ಬ್ಯಾಂಕ್ ಖಾತೆ ಫ್ರೀಜ್; 4 ಪ್ರಕರಣಗಳ ಭೇದಿಸಿ ಹಣ ಮರುಪಾವತಿ ಮಾಡಿದ ಮೈಸೂರು ಸೈಬರ್ ಕ್ರೈಂ ಪೊಲೀಸ್