ರಾಜ್ಯದಲ್ಲಿ ಬರದ ಛಾಯೆ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ, ಸರಳವಾಗಿ ಮೈಸೂರು ದಸರಾ ಆಚರಿಸಲು ಚಿಂತನೆ
ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಹಿನ್ನೆಲೆ ಮಂಡ್ಯದಲ್ಲಿ ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವುದರಿಂದ ಸಮ್ಮೇಳನ ಮುಂದೂಡಲಾಗಿದೆ.
ಮೈಸೂರು ಸೆ.16: ಈ ಬಾರಿ ಮುಂಗಾರು (Monsoon) ಮಳೆ ಕೈಕೊಟ್ಟಿದೆ. ವಾಡಿಕೆಯಷ್ಟು ಮಳೆಯಾಗದೆ (Rain) ರಾಜ್ಯ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಇಲ್ಲಿದೆ ಜಲಾಶಯಗಳು, ಹಳ್ಳ-ಕೊಳ್ಳಗಳು ಒಣಗುತ್ತಿವೆ. ಹೀಗೆ ಮುಂದುವರೆದರೇ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಪರದಾಡುವಂತ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಘೋಷಿಸಿರುವ ಪ್ರಕಾರ ಕರುನಾಡಿನ 195 ತಾಲೂಕುಗಳಲ್ಲಿ ಬರದ (Drought) ಛಾಯೆ ಆವರಿಸಿದೆ. ಇದೀಗ ದಸರಾ ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೂ ಬರದ ಛಾಯೆ ಆವರಿಸಿದೆ.
ಹೌದು ಭೀಕರ ಬರಗಾಲ ಪರಿಸ್ಥಿತಿ ಹಿನ್ನೆಲೆ ಮಂಡ್ಯದಲ್ಲಿ ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವುದರಿಂದ ಸಮ್ಮೇಳನ ಮುಂದೂಡಲಾಗಿದೆ. ಜೊತೆಗೆ ಹಂಪಿ ಉತ್ಸವ ಆಯೋಜನೆಗೂ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಸರ್ಕಾರದ ಮೂಲಗಳಿಂದ ಮಾಹಿತಿ ದೊರೆತಿದೆ.
ಇದನ್ನೂ ಓದಿ: ಮೈಸೂರು ದಸರಾ ಮಹೋತ್ಸವ 2023: ನವರಾತ್ರಿ ಆಚರಣೆಯ ವೇಳಾಪಟ್ಟಿ ಬಿಡುಗಡೆ; ಇಲ್ಲಿದೆ ವಿವರ
ಈ ಹಿಂದೆ ಬರಗಾಲ ಎದುರಾದಾಗ ಸರ್ಕಾರ ಸರಳವಾಗಿ ದಸರಾ ಆಚರಣೆ ಮಾಡಿತ್ತು. ಹೀಗಾಗಿ ಈ ಬಾರಿಯೂ ಸರಳವಾಗಿ ದಸರಾ ಆಚರಣೆ ಮಾಡಲಾಗುತ್ತಾ ಎಂಬ ಚರ್ಚೆ ಉದ್ಭವವಾಗಿದೆ. ಈ ಬಗ್ಗೆ ಸರ್ಕಾರ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ದಸರಾ ಆಚರಣೆಗೆ ಮೈಸೂರು ಜಿಲ್ಲಾಡಳಿತ ಸರ್ಕಾರಕ್ಕೆ 30 ಕೋಟಿ ರೂ. ಅನುದಾನ ಕೇಳಿದೆ.
ಈ ಹಿಂದೆ ಸರಳವಾಗಿ ದಸರಾ ನಡೆಸಿದ್ದ ಇತಿಹಾಸ
- 2000- ಡಾ.ರಾಜ್ ಕುಮಾರ್ ಅಪಹರಣದ ವೇಳೆ
- 2001 – ಗುಜರಾತ್ ಭೂಕಂಪ
- 2002 – ರಾಜ್ಯದಲ್ಲಿ ಬರ ಪರಿಸ್ಥಿತಿ
- 2011, 2012 – ಬರಗಾಲ
- 2015, 2016 – ಬರ, ರೈತರ ಆತ್ಮಹತ್ಯೆ
- 2020, 2021 – ಕೊರೊನಾ ಕರಿನೆರಳು, ಈ ವೇಳೆ ಸರಳವಾಗಿ ದಸರಾ ಆಚರಣೆ ಮಾಡಲಾಗಿತ್ತು.
195 ತಾಲೂಕುಗಳು ಬರ
ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ, ಸಂಪುಟ ಉಪಸಮಿತಿ ಶಿಫಾರಸಿನ ಅನುಸಾರ 2023ನೇ ಸಾಲಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಇನ್ನೂ 195 ತಾಲ್ಲೂಕುಗಳ ಪೈಕಿ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳಿವೆ. ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ಘೋಷಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:59 pm, Sat, 16 September 23