ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಸಿಎಂ ಚಾಲನೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 24, 2023 | 5:34 PM

ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಿದ್ದಾರೆ. ಸತತ 4ನೇ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಸಾಗುತ್ತಿದೆ. ಇನ್ನು ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ ಹಾಗೂ ವಿಜಯಾ ಸಾಥ್ ನೀಡುತ್ತಿವೆ. ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆ ನಡೆಯಲಿದೆ.

ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಸಿಎಂ ಚಾಲನೆ
ಜಂಬೂಸವಾರಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
Follow us on

ಮೈಸೂರು, ಅ.24: ನಾಡಹಬ್ಬ ದಸರಾ (Dasara) ಜಂಬೂಸವಾರಿ(Jamboo Savari)ಗೆ ಚಾಮುಂಡಿಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಇದೀಗ ಚಾಲನೆ ನೀಡಿದ್ದಾರೆ. ಇನ್ನು ದಸರಾವನ್ನು ರಾಜ್ಯಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದರಂತೆ ಮೈಸೂರಿನಲ್ಲಿ ದಸರಾ ಹಬ್ಬವನ್ನು ವೈಭವಪೂರಿತವಾಗಿ ಆಚರಿಸಲಾಗುತ್ತಿದ್ದು, ಕಳೆದ 9 ದಿನಗಳಿಂದ ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಗುತ್ತಿದೆ.

ಸತತ 4ನೇ ಬಾರಿ ಅಂಬಾರಿ ಹೊತ್ತು ಸಾಗುತ್ತಿದೆ ಅಭಿಮನ್ಯು

ಹೌದು, ಸತತ 4ನೇ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಸಾಗುತ್ತಿದೆ. ಇನ್ನು ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ ಹಾಗೂ ವಿಜಯಾ ಸಾಥ್ ನೀಡುತ್ತಿವೆ. ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ ಬರೊಬ್ಬರಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿದ್ದು, ಲಕ್ಷಾಂತರ ಜನರು ದಸರಾ ಜಂಬೂಸವಾರಿಗೆ ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿ:Jamboo Savari 2023 Live: ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ, ಕುಳಿತಲ್ಲೇ ಕಣ್ತುಂಬಿಕೊಳ್ಳಿ

ಸುಮಾರು 4 ರಿಂದ 5 ಕಿಲೋ ಮೀಟರ್ ನಡೆಯಲಿರುವ ಜಂಬೂಸವಾರಿ

ಅರಮನೆಯಿಂದ ಶುರುವಾದ ಜಂಬೂ ಸವಾರಿ, ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್‌, ತಿಲಕ್ ನಗರ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. ಸುಮಾರು 4 ರಿಂದ 5 ಕಿಲೋ ಮೀಟರ್ ಈ ಸವಾರಿ ನಡೆಯಲಿದೆ.

ಜಂಬೂಸವಾರಿಗೆ 9 ನಿಮಿಷ ತಡವಾಗಿ ನೆರವೇರಿದ ಪುಷ್ಪಾರ್ಚನೆ

ನಿಗದಿತ ಸಮಯಕ್ಕಿಂತ ತಡವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಲಾಗಿದೆ. 4.40 ರಿಂದ 5 ಗಂಟೆಯ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಉಪ್ಪಾರ್ಚನೆ ಆಗಬೇಕಿತ್ತು. ಆದರೆ, ನಿಗದಿತ ಸಮಯಕ್ಕೆ ಪುಷ್ಪಾರ್ಚನೆ‌ ಆಗದೆ 5.9 ನಿಮಿಷಕ್ಕೆ, ಅಂದರೆ 9 ನಿಮಿಷ ತಡವಾಗಿ ಪುಷ್ಪಾರ್ಚನೆ ನೆರವೇರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Tue, 24 October 23