AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮುಂದುವರಿದ ಡ್ರಗ್ ಬೇಟೆ: ಮಾದಕವಸ್ತು ಸಾಗಿಸುತ್ತಿದ್ದ ನಾಲ್ವರ ಬಂಧನ

ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ತೀವ್ರಗೊಂಡಿದ್ದು, 10.3 ಲಕ್ಷ ರೂ. ಮೌಲ್ಯದ 103 ಗ್ರಾಂ MDMA ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ಸಾಗಾಟ ಹಾಗೂ ಮಾರಾಟ ಮಾಡುವವರ ವಿರುದ್ಧ ಪೊಲೀಸರು ವ್ಯಾಪಕ ಕ್ರಮ ಕೈಗೊಳ್ಳುತ್ತಿದ್ದು, ಅನೇಕ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಮೈಸೂರಿನಲ್ಲಿ ಮುಂದುವರಿದ ಡ್ರಗ್ ಬೇಟೆ: ಮಾದಕವಸ್ತು ಸಾಗಿಸುತ್ತಿದ್ದ ನಾಲ್ವರ ಬಂಧನ
ಪೊಲೀಸರು ವಶಕ್ಕೆ ಪಡೆದಿರುವ ಎಂಡಿಎಂಎ ಹಾಗೂ ಆರೋಪಿಗಳುImage Credit source: tv9
ರಾಮ್​, ಮೈಸೂರು
| Edited By: |

Updated on: Feb 24, 2026 | 7:03 AM

Share

ಮೈಸೂರು, ಫೆಬ್ರವರಿ 24: ಮೈಸೂರು (Mysuru) ನಗರದಲ್ಲಿ ಡ್ರಗ್ ಹಾವಳಿ ಇನ್ನೂ ನಿಂತಿಲ್ಲ. ಮಹಾರಾಷ್ಟ್ರ ಪೊಲೀಸರು ಬಂದು ಕಾರ್ಯಾಚರಣೆ ನಡೆಸಿದ ನಂತರ ಪದೇಪದೆ ಪೊಲೀಸರು ದಾಳಿ ನಡೆಸಿ ಡ್ರಗ್ಸ್ ಹಾಗೂ ಪೂರೈಕೆ ಮಾಡುತ್ತಿರುವ ಆರೋಪಿಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಇದೀಗ ಸೋಮವಾರ ಮೈಸೂರು ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಳಿ ಮಾಡಿರುವ ಪೊಲೀಸರು, 10.30 ಲಕ್ಷ ರೂ. ಮೌಲ್ಯದ 103 ಗ್ರಾಂ ಎಂಡಿಎಂಎ ವಶಕ್ಕೆ ಪಡೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಜಿಯಾವುಲ್ಲಾ, ಜಾವೇದ್ ಅಹ್ಮದ್, ಸೋಹೆಲ್, ನೂಯೇದ್ ಎಂದು ಗುರುತಿಸಲಾಗಿದೆ.

ಆರೋಪಿಗಳ ಬಳಿಯಿಂದ ಇನ್ನೋವಾ ಕಾರು, 5 ಮೊಬೈಲ್​ಗಳನ್ನೂ ಜಪ್ತಿ ಮಾಡಲಾಗಿದೆ.

ಮೈಸೂರಿನಲ್ಲಿ ಇತ್ತೀಚಿನ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಗಳ ವಿವರ

2026 ಫೆಬ್ರವರಿ 17: ಸಿಸಿಬಿ ಪೊಲೀಸರು ಬೆಂಗಳೂರು ಮೂಲದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ, ಅವರಿಂದ 6.35 ಲಕ್ಷ ರೂ. ಮೌಲ್ಯದ ಎಂಡಿಎಂಎ ಮತ್ತು ಗಾಂಜಾವನ್ನು ವಶಪಡಿಸಿಕೊಂಡಿದ್ದರು.

2026 ಫೆಬ್ರವರಿ 15: ಮಂಡಿ ಪೊಲೀಸರು ಮೊಹಮ್ಮದ್ ರೋಷನ್ ಎಂಬಾತನನ್ನು ಬಂಧಿಸಿ 4 ಲಕ್ಷ ರೂ. ಮೌಲ್ಯದ 41 ಗ್ರಾಂ ಎಂಡಿಎಂಎ ಜಪ್ತಿ ಮಾಡಿದ್ದರು. ಈತ ಬೆಂಗಳೂರಿನಿಂದ ಡ್ರಗ್ಸ್ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

2026 ಫೆಬ್ರವರಿ 12: ಮೈಸೂರು ನಗರದಲ್ಲಿ ಡ್ರಗ್ಸ್ ಜಾಲದ ವಿರುದ್ಧ ಸಿಸಿಬಿ ಮತ್ತು ಮಂಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದರು. ಒಟ್ಟು 3 ಪ್ರಕರಣಗಳಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ವಶಕ್ಕೆ ಪಡೆದಿದ್ದರು.

2026 ಫೆಬ್ರವರಿ 7: ಸಾತಗಳ್ಳಿ ಬಳಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿ 1.20 ಲಕ್ಷ ರೂ. ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿತ್ತು.

2026 ಜನವರಿ 30: ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಘಟಕ (NCB) ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ರಹಸ್ಯವಾಗಿ ನಡೆಯುತ್ತಿದ್ದ ಹೈಟೆಕ್ ಡ್ರಗ್ಸ್ ತಯಾರಿಕಾ ಘಟಕವನ್ನು ಪತ್ತೆಹಚ್ಚಿ, ಕೋಟ್ಯಂತರ ರೂ. ಮೌಲ್ಯದ ಮಾದಕವಸ್ತುವನ್ನು ಜಪ್ತಿ ಮಾಡಿತ್ತು. ಇದು ಇಡೀ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿತ್ತು.

ಇದನ್ನೂ ಓದಿ: ಮಾದಕವಸ್ತು ಮುಕ್ತ ಮೈಸೂರು: 3 ಕಡೆ ದೊಡ್ಡ​​ ಕಾರ್ಯಾಚರಣೆ ನಡೆಸಿದ ಪೊಲೀಸರು, 5 ಜನರ ಬಂಧನ

ಮೈಸೂರು ನಗರ ಈಗ ಡ್ರಗ್ಸ್ ಮಾರಾಟದ ತಾಣವಷ್ಟೇ ಅಲ್ಲದೆ, ತಯಾರಿಕಾ ತಾಣವಾಗಿಯೂ ಬದಲಾಗುತ್ತಿರುವುದು ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ