ಸ್ವಾಮೀಜಿಗಳು ತಲೆಯ ಮೇಲೆ ಬಟ್ಟೆ ಹಾಕುವುದನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯರನ್ನ ಸಮರ್ಥಿಸಿಕೊಂಡ ಪುತ್ರ ಡಾ. ಯತೀಂದ್ರ

ಇದೀಗ ಸಿದ್ದರಾಮಯ್ಯ ಅವರ ಪುತ್ರ  ಯತೀಂದ್ರ ತಮ್ಮ ತಂದೆಯ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದುಪಟ್ಟಾವನ್ನು ಸ್ವಾಮೀಜಿಗಳ ಶಿರವಸ್ತ್ರಕ್ಕೆ ಹೋಲಿಕೆ ಮಾಡಿಲ್ಲ. ತಲೆ ಮೇಲೆ ಬಟ್ಟೆ ಹಾಕುವುದು ತಪ್ಪಲ್ಲ ಎಂದು ಹೇಳಿದ್ದಾರಷ್ಟೇ. ಸಿದ್ದರಾಮಯ್ಯ ಸ್ವಾಮೀಜಿಗಳಿಗೆ ಅಪಮಾನ ಮಾಡಿಲ್ಲ ಎಂದು ಹೇಳಿದ್ದಾರೆ.

ಸ್ವಾಮೀಜಿಗಳು ತಲೆಯ ಮೇಲೆ ಬಟ್ಟೆ ಹಾಕುವುದನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯರನ್ನ ಸಮರ್ಥಿಸಿಕೊಂಡ ಪುತ್ರ ಡಾ. ಯತೀಂದ್ರ
ಡಾ. ಯತೀಂದ್ರ
Follow us
TV9 Web
| Updated By: preethi shettigar

Updated on:Mar 26, 2022 | 3:17 PM

ಮೈಸೂರು: ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್(High court)​ ನೀಡಿರುವ ತೀರ್ಪಿಗೆ ವಿರುದ್ಧವಾಗಿ ನಿನ್ನೆ (ಮಾರ್ಚ್ 25) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಸ್ವಾಮೀಜಿಗಳು ತಲೆಯ ಮೇಲೆ ಪೇಟಾ ಹಾಕುವುದಿಲ್ಲವಾ? ಎಂದು ಮಾತಿನ ಭರದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಾತು ರಾಜ್ಯದಾದ್ಯಂತ ವಿವಾದ ಸೃಷ್ಟಿ ಮಾಡಿದ್ದು, ಇದೀಗ ಸಿದ್ದರಾಮಯ್ಯ (Siddaramaiah) ಅವರ ಪುತ್ರ ಡಾ. ಯತೀಂದ್ರ (Dr Yatindra) ತಮ್ಮ ತಂದೆಯ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದುಪಟ್ಟಾವನ್ನು ಸ್ವಾಮೀಜಿಗಳ ಶಿರವಸ್ತ್ರಕ್ಕೆ ಹೋಲಿಕೆ ಮಾಡಿಲ್ಲ. ತಲೆ ಮೇಲೆ ಬಟ್ಟೆ ಹಾಕುವುದು ತಪ್ಪಲ್ಲ ಎಂದು ಹೇಳಿದ್ದಾರಷ್ಟೇ. ಸಿದ್ದರಾಮಯ್ಯ ಸ್ವಾಮೀಜಿಗಳಿಗೆ ಅಪಮಾನ ಮಾಡಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹೇಳಿಕೆ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಹಿಜಾಬ್ ಇಲ್ಲದೆ ಪರೀಕ್ಷೆಗೆ ಬರುತ್ತಿಲ್ಲ. ಹಿಜಾಬ್ ಬದಲಿಗೆ ದುಪಟ್ಟಾಗೆ ಅವಕಾಶ ಕೇಳಿದ್ದಾರೆ. ಇದನ್ನು ವಿಧಾನಸಭೆಯಲ್ಲೂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದರು. ಇದರಲ್ಲಿ ತಪ್ಪೇನಿದೆ ಎಂದು ಕಾಂಗ್ರೆಸ್ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರಶ್ನೆ ಕೇಳಿದ್ದಾರೆ.

ಸ್ವಾಮೀಜಿಗಳ ಬಟ್ಟೆ ಹಿಜಾಬ್​ಗೆ  ಹೋಲಿಸಿದ ತಮ್ಮ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್​ ಮೂಲಕ ಸ್ಪಷ್ಟನೆ 

ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ವಿರೋಧಿಗಳು ದುರುದ್ದೇಶದಿಂದ ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕೆಲ ಶ್ರೀಗಳಿಗೆ ಇದು ಅರ್ಥವಾಗಿರುವ ಕಾರಣ ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ. ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಟ್ವೀಟ್​ ಮಾಡಿದ್ದಾರೆ.

ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಟ್ವೀಟ್​ ಮೂಲಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ:

ಹಿಜಾಬ್ ವಿಚಾರಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಹುಚ್ಚು ನಾಯಿಯಂತೆ ಕೂಗುತ್ತಿದೆ, ಸಿದ್ದರಾಮಯ್ಯ ತಕ್ಷಣ ರಾಜಕೀಯ ನಿವೃತ್ತಿ ಪಡೆಯಲಿ; ಸಚಿವ ಈಶ್ವರಪ್ಪ ಹೇಳಿಕೆ

ಸ್ವಾಮೀಜಿಗಳ ಬಟ್ಟೆ ಹಿಜಾಬ್​​ಗೆ ಹೋಲಿಸಿ ಹೇಳಿಕೆ ವಿಚಾರ: ಟ್ವೀಟ್​ ಮಾಡಿ, ಅಪಪ್ರಚಾರವೆಂದ ವಿಪಕ್ಷ ನಾಯಕ ಸಿದ್ದರಾಮಯ್ಯ!

Published On - 3:10 pm, Sat, 26 March 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ